Monday, March 30, 2026
spot_img
More
    spot_img
    HomeStateDistrictಅಮೆರಿಕಾದಿಂದಲೇ ಕಳ್ಳರ ಓಡಿಸಿದ ಮಗಳು; ಮುಧೋಳದಲ್ಲಿ ಚಡ್ಡಿ ಗ್ಯಾಂಗ್ ಕಳ್ಳತನ ಯತ್ನ ವಿಫಲ

    ಅಮೆರಿಕಾದಿಂದಲೇ ಕಳ್ಳರ ಓಡಿಸಿದ ಮಗಳು; ಮುಧೋಳದಲ್ಲಿ ಚಡ್ಡಿ ಗ್ಯಾಂಗ್ ಕಳ್ಳತನ ಯತ್ನ ವಿಫಲ

    ಕೆಲವು ತಿಂಗಳ ಹಿಂದೆ ಬೆಂಗಳೂರು ಸೇರಿದಂತೆ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಚಡ್ಡಿ ಗ್ಯಾಂಗ್ ಕಳ್ಳತನ ಮಾಡಿ ಕಣ್ಮರೆಯಾಗಿತ್ತು. ಇದೀಗ ಮತ್ತೆ ರಾಜ್ಯದಲ್ಲಿ ಚಡ್ಡಿ ಗ್ಯಾಂಗ್ ಅಲರ್ಟ್! ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ಮನೆಗೆ ಕನ್ನ ಹಾಕಲು ಬಂದ ಕಳ್ಳರನ್ನು, ಅಮೆರಿಕಾದಲ್ಲಿದ್ದ ಮನೆಯ ಮಾಲಿಕನ ಪುತ್ರಿ ಅಲ್ಲಿಂದಲೇ ಲೈವ್‌ ಮೂಲಕ ಎದುರಿಸಿ ಓಡಿಸಿದ ಘಟನೆ ಬೆಳಕಿಗೆ ಬಂದಿದೆ.

    ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನಲ್ಲಿರುವ ಪಿಡಬ್ಲ್ಯೂಡಿ ನಿವೃತ್ತ ಇಂಜಿನಿಯರ್ ಹನುಮಂತ ಗೌಡರ ಮನೆಗೆ ಚಡ್ಡಿ ಗ್ಯಾಂಗ್ ಕನ್ನ ಹಾಕಲು ರಾತ್ರಿ ಆಗಮಿಸಿದೆ. ನಾಲ್ವರಿದ್ದ ಚಡ್ಡಿ ಗ್ಯಾಂಗ್ ರಾತ್ರಿ ಒಂದು ಗಂಟೆಗೆ ಮನೆಗೆ ಎಂಟ್ರಿ ಕೊಟ್ಟಿತ್ತು. ಈ ಮನೆಗೆ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿತ್ತು. ಹನುಮಂತಗೌಡರ ಪುತ್ರಿ ಶೃತಿ ಅಮೇರಿಕಾದಲ್ಲಿ ವಾಸಿಸುತ್ತಿದ್ದು, ಈ ಸಿಸಿಟಿವಿ ಕ್ಯಾಮೆರಾವನ್ನು ತಮ್ಮ ಮೊಬೈಲ್‌ಗೆ ಕನೆಕ್ಟ್ ಮಾಡಿಕೊಂಡಿದ್ದರು. ಅಲ್ಲಿಂದಲೇ ಮನೆಯವರ ಜೊತೆ ಸಂಪರ್ಕವಿಟ್ಟುಕೊಂಡಿದ್ದರು.

    ಮಧ್ಯರಾತ್ರಿ ಚಡ್ಡಿ ಗ್ಯಾಂಗ್ ಮನೆ ಒಳಗೆ ನುಗ್ಗಿದ್ದು, ಈ ವೇಳೆ ಶೃತಿ ಮೊಬೈಲ್‌ಗೆ ಅಲರ್ಟ್ ಮೆಸೇಜ್ ಬಂದಿದೆ. ಮೊಬೈಲ್ ಓಪನ್ ಮಾಡಿ ನೋಡಿದಾಗ ಚಡ್ಡಿ ಗ್ಯಾಂಗ್ ಮನೆಗೆ ಬಂದಿರುವುದು ಕಂಡು ಬಂದಿದೆ. ಕೂಡಲೆ ಮನೆಯವರಿಗೆ ಫೋನ್ ಮಾಡಿದ್ದಾಳೆ. ಕಳ್ಳರು ನುಗ್ಗಿರುವ ಬಗ್ಗೆ ಹೇಳಿದ್ದಾಳೆ. ತಕ್ಷಣ ಹನುಮಂತ ಗೌಡರು ಮನೆಯ ಬಾಗಿಲು ತೆರೆದಾಗ ಚಡ್ಡಿ ಗ್ಯಾಂಗ್ ಅಲ್ಲಿಂದ ಕಾಲ್ಕಿತ್ತಿದೆ.

    ಇನ್ನು ಈ ಚಡ್ಡಿ ಗ್ಯಾಂಗ್, ಹನುಮಂತ ಗೌಡರ ಮನೆಗೆ ನುಗ್ಗುವ ಮೊದಲು, ಅಶೋಕ್ ಕರಿಹೊನ್ನ ಎಂಬವರ ಮನೆಗೂ ನುಗ್ಗಿತ್ತಂತೆ. ಅಲ್ಲಿ 100 ಗ್ರಾಂ ಚಿನ್ನ ದೋಚಿ ಪರಾರಿಯಾಗಿದೆ. ಅಮೆರಿಕದಲ್ಲಿ ನೆಲೆಸಿದ್ದ ಸಾಫ್ಟ್​ವೇರ್ ಎಂಜಿನಿಯರ್​ ಶ್ರುತಿ ಸಮಯಪ್ರಜ್ಞೆಯಿಂದ ಮನೆ ಕಳ್ಳತನ ತಪ್ಪಿದೆ. ಇದೀಗ ಚಡ್ಡಿ ಗ್ಯಾಂಗ್ ಬಗ್ಗೆ ಕೇಸ್​ ದಾಖಲಿಸಿಕೊಂಡಿರುವ ಮುಧೋಳ ಪೊಲೀಸರು, ತನಿಖೆ ಆರಂಭಿಸಿದ್ದಾರೆ.

    ಗಣೇಶ ಮೆರವಣಿಗೆ: ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ಬಂದ್, ಯಲಹಂಕಕ್ಕೆ ಹೋಗುವ ಮುನ್ನ ಗಮನಿಸಿ!


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಬ್ರೇಕಿಂಗ್ರಾ! ಮನವಮಿ ಹಬ್ಬಕ್ಕೆ ಮಾರುಕಟ್ಟೆ ಬಂದ್ ಆಗುತ್ತಾ? ಹೂಡಿಕೆದಾರರಿಗೆ ಕ್ಲಿಯರ್ ಮಾಹಿತಿ!

    “ಸ್ಟಾಕ್ ಮಾರ್ಕೆಟ್ ಹಾಲಿಡೇ 2026” ಇದೀಗ ಹೂಡಿಕೆದಾರರಲ್ಲಿ ದೊಡ್ಡ ಗೊಂದಲ ಮೂಡಿಸಿದೆ. ರಾಮನವಮಿ ಹಬ್ಬದ ಹಿನ್ನೆಲೆಯಲ್ಲಿ ಗುರುವಾರ ಅಥವಾ ಶುಕ್ರವಾರ ಷೇರು ಮಾರುಕಟ್ಟೆ ಬಂದ್ ಆಗುತ್ತದೆಯಾ? ಎಂಬ ಪ್ರಶ್ನೆ ಟ್ರೇಡರ್‌ಗಳ ನಡುವೆ ಭಾರೀ...

    ಬ್ರೇಕಿಂಗ್! ಮಾರುಕಟ್ಟೆ ರಾಕೆಟ್—ಸೆನ್ಸೆಕ್ಸ್ 1300 ಪಾಯಿಂಟ್ ಜಿಗಿತ! ರೂಪಾಯಿ ಕುಸಿತ, ಚಿನ್ನ ಏರಿಕೆ… ಏನಿದು ಮಿಶ್ರ ಸಿಗ್ನಲ್?

    “ಸ್ಟಾಕ್ ಮಾರ್ಕೆಟ್ 24 ಮಾರ್ಚ್ 2026” ಹೂಡಿಕೆದಾರರಿಗೆ ಒಂದೇ ದಿನದಲ್ಲಿ ರೋಲರ್ ಕೋಸ್ಟರ್ ಅನುಭವ ನೀಡಿದೆ! ಒಂದೆಡೆ ಷೇರು ಮಾರುಕಟ್ಟೆ ಭರ್ಜರಿ ಏರಿಕೆ ಕಂಡಿದ್ದರೆ, ಇನ್ನೊಂದೆಡೆ ರೂಪಾಯಿ ಕುಸಿತ ಮತ್ತು ಚಿನ್ನದ ಬೆಲೆ...

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading