Friday, November 6, 2026
spot_img
More
    spot_img
    HomeLatest newsಪಡಿತರ ಚೀಟಿದಾರರಿಗೆ ಹೊಸ ಸದಸ್ಯರ ಸೇರ್ಪಡೆ ಮತ್ತು ಹೆಸರು ತಿದ್ದುಪಡಿ – ಇಂದೇ ಕೊನೆಯ ದಿನ!

    ಪಡಿತರ ಚೀಟಿದಾರರಿಗೆ ಹೊಸ ಸದಸ್ಯರ ಸೇರ್ಪಡೆ ಮತ್ತು ಹೆಸರು ತಿದ್ದುಪಡಿ – ಇಂದೇ ಕೊನೆಯ ದಿನ!

    ಕರ್ನಾಟಕ ರಾಜ್ಯದ ಪಡಿತರ ಚೀಟಿದಾರರು ತಮ್ಮ ಕಾರ್ಡ್‌ಗಳಿಗೆ ಹೊಸ ಸದಸ್ಯರ ಹೆಸರು ಸೇರ್ಪಡೆ, ತೆಗೆದುಹಾಕುವುದು, ಅಥವಾ ಹೆಸರು ತಿದ್ದುಪಡಿ ಮಾಡಲು ಆಹಾರ ಇಲಾಖೆಯಿಂದ ಅವಕಾಶ ನೀಡಲಾಗಿದೆ. ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಇಂದೇ ಕೊನೆಯ ದಿನ ಎಂದು ಸೂಚಿಸಲಾಗಿದೆ.ಈ ಸೇವೆಗಳನ್ನು ಆನ್‌ಲೈನ್‌ನಲ್ಲಿ ಬಳಸಲು, ನೀವು ಕರ್ನಾಟಕ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.ಕರ್ನಾಟಕ ರಾಜ್ಯದ ಪಡಿತರ ಚೀಟಿದಾರರು ತಮ್ಮ ಕಾರ್ಡ್‌ಗಳಲ್ಲಿ ಹೆಸರು ತಿದ್ದುಪಡಿ, ಹೊಸ ಸದಸ್ಯರ ಸೇರ್ಪಡೆ, ಅಥವಾ ಹೆಸರು ತೆಗೆದುಹಾಕುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕಾಗಿದೆ.

    ಈ ಸೇವೆಗಳನ್ನು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಿಮ್ಮ ಸಮೀಪದ ಬೆಂಗಳೂರು ಒನ್ ಕೇಂದ್ರಗಳು, ಕರ್ನಾಟಕ ಒನ್ ಕೇಂದ್ರಗಳು, ಅಥವಾ ಸೈಬರ್ ಸೆಂಟರ್‌ಗಳಲ್ಲಿ ಪಡೆಯಬಹುದು. ಸ್ವಯಂ ಆಗಿ ಅರ್ಜಿ ಸಲ್ಲಿಸಬಹುದು. ಎಪಿಎಲ್ ಕಾರ್ಡ್ ಪಡೆಯುವವರು ಕೂಡ ಆನ್ನೈನ್ ನಲ್ಲಿ ಅರ್ಜಿ ಸಲ್ಲಿಸಬೇಕಿದೆ. ಈಗಾಗಲೇ ಪಡಿತರ ಚೀಟಿ ಹೊಂದಿದವರು ಹೊಸದಾಗಿ ಮಕ್ಕಳು ಅಥವಾ ತಮ್ಮ ಕುಟುಂಬದ ಇತರೆ ಸದಸ್ಯರ ಸೇರ್ಪಡೆಗೆ ಅವಕಾಶ ನೀಡಲಾಗುವುದು. http://ahara.kar.nic.in ವೆಬ್ಟ್ ಗಮನಿಸಬಹುದಾಗಿದೆ.

    ರೇಷನ್ ಕಾರ್ಡ್ ನಲ್ಲಿ ಹೆಸರು ಸೇರಿಸಲು ಬೇಕಾಗುವ ದಾಖಲೆಗಳು

    ಆಧಾರ್ ಕಾರ್ಡ್

    ಮದುವೆ ಪ್ರಮಾಣ ಪತ್ರ

    ಪೋಷಕರ ಪಡಿತರ ಚೀಟಿ ಅಗತ್ಯ.

    ಪಡಿತರ ಚೀಟಿಗೆ ಮಗುವಿನ ಹೆಸರು ಸೇರ್ಪಡೆಗೆ ಈ ದಾಖಲೆಗಳು ಕಡ್ಡಾಯ

    ಮಗುವಿನ ಜನನ ಪ್ರಮಾಣಪತ್ರ

    ಹೆತ್ತವರ ಆಧಾರ್ ಕಾರ್ಡ್

    ಪಡಿತರ ಚೀಟಿಯಲ್ಲಿ ಹೊಸ ಸದಸ್ಯರ ಸೇರ್ಪಡೆ ಮಾಡುವುದು ಹೇಗೆ?

    ಕರ್ನಾಟಕ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ:

    ಪಬ್ಲಿಕ್ ಯೂಸ್ ಮೆನು ಬಾರ್‌ನಲ್ಲಿ, ನಿಮ್ಮ ವಲಯವನ್ನು ಆಯ್ಕೆಮಾಡಿ.

    ಅಪ್ಲೈ ಫಾರ್ ರೇಷನ್ ಕಾರ್ಡ್ ಕರೆಕ್ಷನ್ಸ್ ಆಯ್ಕೆಯನ್ನು ಆಯ್ಕೆಮಾಡಿ.

    ತೆರೆಯುವ ಫಾರ್ಮ್‌ನಲ್ಲಿ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಅಗತ್ಯ ದಾಖಲೆಗಳ ಸ್ಕ್ಯಾನ್ ಪ್ರತಿಗಳನ್ನು ಅಪ್ಲೋಡ್ ಮಾಡಿ.

    ಅನಂತರ, ಅರ್ಜಿಯನ್ನು ಸಲ್ಲಿಸಿ.ಅರ್ಜಿ ಸಲ್ಲಿಸುವ ವೇಳೆ ನೀವು ನೀಡಿರುವಂತಹ ಎಲ್ಲ ದಾಖಲಾತಿಗಳು ಸರಿಯಾಗಿದ್ದರೆ, ನಿಮ್ಮ ಮನಗೆ ಅಪ್‌ಡೇಟ್ ಆಗಿರುವ ಹೊಸ ಪಡಿತರ ಚೀಟಿ ನೀಡಲಾಗುತ್ತದೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search