ಬೆಂಗಳೂರು: ಪ್ರಸಿದ್ಧ ಇನ್ಫೋಸಿಸ್ ಕಂಪನಿಯ ಸಹ ಸಂಸ್ಥಾಪಕ ಕ್ರಿಸ್ ಗೋಪಾಲಕೃಷ್ಣನ್ ಸೇರಿದಂತೆ 18 ಮಂದಿ ವಿರುದ್ಧ ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಹೌದು, ಐಐಎಸ್‌ಸಿ ಬೋರ್ಡ್‌ನಲ್ಲಿ ಟ್ರಸ್ಟಿ ಸದಸ್ಯರಾಗಿ ಕ್ರಿಸ್ ಗೋಪಾಲಕೃಷ್ಣನ್ ಸೇವೆ ಸಲ್ಲಿಸುತ್ತಿದ್ದು, ಬೋವಿ ಜನಾಂಗಕ್ಕೆ ಸೇರಿದ ದುರ್ಗಪ್ಪ ಎಂಬಾತ ದೂರು ನೀಡಿದ್ದಾರೆ. ದೂರುದಾರ ದುರ್ಗಪ್ಪ ಭಾರತೀಯ ವಿಜ್ಞಾನ ಸಂಸ್ಥೆಯ ಸುಸ್ಥಿರ ತಂತ್ರಜ್ಞಾನ ಕೇಂದ್ರದಲ್ಲ್ ಅಧ್ಯಾಪಕರಾಗಿ ಕೆಲಸ ನಿರ್ವಹಿಸಿದ್ದರು.
2014ರಲ್ಲಿ ತನ್ನನ್ನು ಹನಿ ಟ್ರ್ಯಾಪ್ ಪ್ರಕರಣದಲ್ಲಿ ತಪ್ಪಾಗಿ ಸಿಲುಕಿಸಿ ಕೆಲಸದಿಂದ ವಜಾ ಮಾಡಲಾಗಿದೆ ಎಂದು ಆರೋಪಿಸಿರುವ ಕ್ರಿಸ್ ಗೋಪಾಲಕೃಷ್ಣನ್ ಎಲ್ಲಾ 18 ಮಂದಿ 2008ರಿಂದ 2025ರವರೆಗೂ ತನ್ನ ವಿರುದ್ಧ ಜಾತಿನಿಂದನೆ ಮಾಡಿದ್ದಾರೆ ಎಂದೂ ಸಹ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಬೆಂಗಳೂರಿನ 71ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ನಿರ್ದೇಶನದ ಮೇರೆಗೆ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


