ಮೈಸೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಆರೋಪಿಗಳಿಗೆ ಹೈಕೋರ್ಟ್ ನೀಡಿರುವ ಜಾಮೀನು ವಿರುದ್ಧ ಕಿಡಿಕಾರಿದ ನಟಿ ರಮ್ಯಾ ರೇಣುಕಾಸ್ವಾಮಿ ಕುಟುಂಬದವರಿಗೆ ನ್ಯಾಯ ಸಿಗಬೇಕು ಎಂದಿದ್ದರು.
ಈ ಮೂಲಕ ಪರೋಕ್ಷವಾಗಿ ದರ್ಶನ್ ಜಾಮೀನು ರದ್ದಾಗಬೇಕು ಎಂದ ನಟಿ ರಮ್ಯಾ ವಿರುದ್ಧ ದರ್ಶನ್ ಅಭಿಮಾನಿಗಳು ರೊಚ್ಚಿಗೆದ್ದಿದ್ದಾರೆ. ರಮ್ಯಾಗೆ ನೇರವಾಗಿ ಅಶ್ಲೀಲ ಮೆಸೇಜ್ಗಳನ್ನು ಹಾಕಿ ವಿಕೃತಿ ಮೆರೆದಿದ್ದಾರೆ. ಇದನ್ನೆಲ್ಲ ರಮ್ಯಾ ತನ್ನ ಖಾತೆಯಲ್ಲಿ ಬಹಿರಂಗಪಡಿಸಿದ್ದಾರೆ.
ಈ ಕುರಿತು ಮೈಸೂರು – ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯುದುವೀರ್ ಒಡೆಯರ್ ಪ್ರತಿಕ್ರಿಯಿಸಿದ್ದು, ಸಮಾಜದಲ್ಲಿ ಇದನ್ನು ಎದುರಿಸುತ್ತಾರೆ, ಇದಕ್ಕೆ ದೊಡ್ಡ ಪರಿಹಾರವೇನೂ ಇಲ್ಲ ಎಂದರು. ಎಲ್ಲರಿಗೂ ವಾಕ್ ಸ್ವಾತಂತ್ರ್ಯ ಇದೆ. ಆದರೆ ಅದು ಸಕಾರಾತ್ಮಕವಾಗಿ ಮಾತ್ರ ಇರದೇ ದುರ್ಬಳಕೆಯೂ ಆಗುತ್ತಿದೆ. ನಡವಳಿಕೆ ಹಾಗೂ ವ್ಯಕ್ತಿತ್ವವನ್ನು ಬದಲಾಯಿಸಿಕೊಳ್ಳಬೇಕಿದೆ. ಸೋಷಿಯಲ್ ಮೀಡಿಯಾದಲ್ಲಿ ಮುಖ ಕಾಣಿಸಲ್ಲ ಅಂತ ಏನೇನೋ ಬರೆಯುವುದಲ್ಲ, ನಾವೂ ವಿದ್ಯಾಭ್ಯಾಸ, ಶಿಕ್ಷಣವನ್ನು ಹೆಚ್ಚಿಸಬೇಕಿದೆ ಎಂದರು. ಈ ಮೂಲಕ ದರ್ಶನ್ ಅಭಿಮಾನಿಗಳಿಗೆ ಯದುವೀರ್ ಟಾಂಗ್ ಕೊಟ್ಟರು.
ಶಾಪಿಂಗ್ ಪ್ರಿಯರಿಗೆ ಗುಡ್ ನ್ಯೂಸ್;ಅಮೆಜಾನ್ ಇಂಡಿಯಾ ಗ್ರೇಟ್ ಫ್ರೀಡಂ ಫೆಸ್ಟಿವಲ್ 2025 ಸೇಲ್ ಆಗಸ್ಟ್ 1ರಿಂದ ಪ್ರಾರಂಭ
ಎಐ ಕನ್ನಡ ಕೃಷಿ ವೆಬ್ಸೈಟ್ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


