ನವದೆಹಲಿ: ತೀವ್ರ ಉಸಿರಾಟದ ಸಮಸ್ಯೆಯಿಂದ ಕಳೆದ ತಡರಾತ್ರಿ ವಿಧಿವಶರಾದ ಮಾಜಿ ಪ್ರಧಾನಿ ಮನ ಮೋಹನ್ ಸಿಂಗ್ ಅವರ ಗೌರವಾರ್ಥ ನಾಳೆ ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ ಘೋಷಣೆ ಮಾಡಲಾಗಿದೆ.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ದೇಶದಲ್ಲಿ ಏಳು ದಿನ ಶೋಕಾಚರಣೆ ಘೋಷಣೆ ಮಾಡಲಾಗಿದೆ.
ಶೋಕಾಚರಣೆಯ ಅವಧಿಯು ಜನವರಿ 1, 2025ರಂದು ಕೊನೆಗೊಳ್ಳುತ್ತದೆ. ಶೋಕದ ಭಾಗವಾಗಿ ರಾಷ್ಟ್ರೀಯವಾಗಿ ಮತ್ತು ಜಾಗತಿಕವಾಗಿ ಎಲ್ಲಾ ಸರ್ಕಾರಿ ಕಟ್ಟಡಗಳಲ್ಲಿ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಇಳಿಸಲಾಗುತ್ತದೆ.
ಇನ್ನು ಕೇಂದ್ರ ಸರ್ಕಾರದ ಪ್ರಕಾರ ಕೇಂದ್ರ ಸರ್ಕಾರಿ ಕಚೇರಿಗಳಿಗೆ ಶನಿವಾರ ಅಂದರೆ ನಾಳೆ ಅರ್ಧ ರಜೆ ಇರುತ್ತದೆ.
ನಾಳೆ ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ನೆರವೇರಲಿರುವ ಹಿನ್ನೆಲೆಯಲ್ಲಿ ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳು ಮತ್ತು ಕೇಂದ್ರ ಸಾರ್ವಜನಿಕ ವಲಯದ ಸಂಸ್ಥೆಗಳಲ್ಲಿ ಅರ್ಧ ದಿನದ ರಜೆಯನ್ನು ಆಚರಿಸಲಾಗುತ್ತದೆ.
ನಾಳೆ ಬೆಳಿಗ್ಗೆ 8 ಗಂಟೆಗೆ ಮನ ಮೋಹನ್ ಸಿಂಗ್ ಅವರ ಪಾರ್ಥಿವ ಶರೀರವನ್ನು ಎಐಸಿಸಿ ಕೇಂದ್ ಕಚೇರಿಗೆ ತರಲಾಗುತ್ತದೆ. ಬಳಿಕ ಸಾರ್ವಜನಿಕರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಶ್ರದ್ಧಾಂಜಲಿ ಸಲ್ಲಿಸಲು ಅವಕಾಶವಿದೆ ಎಂದು ಕೆ.ಸಿ.ವೇಣುಗೋಪಾಲ್ ಹೇಳಿದ್ದಾರೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


