Thursday, May 14, 2026
spot_img
More
    spot_img
    HomeLatest newsಕೇಂದ್ರ ಸರ್ಕಾರಿ ನೌಕರರಿಗೆ ಸಿಹಿಸುದ್ದಿ: 8ನೇ ವೇತನ ಆಯೋಗ ರಚನೆಗೆ ಕೇಂದ್ರ ಸರ್ಕಾರ ಅಸ್ತು

    ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿಸುದ್ದಿ: 8ನೇ ವೇತನ ಆಯೋಗ ರಚನೆಗೆ ಕೇಂದ್ರ ಸರ್ಕಾರ ಅಸ್ತು

    ಹೊಸದಿಲ್ಲಿ: ಕೇಂದ್ರ ಸರ್ಕಾರ ತನ್ನ ನೌಕರರಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಅವರ ಬಹು ದಿನಗಳ ಬೇಡಿಕೆಯಾದ 8ನೇ ವೇತನ ಆಯೋಗವನ್ನು ರಚಿಸಿ ಆದೇಶ ಹೊರಡಿಸಿದೆ.

    ನವೆಂಬರ್‌ 18ರೊಳಗೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದ್ದು, ದೀಪಾವಳಿ ಬೆನ್ನಲ್ಲೇ ಕೇಂದ್ರ ಸರ್ಕಾರ ಈ ನಿರ್ಣಯ ಕೈಗೊಂಡಿರುವುದು ದೇಶದಾದ್ಯಂತ ಇರುವ 50 ಲಕ್ಷಕ್ಕೂ ಹೆಚ್ಚಿನ ನೌಕರರು ಹಾಗೂ ಪಿಂಚಣಿದಾರರಲ್ಲಿ ಸಂಭ್ರಮ ಮನೆಮಾಡಿದೆ.

    ಕೇಂದ್ರ ಸಚಿವ ಸಂಪುಟ ಸಭೆಯ ಬಳಿಕ ಈ ಕುರಿತು ಮಾಹಿತಿ ನೀಡಿದ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ನ್ಯಾಯಮೂರ್ತಿ ರಂಜನಾ ಪ್ರಕಾಶ್‌ ದೇಸಾಯಿ ಅವರ ನೇತೃತ್ವದಲ್ಲಿ ಪ್ರಾಧ್ಯಾಪಕ ಪುಲಕ್‌ ಘೋಷ್‌ ಮತ್ತು ಪಂಕಜ್‌ ಜೈನ್‌ ಸೇರಿದಂತೆ ಸಮಿತಿಯನ್ನು ರಚಿಸಲಾಗಿದ್ದು, ಈ ಸಮಿತಿ ನೌಕರರ ವೇತನ ರಚನೆ ಹಾಗೂ ಇತರೆ ಭತ್ಯೆಗಳನ್ನು ನಿರ್ಧರಿಸಲಿದೆ, ನವೆಂಬರ್‌ 18ರೊಳಗೆ ವರದಿ ಸಲ್ಲಿಸಲಿದೆ ಎಂದರು.

    ಇನ್ನು ಈ ವೇತನ ಆಯೋಗದ ಪ್ರಮುಖ ಗುರಿ ಕೇವಲ ವೇತನ ಹೆಚ್ಚಳ ಮಾತ್ರವಲ್ಲ, ನೌಕರರ ಜೀವನಮಟ್ಟವನ್ನು ಸುಧಾರಿಸಲು ಕೇಂದ್ರೀಕೃತವಾಗಿರಲಿದೆ. ಅಲ್ಲದೇ ದೇಶದ ಆರ್ಥಿಕ ಸ್ಥಿತಿ, ಹಣದುಬ್ಬರದ ಪರಿಣಾಮ, ಕೊಡುಗೆ ರಹಿತ ಪಿಂಚಣಿದಾರರ ಹೊರೆ, ರಾಜ್ಯಗಳ ಆರ್ಥಿಕ ಆಯೋಗದ ಮೇಲೆ ಪರಿಣಾಮ, ಕೇಂದ್ರ, ಸಾರ್ವಜನಿಕ ಮತ್ತು ಖಾಸಗಿ ವಲಯಗಳ ವೇತನದ ಹೋಲಿಕೆ ಅಂಶಗಳನ್ನು ಪರಿಗಣಿಸಿ ಆಯೋಗ ವರದಿಯನ್ನು ಸಿದ್ಧಪಡಿಸಲಿದೆ.

    ನನ್ನ ಅರ್ಹತೆ ಏನಿದ್ದರೂ ಕೆಪಿಸಿಸಿ ಕಚೇರಿಯಲ್ಲಿ ಕಸ ಗುಡಿಸುವುದಷ್ಟೇ ಎಂದ ಪ್ರದೀಪ್‌ ಈಶ್ವರ್‌


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಬೆಂಗಳೂರಿನಲ್ಲಿ ಮುಂಗಾರು ಆರ್ಭಟ: ಆಲಿಕಲ್ಲು ಮಳೆ, ಗುಡುಗು-ಸಿಡಿಲಿಗೆ ನಗರ ತತ್ತರ

    ಬೆಂಗಳೂರು: ಸಂಜೆ ಐಟಿ ರಾಜಧಾನಿ ಬೆಂಗಳೂರಿನ ಮೇಲೆ ಪ್ರಕೃತಿ ತನ್ನ ಕೋಪವನ್ನು ಸಂಪೂರ್ಣವಾಗಿ ತೋರಿಸಿತು. ಕಾರ್ಮೋಡ ಕವಿದ ಆಕಾಶದಿಂದ ಮೊದಲು ಗುಡುಗು-ಸಿಡಿಲಿನ ಆರ್ಭಟ, ಬಳಿಕ ಆಲಿಕಲ್ಲು ಮಳೆ ಮತ್ತು ಜೋರು ಗಾಳಿ ನಗರವನ್ನು...

    ಇಂಡೋನೇಷ್ಯಾದ ಡೇ-ಕೇರ್‌ನಲ್ಲಿ 53 ಮಕ್ಕಳಿಗೆ ನಡೆದ ಅಮಾನವೀಯ ದೌರ್ಜನ್ಯ: ವಿಡಿಯೋ ನೋಡಿ ಜಗತ್ತೇ ಬೆಚ್ಚಿ ಬಿದ್ದಿತು

    ಇಂಡೋನೇಷ್ಯಾದ ಜಾವಾ ದ್ವೀಪದ ಯೋಗ್ಯಕರ್ತ ನಗರದಲ್ಲಿ ನಡೆದ ಒಂದು ಆಘಾತಕಾರಿ ಘಟನೆ ಇಡೀ ಜಗತ್ತನ್ನೇ ಬೆಚ್ಚಿ ಬೀಳಿಸಿದೆ. 'ಲಿಟಲ್ ಅರೇಶಾ' ಎಂಬ ಡೇ-ಕೇರ್ ಕೇಂದ್ರದಲ್ಲಿ ಎರಡು ವರ್ಷಕ್ಕಿಂತ ಕಡಿಮೆ ವಯಸ್ಸಿನ 53 ಮಕ್ಕಳನ್ನು...

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading