ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಬಿಜೆಪಿ ಸೇರುವ ಕುರಿತು ನಮ್ಮ ಪಕ್ಷದಲ್ಲಿ ಯಾವುದೇ ಚರ್ಚೆಯಿಲ್ಲ. ರಾಜಕಾರಣದಲ್ಲಿ ಬೆಳವಣಿಗೆ ಕ್ಷಿಪ್ರವೇ ಆಗುವುದು ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಿವರಾತ್ರಿ ಹಬ್ಬದ ಅಂಗವಾಗಿ ಈಶಾ ಫೌಂಡೇಶನ್ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದ್ದರು. ಅಮಿತ್ ಶಾ ಭಾಗಿಯಾಗಿದ್ದರು. ನಾವೂ ಸಾಕಷ್ಟು ಸಲ ಭಾಗಿಯಾಗಿದ್ದೆವು. ಇದಕ್ಕೆ ರಾಜಕೀಯ ಅರ್ಥ ಕಲ್ಪಿಸುವ ಅಗತ್ಯ ಇಲ್ಲ ಎಂದರು.
ಕಾಂಗ್ರೆಸ್ ಪಕ್ಷದಲ್ಲಿ ಬೇರೆ ಬೇರೆ ವ್ಯಾಖ್ಯಾನ ನಡೆಯುತ್ತಿರುವುದು ಅವರ ಪಕ್ಷದ ವಿಚಾರ. ಅದು ಆ ಪಕ್ಷದ ಅಪನಂಬಿಕೆ ಮತ್ತು ಗೊಂದಲದ ಸಂಕೇತ. ಅಪನಂಬಿಕೆ ಇದೆ. ಅದಕ್ಕೆ ಅಪಸ್ವರ ಇದೆ. ಡಿಕೆಶಿ ಬಿಜೆಪಿ ಸೇರುವ ಕುರಿತು ಯಾವುದೇ ಚರ್ಚೆ ಇಲ್ಲ. ರಾಜಕಾರಣದಲ್ಲಿ ಬೆಳವಣಿಗೆ ಕ್ಷಿಪ್ರವೇ ಆಗುವುದು. ಓವರ್ ನೈಟ್ ಆಗುತ್ತದೆ. ಪ್ರಶ್ನೆ ಅದಲ್ಲ. ಆದರೆ ನಮ್ಮ ತಿಳುವಳಿಕೆಯಲ್ಲಿ ಆ ರೀತಿ ಯಾವುದೇ ಸ್ಥಿತಿ ಇಲ್ಲ ಎಂದು ಹೇಳಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನನ್ನ ಹೆಸರನ್ನು ತೇಲಿಬಿಡಲಾಗುತ್ತಿದೆ. ಆದರೆ ಎಲ್ಲರೂ ಒಟ್ಟಿಗೆ ಶಕ್ತಿಯಾಗಿ ಮತ್ತೊಮ್ಮೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡಬೇಕು. ಎಲ್ಲರನ್ನೂ ಒಳಗೊಂಡಂತೆ ಸಂಘಟನೆ ಮಾಡುವ ಉದ್ದೇಶ ಇದೆ ಎಂದು ಹೇಳಿದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


