ಮೆಲ್ಬೋರ್ನ್: ಇಲ್ಲಿನ ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್‌ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವಿನ ಬಾರ್ಡರ್ – ಗವಾಸ್ಕರ್ ಟ್ರೋಫಿಯ ನಾಲ್ಕನೇ ಪಂದ್ಯ ನಡೆಯುತ್ತಿದ್ದು, ಎರಡನೇ ದಿನದಾಟದಂತ್ಯಕ್ಕೆ ಭಾರತ 310 ರನ್‌ಗಳ ಹಿನ್ನಡೆ ಅನುಭವಿಸಿದೆ.
ನಿನ್ನೆ ( ಡಿಸೆಂಬರ್ 27) ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿ ಮೊದಲ ದಿನದಾಟದಂತ್ಯಕ್ಕೆ 6 ವಿಕೆಟ್‌ಗೆ 311 ರನ್ ಕಲೆಹಾಕಿದ್ದ ಆಸ್ಟ್ರೇಲಿಯಾ ಎರಡನೇ ದಿನ ಸ್ವೀವ್ ಸ್ಮಿತ್ ಶತಕದ ನೆರವಿನಿಂದ 474 ರನ್ ಗಳಿಸಿ ಆಲ್‌ಔಟ್ ಆಯಿತು. ಅತ್ತ ತನ್ನ ಮೊದಲ ಇನ್ನಿಂಗ್ಸ್ ಆರಂಭಿಸಿದ ಭಾರತ ಎರಡನೇ ದಿನದಾಟದಂತ್ಯಕ್ಕೆ 164 ರನ್ ಗಳಿಸಿ 5 ವಿಕೆಟ್ ಕಳೆದುಕೊಂಡಿದೆ.
ಯಶಸ್ವಿ ಜೈಸ್ವಾಲ್ ಹೊರತುಪಡಿಸಿ ತಂಡದ ಟಾಪ್ ಆರ್ಡರ್ ಬ್ಯಾಟರ್‌ಗಳು ವಿಫಲರಾಗಿದ್ದು, ಸದ್ಯ ರಿಷಭ್ ಪಂತ್ ಹಾಗೂ ರವೀಂದ್ರ ಜಡೇಜಾ ಕ್ರೀಸ್ ಕಾಯ್ದುಕೊಂಡಿದ್ದಾರೆ.
ಭಾರತದ ಮೊದಲ ಇನ್ನಿಂಗ್ಸ್: ಯಶಸ್ವಿ ಜೈಸ್ವಾಲ್ 82, ರೋಹಿತ್ ಶರ್ಮಾ 3, ಕೆಎಲ್ ರಾಹುಲ್ 24, ವಿರಾಟ್ ಕೊಹ್ಲಿ 36, ಆಕಾಶ್ ದೀಪ್ 0, ರಿಷಭ್ ಪಂತ್ ಅಜೇಯ 6 ಮತ್ತು ರವೀಂದ್ರ ಜಡೇಜಾ ಅಜೇಯ 4 ರನ್ ಗಳಿಸಿದರು.
ಆಸ್ಟ್ರೇಲಿಯಾ ಪರ ಪ್ಯಾಟ್ ಕಮಿನ್ಸ್ ಹಾಗೂ ಸ್ಕಾಟ್ ಬೋಲ್ಯಾಂಡ್ ತಲಾ ಎರಡೆರಡು ವಿಕೆಟ್‌ಗಳನ್ನು ಪಡೆದರು.
ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್: ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ಸ್ಯಾಮ್ ಕೊನ್‌ಸ್ಟಾಸ್ 60 ಮತ್ತು ಉಸ್ಮಾನ್ ಖವಾಜಾ 57 ರನ್ ಗಳಿಸಿದರೆ, ಮಾರ್ನಸ್ ಲ್ಯಾಬುಸ್ಚಾಗ್ನೆ 72, ಟ್ರಾವಿಸ್ ಹೆಡ್ ಶೂನ್ಯ, ಮಿಚೆಲ್ ಮಾರ್ಷ್ 4, ಅಲೆಕ್ಸ್ ಕ್ಯಾರಿ 31, ಪ್ಯಾಟ್ ಕಮಿನ್ಸ್ 49, ಮಿಚೆಲ್ ಸ್ಟಾರ್ಕ್ 15, ನಾಥನ್ ಲಿಯಾನ್ 13, ಸ್ಟೀವ್ ಸ್ಮಿತ್ 140 ಮತ್ತು ಸ್ಕಾಟ್ ಬೋಲ್ಯಾಂಡ್ ಅಜೇಯ 6 ರನ್ ಗಳಿಸಿದರು.
ಭಾರತದ ಪರ ಜಸ್‌ಪ್ರೀತ್ ಬುಮ್ರಾ 4 ವಿಕೆಟ್, ರವೀಂದ್ರ ಜಡೇಜಾ ತಲಾ 3 ವಿಕೆಟ್, ಆಕಾಶ್ ದೀಪ್ 2 ವಿಕೆಟ್ ಹಾಗೂ ವಾಷಿಂಗ್ಟನ್ ಸುಂದರ್ 1 ವಿಕೆಟ್ ಪಡೆದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


