ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತ ಚರ್ಚೆಗಳು ಜೋರಾಗಿದ್ದು, ಸಿದ್ದರಾಮಯ್ಯ ಬದಲು ಡಿಕೆ ಶಿವಕುಮಾರ್ ಈ ಅವಧಿಯಲ್ಲಿಯೇ ಅಧಿಕಾರದ ಚುಕ್ಕಾಣಿ ಹಿಡಿಯಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.
ಅತ್ತ ನಿನ್ನೆ ( ಅಕ್ಟೋಬರ್ 27 ) ಮಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕಮಾಂಡ್ ಒಪ್ಪಿಕೊಂಡರೆ ನಾನೇ ಐದು ವರ್ಷ ಸಿಎಂ ಎಂದೂ ಸಹ ಹೇಳಿದ್ದಾರೆ. ಇದಕ್ಕೆ ಪ್ರತಿಯಾಗಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿಗಳೇ ಹೇಳಿದ ಮೇಲೆ ಇನ್ನೇನಿದೆ ನಾವೆಲ್ಲ ಅದನ್ನು ಪಾಲಿಸುತ್ತೇವೆ ಎಂದಿದ್ದಾರೆ.
ಹೀಗೆ ಸಿಎಂ ಬದಲಾವಣೆ ಚರ್ಚೆಗಳು ನಡೆಯುತ್ತಿರುವಾಗಲೇ ರಿಪಬ್ಲಿಕ್ ಟಿವಿ ಚರ್ಚಾ ವೇದಿಕೆಯಲ್ಲಿ ಭಾಗವಹಿಸಿದ್ದ ಮಾಜಿ ಸಚಿವ ಕೆಎನ್ ರಾಜಣ್ಣ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾದರೆ ಕಾಂಗ್ರೆಸ್ ಕಚೇರಿಗಳಿಗೆ ದೊಡ್ಡ ಬೀಗ ಹಾಕಬೇಕಾಗುತ್ತದೆ ಎಂದಿದ್ದಾರೆ.
ಈ ಹೇಳಿಕೆ ಕುರಿತು ಶಾಸಕ ಪ್ರದೀಪ್ ಈಶ್ವರ್ ಅವರಿಗೆ ಮಾಧ್ಯಮದವರು ಪ್ರಶ್ನೆಯನ್ನು ಕೇಳಲಾಗಿದ್ದು, ಇದಕ್ಕೆ ಪ್ರತಿಕ್ರಿಯಿಸಿದ ಪ್ರದೀಪ್ ಈಶ್ವರ್ ʼನೋಡಿ ರಾಜಣ್ಣ ಸಾಹೇಬ್ರು ದೊಡ್ಡವರಿದ್ದಾರೆ. ಡಿಕೆ ಸಾಹೇಬ್ರು, ಸಿದ್ದರಾಮಯ್ಯ ಸಾಹೇಬ್ರು ದೊಡ್ಡವರಿದ್ದಾರೆ. ನನ್ನ ಅರ್ಹತೆ ಏನಿದ್ದರೂ ಕೆಪಿಸಿಸಿ ಕಚೇರಿಯಲ್ಲಿ ಕಸ ಗುಡಿಸುವುದಷ್ಟೇ. ನಾನಿನ್ನೂ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಬಗ್ಗೆ ತೀರ್ಮಾನ ಮಾಡುವಷ್ಟು ದೊಡ್ಡವನಾಗಿಲ್ಲ ಸರ್ʼ ಎಂದು ಹೇಳಿದ್ದಾರೆ.
ತನ್ನನ್ನು ಖಾಲಿ ಟ್ರಂಕ್ ಎಂದಿದ್ದ ಡಿಕೆಶಿ ಮನೆಗೆ ಬೆಳ್ಳಂಬೆಳಗ್ಗೆ ಭೇಟಿ ನೀಡಿದ ತೇಜಸ್ವಿ ಸೂರ್ಯ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


