ಮಂಗಳೂರು: ಠಾಣೆಯಿಂದ ಸ್ಕೂಟರ್ ಬಿಡುಗಡೆಗೊಳಿಸಲು ಲಂಚ ಸ್ವೀಕರಿಸುತ್ತಿದ್ದ ಆರೋಪದ ಮೇಲೆ ನಗರದ ಉತ್ತರ ಸಂಚಾರ ಪೊಲೀಸ್ ಠಾಣೆಯ(North Traffic Police Station) ಇನ್‌ಸ್ಪೆಕ್ಟರ್ ಮಹಮ್ಮದ್ ಷರೀಫ್ ಹಾಗೂ ಸಿಬ್ಬಂದಿ ಪ್ರವೀಣ್ ನಾಯ್ಕನನ್ನು ಲೋಕಾಯುಕ್ತ(Lokayukta) ಪೊಲೀಸರು ಜನವರಿ 27 ಸೋಮವಾರ ಬಂಧಿಸಿದ್ದಾರೆ.ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಮಹಮ್ಮದ್ ಶರೀಫ್ ಕೆ. ಮತ್ತು ಪೊಲೀಸ್ ಸಿಬ್ಬಂದಿ ಪ್ರವೀಣ್ ಎಂಬುವವರೇ ಲೋಕಾಯುಕ್ತ ಬಲೆಗೆ ಬಿದ್ದವರು.ವ್ಯಕ್ತಿಯೊಬ್ಬರು ಸ್ಕೂಟರ್ ಅನ್ನು ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯಿಂದ ಬಿಡುಗಡೆಗೊಳಿಸಲು ನ್ಯಾಯಾಲಯದಿಂದ ಆದೇಶವಾಗಿದ್ದು, ಈ ಬಗ್ಗೆ ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಮುಹಮ್ಮದ್ ಶರೀಫ್ ರವರನ್ನು ಭೇಟಿ ಮಾಡಿದಾಗ ರೂ. 5000 ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಈ ವ್ಯಕ್ತಿ ಕಡಿಮೆ ಮಾಡಿ ಎಂದಾಗ ಪೊಲೀಸ್ ನಿರೀಕ್ಷಕರಾದ ಮಹಮ್ಮದ್ ಶರೀಫ್ ರವರು ಠಾಣಾ ರೈಟರ್ ನಾಗರತ್ನ ರವರನ್ನು ಭೇಟಿ ಮಾಡಲು ತಿಳಿಸಿದ್ದಾರೆ.ಈ ಬಗ್ಗೆ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪೊಲೀಸ್ ನಿರೀಕ್ಷಕರಾದ ಮಹಮ್ಮದ್ ಶರೀಫ್ ಮತ್ತು ಠಾಣಾ ಬರಹಗಾರರಾದ ನಾಗರತ್ನ ವಿರುದ್ಧ ಪ್ರಕರಣ ದಾಖಲಾಗಿತ್ತು.
ಸೋಮವಾರ ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಮಹಮ್ಮದ್ ಶರೀಫ್ ಕೆ. ಮತ್ತು ಸಿಬ್ಬಂದಿ ಪ್ರವೀಣ್ ನಾಯ್ಕ 3000 ರೂ. ಲಂಚದ ಹಣವನ್ನು ಪಡೆಯುವಾಗ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ. ಇಬ್ಬರನ್ನು ವಶಕ್ಕೆ ಪಡೆದು ತನಿಖೆ ಕೈಗೊಳ್ಳಲಾಗಿರುತ್ತದೆ ಎಂದು ಪ್ರಕಟಣೆಯಲ್ಲಿ ವಿವರಿಸಲಾಗಿದೆ.ಲೋಕಾಯುಕ್ತ ಮಂಗಳೂರಿನ ಪೊಲೀಸ್ ಅಧೀಕ್ಷಕರು(in charge)) ಡಾ.ನಂದಿನಿ ಬಿ.ಎನ್. ನೇತೃತ್ವದಲ್ಲಿ ತನಿಖಾ ಕಾರ್ಯಾಚರಣೆ ನಡೆದಿದೆ. ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆ ಪೊಲೀಸ್ ಉಪಾಧೀಕ್ಷಕರಾದ ಡಾ.ಗಾನ ಪಿ.ಕುಮಾರ್, ಪೊಲೀಸ್ ನಿರೀಕ್ಷಕರಾದ ಅಮಾನುಲ್ಲಾ ಎ., ಚಂದ್ರಶೇಖರ್ ಕೆ.ಎನ್. ಮತ್ತು ಉಡುಪಿ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಮಂಜುನಾಥ, ಮಂಗಳೂರು ಮತ್ತು ಉಡುಪಿ ಪೊಲೀಸ್ ಠಾಣೆ ಸಿಬ್ಬಂದಿ ತನಿಖಾ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು ಎಂದು ಲೋಕಾಯುಕ್ತ ಪ್ರಕಟಣೆ ತಿಳಿಸಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


