Monday, August 3, 2026
spot_img
More
    spot_img
    HomeBreaking Newsಬಿಜೆಪಿ ಹೈಕಮಾಂಡ್‌ ವಿರುದ್ಧ ಬೇಸರ ವ್ಯಕ್ತಪಡಿಸಿದ ಸದಾನಂದಗೌಡ

    ಬಿಜೆಪಿ ಹೈಕಮಾಂಡ್‌ ವಿರುದ್ಧ ಬೇಸರ ವ್ಯಕ್ತಪಡಿಸಿದ ಸದಾನಂದಗೌಡ

    ಬೆಂಗಳೂರು: ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದ ಹೋರಾಟ ಹಾಗೂ ಬಿಜೆಪಿ ಭಿನ್ನಮತದ ಬಗ್ಗೆ ಎರಡು ಪತ್ರ ಬರೆದರೂ ಹೈಕಮಾಂಡ್‌ನಿಂದ ಯಾವುದೇ ಕ್ರಮವಿಲ್ಲ ಎಂದು ಮಾಜಿ ಸಿಎಂ ಡಿ.ವಿ.ಸದಾನಂದಗೌಡ ಬೇಸರ ವ್ಯಕ್ತಪಡಿಸಿದ್ದಾರೆ.

    Advertisement

    ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯ ಬಿಜೆಪಿಯನ್ನು ದಕ್ಷಿಣ ಭಾರತದ ಹೆಬ್ಬಾಗಿಲು ಎಂದು ಕರೆಯುತ್ತಾರೆ. ಆದರೆ ರಾಜ್ಯ ಬಿಜೆಪಿಯಲ್ಲಿನ ಭಿನ್ನಮತ, ಬಣ ರಾಜಕೀಯದಿಂದಾಗಿ ಇಂದು ಈ ಪಕ್ಷಕ್ಕೆ ಈ ಸ್ಥಿತಿ ಬಂದಿದೆ ಎಂದು ಕಳವಳ ವ್ಯಕ್ತಪಡಿಸಿದರು.

    ಈ ಬಗ್ಗೆ ನಾನು ಬಿಜೆಪಿ ವರಿಷ್ಠರಿಗೆ ಪತ್ರ ಬರೆದಿದ್ದೆ. ಇತ್ತೀಚೆಗೆ ನಡೆಯುತ್ತಿರುವ ಬೆಳವಣಿಗೆ ಬಗ್ಗೆಯೂ ಪತ್ರ ಬರೆದಿದ್ದೆ. ಆದರೆ ಎರಡೂ ಪತ್ರಗಳಿಗೂ ವರಿಷ್ಠರಿಂದ ಯಾವುದೇ ಉತ್ತರ ಬಂದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

    ನಮ್ಮ ನಾಯಕ ನಡುವಿನ ಭಿನ್ನಮತ ಹೆಚ್ಚು ಸದ್ದು ಮಾಡುತ್ತಿದೆ. ಇದು ಸರಿಯಲ್ಲ. ಎರಡು ಪತ್ರ ಬರೆದಿದ್ದರೂ ಹೈಕಮಾಂಡ್‌ನಿಂದ ಯಾವುದೇ ಕ್ರಮ ಜರುಗಿಸದಿರುವುದು ಹಾಗೂ ಪಕ್ಷಕ್ಕೆ ಇಂದು ಈ ಸ್ಥಿತಿ ಬಂದಿರುವುದು ಬಹಳ ನೋವಿನ ಸಂಗತಿ ಎಂದು ಬೇಸರಪಟ್ಟರು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading