ಲಾಹೋರ್: ಇಲ್ಲಿನ ಗಡ್ಡಾಫಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಇಂದು (ಫೆಬ್ರವರಿ 28) ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ ಲೀಗ್ ಹಂತದ ಹತ್ತನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ಹಾಗೂ ಅಫ್ಘಾನಿಸ್ತಾನ ತಂಡಗಳು ಮುಖಾಮುಖಿಯಾಗಿದ್ದವು. ಪಂದ್ಯಕ್ಕೆ ಮಳೆ ಅಡ್ಡಿಯನ್ನುಂಟುಮಾಡಿದ ಕಾರಣ ಫಲಿತಾಂಶವಿಲ್ಲದೇ ಅಂತ್ಯಗೊಂಡಿದೆ.
ಈ ಮೂಲಕ ಎರಡೂ ತಂಡಗಳಿಗೂ ತಲಾ ಒಂದೊಂದು ಅಂಕ ಲಭಿಸಿದ್ದು, ಒಟ್ಟಾರೆ 4 ಅಂಕ ಪಡೆದ ಆಸ್ಟ್ರೇಲಿಯಾ ಸೆಮಿಫೈನಲ್‌ಗೆ ಲಗ್ಗೆ ಇಟ್ಟಿದೆ. ಇನ್ನು ಅಫ್ಘಾನಿಸ್ತಾನ ಒಟ್ಟಾರೆ 3 ಅಂಕ ಗಳಿಸಿದ್ದು, ನಾಳೆ ನಡೆಯುವ ದಕ್ಷಿಣ ಆಫ್ರಿಕಾ ಹಾಗೂ ಇಂಗ್ಲೆಂಡ್ ತಂಡಗಳ ಫಲಿತಾಂಶದ ಮೇಲೆ ಸೆಮಿಫೈನಲ್ ಪ್ರವೇಶ ನಿರ್ಧಾರವಾಗಲಿದೆ. ನಾಳಿನ ಪಂದ್ಯದಲ್ಲಿ ಇಂಗ್ಲೆಂಡ್ ದಕ್ಷಿಣ ಆಫ್ರಿಕಾ ತಂಡವನ್ನು ಕನಿಷ್ಠ 200 ರನ್‌ಗಳ ಅಂತರದಿಂದ ಸೋಲಿಸಬೇಕಿದೆ. ಹೀಗಾಗಿ ದಕ್ಷಿಣ ಆಫ್ರಿಕಾ ಬಹುತೇಕ ಸೆಮಿಫೈನಲ್ ಪ್ರವೇಶಿಸಿದೆ ಎನ್ನಬಹುದು.
ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ ಆರಂಭಿಕ ಆಘಾತ ಅನುಭವಿಸಿದರೂ ಸಹ ಸೆದಿಕ್‌ಉಲ್ಲಾ ಅಟಲ್ ಹಾಗೂ ಅಜ್ಮತುಲ್ಲಾ ಓಮರ್ಜೈ ಜವಾಬ್ದಾರಿಯುತ ಆಟದ ನೆರವಿನಿಂದ 50 ಓವರ್‌ಗಳಲ್ಲಿ 273 ರನ್ ಕಲೆಹಾಕಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಆಸ್ಟ್ರೇಲಿಯಾಗೆ ಗೆಲ್ಲಲು 274 ರನ್‌ಗಳ ಗುರಿಯನ್ನು ನೀಡಿತು.
ಈ ಗುರಿಯನ್ನು ಬೆನ್ನಟ್ಟಲು ಆರಂಭಿಸಿ ಶುರುವಿನಿಂದಲೇ ಅಬ್ಬರದ ಬ್ಯಾಟಿಂಗ್ ನಡೆಸಿದ ಆಸ್ಟ್ರೇಲಿಯಾ 12.5 ಓವರ್‌ಗಳಲ್ಲಿ 1 ವಿಕೆಟ್ ನಷ್ಟಕ್ಕೆ 109 ರನ್ ದಾಖಲಿಸಿತ್ತು. ಈ ಸಮಯಕ್ಕೆ ಶುರುವಾದ ಮಳೆ ಎಲ್ಲಿಯೂ ಬಿಡುವು ಕೊಡಲಿಲ್ಲ. ಹೀಗಾಗಿ ಪಂದ್ಯ ಫಲಿತಾಂಶವಿಲ್ಲದೇ ಅಂತ್ಯಗೊಂಡಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


