ಲಾಹೋರ್: ಇಲ್ಲಿನ ಗಡ್ಡಾಫಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಇಂದು (ಫೆಬ್ರವರಿ 28) ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ ಲೀಗ್ ಹಂತದ ಹತ್ತನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ಹಾಗೂ ಅಫ್ಘಾನಿಸ್ತಾನ ತಂಡಗಳು ಮುಖಾಮುಖಿಯಾಗಿವೆ.
ಈ ಪಂದ್ಯದಲ್ಲಿ ಜಯ ಸಾಧಿಸಲಿರುವ ತಂಡ ಸೆಮಿಫೈನಲ್ಗೆ ಅರ್ಹತೆ ಪಡೆದುಕೊಳ್ಳುವ ಕಾರಣ ಮಹತ್ವ ಪಡೆದುಕೊಂಡಿದ್ದು, ಭಾರೀ ಕುತೂಹಲ ಮೂಡಿಸಿದೆ. ಇನ್ನು ಕಳೆದ ಪಂದ್ಯದಲ್ಲಿ ಬಲಿಷ್ಠ ಇಂಗ್ಲೆಂಡ್ ತಂಡವನ್ನು ಮಣಿಸಿರುವ ಅಫ್ಘಾನಿಸ್ತಾನ ಈ ಪಂದ್ಯದ ಮೇಲಿನ ಕ್ರೇಜ್ ಅನ್ನು ಮತ್ತಷ್ಟು ಹೆಚ್ಚಿಸಿದೆ.
ಇನ್ನು ಭಾರತದ ಕ್ರಿಕೆಟ್ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಅಫ್ಘಾನಿಸ್ತಾನ ತಂಡಕ್ಕೆ ದೊಡ್ಡ ಮಟ್ಟದಲ್ಲಿ ಬೆಂಬಲ ವ್ಯಕ್ತಪಡಿಸಿದ್ದಾರೆ. ಆಸ್ಟ್ರೇಲಿಯಾ ಈ ಪಂದ್ಯದಲ್ಲಿ ಸೋತರೆ ಟೂರ್ನಿಯಿಂದ ಹೊರಬೀಳಲಿದೆ ಎಂಬ ಕಾರಣಕ್ಕೆ ಕೆಲವರು ಬೆಂಬಲ ನೀಡುತ್ತಿದ್ದರೆ, ಇನ್ನೂ ಕೆಲವರು ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ಸೋತರೆ ನಾಳೆ ನಡೆಯಲಿರುವ ದಕ್ಷಿಣ ಆಫ್ರಿಕಾ ಹಾಗೂ ಇಂಗ್ಲೆಂಡ್ ತಂಡಗಳ ನಡುವಿನ ಪಂದ್ಯ ಸೆಮಿಫೈನಲ್ ಪ್ರವೇಶಿಸುವ ಎರಡನೇ ತಂಡವನ್ನು ನಿರ್ಧರಿಸಲಿದೆ ಎಂಬ ಕಾರಣಕ್ಕೆ ಬೆಂಬಲ ಅಫ್ಘಾನ್ ಗೆಲ್ಲಬೇಕು ಎನ್ನುತ್ತಿದ್ದಾರೆ.
ಪಂದ್ಯದಲ್ಲಿ ಟಾಸ್ ಗೆದ್ದಿರುವ ಅಫ್ಘಾನಿಸ್ತಾನ ಬ್ಯಾಟಿಂಗ್ ಆರಿಸಿಕೊಂಡಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


