ಮೈಸೂರಿನಲ್ಲಿ ನಡೆದ ಸಾಧನಾ ಸಮಾವೇಶವನ್ನು ವಿಪಕ್ಷಗಳು ಖಂಡಿಸಿದ್ದಕ್ಕೆ ಪ್ರತಿಕ್ರಿಯಿಸಲು ಹೋಗಿ ಎಡವಟ್ಟು ಮಾಡಿಕೊಂಡಿದ್ದ ಯತೀಂದ್ರ ಸಿದ್ದರಾಮಯ್ಯ ಇದೀಗ ಉಲ್ಟಾ ಹೊಡೆದಿದ್ದಾರೆ.
ಮೈಸೂರಿಗೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳಾಗಿದ್ದಾಗ ಕೊಟ್ಟಂತಹ ಅನುದಾನಗಳನ್ನು ಬಿಟ್ಟರೆ ಇನ್ಯಾವ ಅನುದಾನಗಳೂ ಸಹ ಬಂದಿಲ್ಲ. ಹಾಗಾಗಿ ನಾಲ್ವಡಿ ಕೃಷ್ಣರಾಜ್ ಒಡೆಯರ್ ಮೈಸೂರಿಗೆ ಏನು ಕೊಡುಗೆ ಕೊಟ್ಟಿದ್ದಾರೆ ಅದಕ್ಕಿಂತ ಹೆಚ್ಚು ಅಥವಾ ಅದರಷ್ಟೇ ಕೊಡುಗೆಯನ್ನು ನಮ್ಮ ಸರ್ಕಾರ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಕೊಟ್ಟಿದೆ. ಹಾಗಾಗಿ ಸಾಧನಾ ಸಮಾವೇಶದ ಕುರಿತು ವಿಪಕ್ಷಗಳು ಮಾಡುವುದು ಬರೀ ಟೊಳ್ಳು ಟೀಕೆ ಎಂದು ಯತೀಂದ್ರ ಹೇಳಿಕೆಯನ್ನು ನೀಡಿದ್ದರು.
ಈ ಹೇಳಿಕೆ ವಿವಾದ ಎಬ್ಬಿಸಿದ್ದು, ವಿಪಕ್ಷಗಳು ಹಾಗೂ ಸಾರ್ವಜನಿಕರು ಯತೀಂದ್ರ ಹೇಳಿಕೆಯನ್ನು ದೊಡ್ಡ ಮಟ್ಟದಲ್ಲಿ ಖಂಡಿಸಿದರು. ಹೀಗೆ ಭಾರೀ ಟೀಕೆ ವ್ಯಕ್ತವಾದ ಬಳಿಕ ತಮ್ಮ ಹೇಳಿಕೆ ಕುರಿತು ಮಾತನಾಡಿದ ಯತೀಂದ್ರ ನನ್ನ ಹೇಳಿಕೆಯನ್ನು ತಪ್ಪಾಗಿ ಗ್ರಹಿಸಲಾಗಿದೆ, ನಾಲ್ವಡಿ ಕೃಷ್ಣರಾಜ ಒಡೆಯರ್ಗೆ ಅವಮಾನ ಮಾಡುವ ದೃಷ್ಟಿಯಿಂದ ಹೇಳಿಲ್ಲ. ಅವರು ಮೈಸೂರಿಗಾಗಲಿ, ಕರ್ನಾಟಕಕ್ಕಾಗಲಿ ಕೊಟ್ಟ ಕೊಡುಗೆ ಬಹಳಷ್ಟಿದೆ. ಅವರನ್ನು ಕಡಿಮೆ ಮಾಡಿ ನಮ್ಮ ಸರ್ಕಾರ ಜಾಸ್ತಿ ಮಾಡಿದೆ ಎಂದು ಹೇಳಲು ಹೊರಟಿದ್ದಲ್ಲ. ಆದರೆ ನಾಲ್ವಡಿ ಕೃಷ್ಣರಾಜ ಒಡೆಯರ್ ಬಿಟ್ಟರೆ ಮೈಸೂರಿಗೆ ಹೆಚ್ಚು ಅನುದಾನಗಳನ್ನು ಕೊಟ್ಟಿರುವ ಸರ್ಕಾರವೆಂದರೆ ಅದು ಕಾಂಗ್ರೆಸ್ ಸರ್ಕಾರ, ಹೆಚ್ಚು ಅನುದಾನ ಕೊಟ್ಟ ಮುಖ್ಯಮಂತ್ರಿ ಎಂದರೆ ಅದು ಸಿದ್ದರಾಮಯ್ಯ. ಬೇಕಿದ್ದರೆ ಅಂಕಿಅಂಶ ತೆಗೆದು ನೋಡಲಿ ಎಂದು ಹೇಳಿದರು.
ಕೊಡಗಿನಲ್ಲಿ ಅಬ್ಬರದ ಮಳೆ: ಕೆಆರ್ಎಸ್ ಒಳಹರಿವಿನಲ್ಲಿ ಭಾರೀ ಏರಿಕೆ
ಎಐ ಕನ್ನಡ ಕೃಷಿ ವೆಬ್ಸೈಟ್ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


