Friday, November 6, 2026
spot_img
More
    spot_img
    HomeBreaking Newsವಯನಾಡು ಸಂಸದೆಯಾಗಿ ಪ್ರಿಯಾಂಕಾ ಗಾಂಧಿ ಪ್ರಮಾಣ ವಚನ ಸ್ವೀಕಾರ

    ವಯನಾಡು ಸಂಸದೆಯಾಗಿ ಪ್ರಿಯಾಂಕಾ ಗಾಂಧಿ ಪ್ರಮಾಣ ವಚನ ಸ್ವೀಕಾರ

    ನವದೆಹಲಿ: ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ನೂತನ ಸಂಸದೆಯಾಗಿ ರಾಹುಲ್‌ ಗಾಂಧಿ ಸಹೋದರಿ ಪ್ರಿಯಾಂಕಾ ಗಾಂಧಿ ಅವರಿಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

    ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಇಂದು ಲೋಕಸಭಾ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದರು.

    ವಯನಾಡು ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ಅವರು ಭಾರತೀಯ ಕಮ್ಯುನಿಸ್ಟ್‌ ಪಕ್ಷದ ಸತ್ಯನ್‌ ಮೊಕೇರಿ ಅವರನ್ನು 4,10,931 ಮತಗಳ ಅಂತರದಿಂದ ಸೋಲಿಸಿ ಇತಿಹಾಸ ಬರೆದಿದ್ದರು.

    ಕಾಂಗ್ರೆಸ್‌ ಪಕ್ಷದ ಭದ್ರಕೋಟೆಯಾಗಿರುವ ವಯನಾಡು ಕ್ಷೇತ್ರದಲ್ಲಿ ಪ್ರಿಯಾಂಕಾ ಗಾಂಧಿ‌, ಬಿಜೆಪಿಯ ನವ್ಯಾ ಹರಿದಾಸ್ ಮತ್ತು ಭಾರತೀಯ ಕಮ್ಯುನಿಸ್ಟ್‌ ಪಕ್ಷದ ಸತ್ಯನ್ ಮೊಕೇರಿ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿತ್ತು. ಆದರೆ ಕಾಂಗ್ರೆಸ್‌ನ ಪ್ರಿಯಾಂಕಾ ಗಾಂಧಿ ಐತಿಹಾಸಿಕ ಗೆಲುವು ಸಾಧಿಸಿದ್ದು, ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

    ಇನ್ನು ಪ್ರಿಯಾಂಕಾ ಗಾಂಧಿ ಅವರು ಮೊದಲ ಬಾರಿಗೆ ಸಂಸತ್‌ ಪ್ರವೇಶ ಮಾಡಿದ್ದು, ಕೇರಳದ ಸಂಸ್ಕೃತಿಯ ಸೀರೆ ತೊಟ್ಟು, ಸಂವಿಧಾನದ ಪ್ರತಿ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ್ದು ವಿಶೇಷವೆನಿಸಿದೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search