Friday, August 7, 2026
spot_img
More
    spot_img
    HomeStateಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಚರ್ಚೆ ನಡೆಯುತ್ತಿದೆ: ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

    ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಚರ್ಚೆ ನಡೆಯುತ್ತಿದೆ: ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

    ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಬದಲಾವಣೆ ಬಗ್ಗೆ ಚರ್ಚೆಗಳು ನಡೆಯುತ್ತಿದೆ ಎಂದು ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದು, ಈ ಮೂಲಕ ಕೆಪಿಸಿಸಿ ಅಧ್ಯಕ್ಷ ಬದಲಾವಣೆ ಸುಳಿವು ನೀಡಿದ್ದಾರೆ.

    Advertisement

    ಸಚಿವ ಸಂಪುಟ ಪುನರ್‌ ರಚನೆ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಸಚಿವ ಸಂಪುಟ ಪುನರ್‌ ರಚನೆ ವಿಚಾರದ ಬಗ್ಗೆ ನನಗೆ ಯಾವುದೇ ಮಾಹಿತಿ ಗೊತ್ತಿಲ್ಲ. ಸಿಎಂ ಸಿದ್ದರಾಮಯ್ಯ ದೆಹಲಿಗೆ ಹೋಗುತ್ತಿದ್ದಾರೆ. ಹೈಕಮಾಂಡ್‌ ನಾಯಕರ ಬಗ್ಗೆ ಸಿಎಂ ಚರ್ಚೆ ನಡೆಸಲಿದ್ದಾರೆ. ಸಿಎಂ, ಡಿಸಿಎಂ, ಹೈಕಮಾಂಡ್‌ ಈ ಬಗ್ಗೆ ಸೂಕ್ತ ತೀರ್ಮಾನ ಮಾಡುತ್ತಾರೆ ಎಂದರು.

    ಇನ್ನು ಮುಂದುವರಿದು ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಮಾತುಗಳು ಇವೆ. ಡಿಕೆಶಿ ಒಳ್ಳೆಯ ಕೆಲಸ ಮಾಡಿ ಪಕ್ಷ ಕಟ್ಟಿ ಬೆಳೆಸಿದ್ದಾರೆ. ಆದರೆ ಅವರ ಅವಧಿ 5 ವರ್ಷಕ್ಕಿಂತ ಹೆಚ್ಚಾಗಿದೆ. ಆದರೆ ಯಾರಿಗಾದರೂ ಪೂರ್ತಿ ಅವಧಿಗೆ ಅಧ್ಯಕ್ಷ ಸ್ಥಾನ ಕೊಡೋದು ತಪ್ಪಲ್ಲ. ಅದು ಯಾವ ರೀತಿ ತೀರ್ಮಾನ ಆಗುತ್ತದೆ ನೋಡೋಣ ಎನ್ನುವ ಮೂಲಕ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಆಗಬೇಕು ಎಂದು ಪರೋಕ್ಷವಾಗಿ ಹೇಳಿದರು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading