ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಡ್ರಗ್ಸ್ ತಯಾರಿಕಾ ಘಟಕ ಪತ್ತೆಯಾದ ಹಿನ್ನೆಲೆಯಲ್ಲಿ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ.
ನಿನ್ನೆ ಮೈಸೂರು ನಗರದಾದ್ಯಂತ ದಿಢೀರ್ ಕಾರ್ಯಾಚರಣೆ ನಡೆದಿದ್ದು, ಪೊಲೀಸ್ ಕಮೀಷನರ್ ಸೀಮಾ ಲಾಟ್ಕರ್ ಅವರೇ ಖುದ್ದು ಫೀಲ್ಡ್‌ಗೆ ಇಳಿದಿದ್ದಾರೆ.
ತಡರಾತ್ರಿ ಮಂಡಿ ಮೊಹಲ್ಲಾ ಠಾಣೆ ವ್ಯಾಪ್ತಿಯಲ್ಲಿ ಮಿಡ್‌ನೈಟ್ ಕಾರ್ಯಾಚರಣೆ ನಡೆದಿದ್ದು, 26 ಮಂದಿ ಗಾಂಜಾ ಸೇವಿಸಿದವರು ಪತ್ತೆಯಾಗಿದ್ದಾರೆ.
ಒಬ್ಬ ಮಾರಾಟಗಾರನನ್ನು ವಶಕ್ಕೆ ಪಡೆಯಲಾಗಿದ್ದು, ಮಂಡಿ, ಮೊಹಲ್ಲಾ, ಉದಯಗಿರಿ, ಎನ್.ಆರ್.ಮೊಹಲ್ಲಾ, ನಜರ್‌ಬಾದ್, ಕೆ.ಆರ್.ಮೊಹಲ್ಲಾ ಸೇರಿದಂತೆ ಹಲವು ಪಡೆ ಏಕಕಾಲಕ್ಕೆ ಕಾರ್ಯಾಚರಣೆ ನಡೆಸಲಾಗಿದೆ.
ಡಿಸಿಪಿಗಳು, ಎಸಿಪಿಗಳು ಇನ್ಸ್‌ಪೆಕ್ಟರ್, ಸಬ್ ಇನ್ಸ್‌ಪೆಕ್ಟರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, 59 ಗೋದಾಮುಗಳನ್ನು ಪರಿಶೀಲನೆ ಮಾಡಲಾಗಿದೆ.
ಹಾಸ್ಟೆಲ್‌ಗಳು ಸೇರಿದಂತೆ ಹಲವು ಕಡೆ ತಪಾಸಣೆ ನಡೆಸಲಾಗಿದ್ದು, ಈ ಹಿಂದೆ ಗಾಂಜಾ ಮಾರಾಟ ಮಾಡುತ್ತಿದ್ದ 35 ಜನರನ್ನು ವಿಚಾರಣೆ ನಡೆಸಿದ್ದಾರೆ.
ಇಂದು ಸಹಾ ಕಾರ್ಯಾಚರಣೆ ಮುಂದುವರಿಯಲಿರುವ ಸಾಧ್ಯತೆಯಿದ್ದು, ಗಾಂಜಾ ಮಾರಾಟ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸರು ಮುಂದಾಗಿದ್ದಾರೆ.
ಇನ್ನು ಮಹಾರಾಷ್ಟ್ರ ಪೊಲೀಸರು ಮೈಸೂರಿನಲ್ಲಿ ಅಕ್ರಮವಾಗಿ ತಲೆ ಎತ್ತಿದ್ದ ಮಾದಕ ವಸ್ತು ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿ 50ಕ್ಕೂ ಹೆಚ್ಚು ಕೆಜಿ ಎಂಡಿಎಂಎ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಭಂಧಿಸಿದಂತೆ ಎನ್.ಆರ್.ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಲಕ್ಷ್ಮಿಕಾಂತ್ ತಳವಾರ್ ಅವರನ್ನು ಅಮಾನತುಪಡಿಸಲಾಗಿದೆ. ಸದರಿ ಸ್ಥಳಕ್ಕೆ ಸಿಸಿಬಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ನಿರೀಕ್ಷಕರಾದ ಶಬ್ಬೀರ್ ಹುಸೇನ್ ರವರನ್ನು ಪ್ರಭಾರ ನಿರೀಕ್ಷಕರಾಗಿ ನೇಮಕ ಮಾಡಲಾಗಿದೆ.
ಏಡ್ಸ್‌ನಿಂದ ತಮ್ಮ ಸತ್ತ ಎಂದು ಗ್ರಾಮಕ್ಕೆ ಮೃತದೇಹ ತಂದ ಅಕ್ಕ; ಕೊಲೆ ಮಾಡಿ ಸಿಕ್ಕಿಬಿದ್ಳು ಚಾಲಾಕಿ!
ಎಐ ಕೃಷಿ ಕನ್ನಡ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


