Wednesday, November 4, 2026
spot_img
More
    spot_img
    HomeTop StoryIPL 2025: ನಮ್ಮಷ್ಟು ಬಾರಿ ನೀವು ಗೆದ್ದಿಲ್ಲ, ಧೋನಿಯಷ್ಟು ರನ್ ಯಾರೂ ಬಾರಿಸಿಲ್ಲ; ಪಂದ್ಯ ಆರಂಭಕ್ಕೂ...

    IPL 2025: ನಮ್ಮಷ್ಟು ಬಾರಿ ನೀವು ಗೆದ್ದಿಲ್ಲ, ಧೋನಿಯಷ್ಟು ರನ್ ಯಾರೂ ಬಾರಿಸಿಲ್ಲ; ಪಂದ್ಯ ಆರಂಭಕ್ಕೂ ಮುನ್ನ ಆರ್‌ಸಿಬಿ ಕಾಲೆಳೆದ ಸಿಎಸ್‌ಕೆ!

    ಚೆನ್ನೈ: ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಬಹು ನಿರೀಕ್ಷಿತ ಪಂದ್ಯವಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಹಣಾಹಣಿ ಇಂದು ( ಮಾರ್ಚ್ 28 ) ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯಲಿದೆ. ಸಂಜೆ 7.30ಕ್ಕೆ ಪಂದ್ಯ ಆರಂಭವಾಗಲಿದೆ.

    ಸದರ್ನ್ ಡರ್ಬಿ ಎಂದೇ ಹೆಸರು ಮಾಡಿರುವ ಈ ಹಣಾಹಣಿಯಲ್ಲಿ ಯಾವ ತಂಡ ಗೆಲ್ಲಲಿದೆ ಎಂಬ ಚರ್ಚೆಗಳು ನಡೆಯುತ್ತಿವೆ ಹಾಗೂ ಇತ್ತಂಡಗಳ ನಡುವೆ ಇಲ್ಲಿಯವರೆಗೂ ನಡೆದಿರುವ ಪಂದ್ಯಗಳ ಫಲಿತಾಂಶದ ಬಗ್ಗೆ ಸಹ ಚರ್ಚೆ ನಡೆದಿದೆ.

    ಇನ್ನು ಇತ್ತಂಡಗಳ ನಡುವೆ ಐಪಿಎಲ್ ಇತಿಹಾಸದಲ್ಲಿ ಒಟ್ಟು 31 ಪಂದ್ಯಗಳು ನಡೆದಿದ್ದು, ಚೆನ್ನೈ ಸೂಪರ್ ಕಿಂಗ್ಸ್ 20 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು 10 ಪಂದ್ಯಗಳಲ್ಲಿ ಗೆದ್ದಿದೆ ಹಾಗೂ ಉಳಿದೊಂದು ಪಂದ್ಯ ಫಲಿತಾಂಶವಿಲ್ಲದೇ ಅಂತ್ಯಗೊಂಡಿದೆ.

    ಇದೇ ಅಂಶವನ್ನಿಟ್ಟುಕೊಂಡು ಇದೀಗ ಚೆನ್ನೈ ಸೂಪರ್ ಕಿಂಗ್ಸ್ ಇಂದಿನ ಪಂದ್ಯ ಆರಂಭವಾಗುವುದಕ್ಕೂ ಮುನ್ನ ಆರ್‌ಸಿಬಿ ಕಾಲೆಳೆದಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯ ಆರಂಭವಾಗುವುದಕ್ಕೂ ಮುನ್ನ ಆ ತಂಡದ ವಿರುದ್ಧ ನಮ್ಮ ತಂಡದ ಉತ್ತಮ ಪ್ರದರ್ಶನದ ಅಂಕಿಅಂಶಗಳನ್ನು ನೋಡೋಣ ಬನ್ನಿ ಎಂದು ರೀಲ್ಸ್ ಒಂದನ್ನು ಸಿಎಸ್‌ಕೆ ಹಂಚಿಕೊಂಡಿದೆ.

    ಈ ರೀಲ್‌ನಲ್ಲಿ ಎಂಎಸ್ ಧೋನಿ ಆರ್‌ಸಿಬಿ ವಿರುದ್ಧ 864 ರನ್ ಗಳಿಸಿದ್ದು, ಇದು ಆರ್‌ಸಿಬಿ ವಿರುದ್ಧ ಐಪಿಎಲ್‌ನಲ್ಲಿ ಆಟಗಾರನೋರ್ವ ಬಾರಿಸಿದ ಅತಿಹೆಚ್ಚು ರನ್ ಆಗಿದೆ. ಶಿವಮ್ ದುಬೆ ಆರ್‌ಸಿಬಿ ವಿರುದ್ಧ 78 ಸರಾಸರಿ ಹಾಗೂ 158 ಸ್ಟ್ರೈಕ್‌ರೇಟ್ ಹೊಂದಿದ್ದಾರೆ. ಜಡೇಜಾ ಆರ್‌ಸಿಬಿ ವಿರುದ್ಧ 26 ವಿಕೆಟ್ ಪಡೆದಿದ್ದಾರೆ. ಅಶ್ವಿನ್ ಆರ್‌ಸಿಬಿ ವಿರುದ್ಧ 24 ವಿಕೆಟ್ ಪಡೆದಿದ್ದಾರೆ. ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಇತ್ತಂಡಗಳ ನಡುವೆ ಒಟ್ಟು 9 ಪಂದ್ಯಗಳು ನಡೆದಿದ್ದು ಈ ಪೈಕಿ ನಮ್ಮ ತಂಡ 8 ಪಂದ್ಯಗಳಲ್ಲಿ ಗೆದ್ದಿದೆ ಹಾಗೂ ಆರ್‌ಸಿಬಿ ಒಂದು ಪಂದ್ಯದಲ್ಲಿ ಗೆದ್ದಿದೆ ಎಂದು ಮಾಹಿತಿಗಳನ್ನು ಹಂಚಿಕೊಂಡಿದೆ. ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಎಚ್ಚರಿಕೆ ನೀಡಿದೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search