Wednesday, November 4, 2026
spot_img
More
    spot_img
    HomeTop StoryChampions Trophy 2025: ಅಫ್ಘಾನಿಸ್ತಾನ vs ಆಸ್ಟ್ರೇಲಿಯಾ ಪಂದ್ಯಕ್ಕೆ ಮಳೆ ಅಡ್ಡಿ; ಪಂದ್ಯ ರದ್ದಾದರೆ ಈ...

    Champions Trophy 2025: ಅಫ್ಘಾನಿಸ್ತಾನ vs ಆಸ್ಟ್ರೇಲಿಯಾ ಪಂದ್ಯಕ್ಕೆ ಮಳೆ ಅಡ್ಡಿ; ಪಂದ್ಯ ರದ್ದಾದರೆ ಈ ತಂಡ ಸೆಮಿಫೈನಲ್‌ಗೆ

    ಲಾಹೋರ್: ಇಲ್ಲಿನ ಗಡ್ಡಾಫಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಇಂದು (ಫೆಬ್ರವರಿ 28) ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ ಲೀಗ್ ಹಂತದ ಹತ್ತನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ಹಾಗೂ ಅಫ್ಘಾನಿಸ್ತಾನ ತಂಡಗಳು ಮುಖಾಮುಖಿಯಾಗಿವೆ.


    ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ ಆರಂಭಿಕ ಆಘಾತ ಅನುಭವಿಸಿದರೂ ಸಹ ಸೆದಿಕ್‌ಉಲ್ಲಾ ಅಟಲ್ ಹಾಗೂ ಅಜ್ಮತುಲ್ಲಾ ಓಮರ್ಜೈ ಜವಾಬ್ದಾರಿಯುತ ಆಟದ ನೆರವಿನಿಂದ 50 ಓವರ್‌ಗಳಲ್ಲಿ 273 ರನ್ ಕಲೆಹಾಕಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಆಸ್ಟ್ರೇಲಿಯಾಗೆ ಗೆಲ್ಲಲು 274 ರನ್‌ಗಳ ಗುರಿಯನ್ನು ನೀಡಿದೆ.

    ಈ ಗುರಿಯನ್ನು ಬೆನ್ನಟ್ಟಿರುವ ಆಸ್ಟ್ರೇಲಿಯಾ 12.5 ಓವರ್‌ಗಳಲ್ಲಿ 1 ವಿಕೆಟ್ ನಷ್ಟಕ್ಕೆ 109 ರನ್ ದಾಖಲಿಸಿದ್ದು, ಸದ್ಯ ಪಂದ್ಯಕ್ಕೆ ಮಳೆ ಅಡ್ಡಿಯನ್ನುಂಟುಮಾಡಿದೆ. ಇದೇ ಕ್ರೀಡಾಂಗಣದಲ್ಲಿ ಎರಡು ದಿನಗಳ ಹಿಂದೆ ಸುರಿದಿದ್ದ ಭಾರೀ ಮಳೆಗೆ ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಪಂದ್ಯಕ್ಕೆ ಮಳೆ ಅಡ್ಡಿಯನ್ನುಂಟುಮಾಡಿ ಪಂದ್ಯ ರದ್ದಾಗಿ ಎರಡೂ ತಂಡಗಳಿಗೂ ತಲಾ ಒಂದೊಂದು ಅಂಕ ನೀಡಲಾಗಿತ್ತು.

    ಇನ್ನು ಭಾರತೀಯ ಕಾಲಮಾನದ ಪ್ರಕಾರ 9 ಗಂಟೆಯ ಒಳಗೆ ಪಂದ್ಯ ನಿಂತರೆ ಪೂರ್ತಿ ಪಂದ್ಯ ನಡೆಯಲಿದ್ದು, ನಂತರ ಮಳೆ ನಿಂತರೆ ಓವರ್ ಕಡಿತಗೊಳ್ಳಲಿದೆ. ಒಂದುವೇಳೆ ಮಳೆ ಹೊಡೆತಕ್ಕೆ ಪಂದ್ಯ ಆರಂಭವಾಗದೇ ಹೋದರೆ ಎರಡೂ ತಂಡಗಳಿಗೂ ತಲಾ ಒಂದೊಂದು ಅಂಕ ಸಿಗಲಿದ್ದು, ಆಸ್ಟ್ರೇಲಿಯಾ ಒಟ್ಟು 4 ಅಂಕಗಳೊಂದಿಗೆ ಸೆಮಿಫೈನಲ್ ತಲುಪಲಿದೆ. ಇನ್ನು 3 ಅಂಕ ಪಡೆಯಲಿರುವ ಅಫ್ಘಾನಿಸ್ತಾನದ ಸೆಮಿಫೈನಲ್ ಪ್ರವೇಶ ನಾಳಿನ ಇಂಗ್ಲೆಂಡ್ ಹಾಗೂ ಸೌತ್ ಆಫ್ರಿಕಾ ತಂಡಗಳ ನಡುವಿನ ಪಂದ್ಯದ ಮೇಲೆ ನಿರ್ಧಾರವಾಗಲಿದೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search