Wednesday, November 4, 2026
spot_img
More
    spot_img
    HomeChampions Trophy 2025Champions Trophy 2025: ಇಂದು ಅಫ್ಘಾನ್ vs ಆಸ್ಟ್ರೇಲಿಯಾ ಪಂದ್ಯ; ಕಳೆದ ಐಸಿಸಿ ಟೂರ್ನಿಯಲ್ಲಿ ಅಫ್ಘಾನ್...

    Champions Trophy 2025: ಇಂದು ಅಫ್ಘಾನ್ vs ಆಸ್ಟ್ರೇಲಿಯಾ ಪಂದ್ಯ; ಕಳೆದ ಐಸಿಸಿ ಟೂರ್ನಿಯಲ್ಲಿ ಅಫ್ಘಾನ್ ವಿರುದ್ಧ ಹೀನಾಯವಾಗಿ ಸೋತಿತ್ತು ಆಸ್ಟ್ರೇಲಿಯಾ!

    ಲಾಹೋರ್: ಇಂದು (ಫೆಬ್ರವರಿ 28) ಗಡ್ಡಾಫಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ 2025ರ ಚಾಂಪಿಯನ್ಸ್ ಟ್ರೋಫಿಯ ಲೀಗ್ ಹಂತದ ಹತ್ತನೇ ಪಂದ್ಯ ನಡೆಯಲಿದೆ.

    ಭಾರತೀಯ ಕಾಲಮಾನದ ಪ್ರಕಾರ ಮಧ್ಯಾಹ್ನ 2.30ಕ್ಕೆ ಆರಂಭವಾಗಲಿರುವ ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ಹಾಗೂ ಅಫ್ಘಾನಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ. ಇನ್ನು ಈ ಪಂದ್ಯದಲ್ಲಿ ಗೆಲ್ಲಲಿರುವ ತಂಡ ಸೆಮಿಫೈನಲ್ ಪ್ರವೇಶ ಮಾಡಲಿದ್ದು, ಎರಡೂ ತಂಡಗಳಿಗೂ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ.

    ಹೀಗಾಗಿ ಈ ಪಂದ್ಯ ಮಹತ್ವ ಪಡೆದುಕೊಂಡಿದೆ. ಅಫ್ಘಾನಿಸ್ತಾನ ತನ್ನ ಕಳೆದ ಪಂದ್ಯದಲ್ಲಿ ಬಲಿಷ್ಠ ಇಂಗ್ಲೆಂಡ್ ತಂಡವನ್ನು ಸೋಲಿಸಿದ್ದು ಪಂದ್ಯದ ಮೇಲೆ ನಿರೀಕ್ಷೆ ಹೆಚ್ಚಾಗುವಂತೆ ಮಾಡಿದೆ. ಹೀಗೆ ದೊಡ್ಡ ಮಟ್ಟದ ಕುತೂಹಲ ಹುಟ್ಟುಹಾಕಿರುವ ಈ ಪಂದ್ಯದಲ್ಲಿ ಯಾವ ತಂಡ ಗೆಲ್ಲಲಿದೆ ಎನ್ನುವುದನ್ನು ಊಹಿಸುವುದು ಕಷ್ಟ. ಏಕೆಂದರೆ ಅಫ್ಘಾನಿಸ್ತಾನ 2023ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಇಂಗ್ಲೆಂಡ್ ಹಾಗೂ ಪಾಕಿಸ್ತಾನ ತಂಡಗಳನ್ನು ಸೋಲಿಸಿತ್ತು ಹಾಗೂ 2024ರ ಟಿ ಟ್ವೆಂಟಿ ವಿಶ್ವಕಪ್‌ನಲ್ಲಿ ನ್ಯೂಜಿಲೆಂಡ್ ಹಾಗೂ ಆಸ್ಟ್ರೇಲಿಯಾ ತಂಡಗಳನ್ನು ಸೋಲಿಸಿತ್ತು.

    ಹೌದು, ಇಂದು ಅಫ್ಘಾನಿಸ್ತಾನ ವಿರುದ್ಧ ಕಣಕ್ಕಿಳಿಯಲಿರುವ ಆಸ್ಟ್ರೇಲಿಯಾಕ್ಕೆ ಈ ಒಂದು ಅಂಶ ಭಾರೀ ಪ್ರಭಾವ ಬೀರುವುದಂತೂ ಖಚಿತ. ಅದರಲ್ಲಿಯೂ ಇಂಗ್ಲೆಂಡ್ ವಿರುದ್ಧ ಅಫ್ಘಾನಿಸ್ತಾನ ಗೆದ್ದದ್ದು ಈ ಪ್ರಭಾವದ ತೂಕವನ್ನು ಮತ್ತಷ್ಟು ಹೆಚ್ಚಿಸಿದೆ.

    ಕಿಂಗ್‌ಸ್ಟನ್‌ನಲ್ಲಿ 2024ರ ಜೂನ್ 22ರಂದು ನಡೆದಿದ್ದ ಟಿ ಟ್ವೆಂಟಿ ವಿಶ್ವಕಪ್‌ನ ಸೂಪರ್ 8 ಹಂತದ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಅಫ್ಘಾನಿಸ್ತಾನ 21 ರನ್‌ಗಳ ಗೆಲುವು ದಾಖಲಿಸಿತ್ತು. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 148 ರನ್ ಕಲೆಹಾಕಿ ಆಸ್ಟ್ರೇಲಿಯಾಗೆ 149 ರನ್‌ಗಳ ಗುರಿ ನೀಡಿತ್ತು. ಆದರೆ ಅಫ್ಘಾನಿಸ್ತಾನ ಬೌಲಿಂಗ್ ದಾಳಿಗೆ ತತ್ತರಿಸಿದ ಆಸ್ಟ್ರೇಲಿಯಾ 19.2 ಓವರ್‌ಗಳಲ್ಲಿ 127 ರನ್‌ಗಳಿಗೆ ಆಲ್‌ಔಟ್ ಆಗಿತ್ತು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search