ಬೆಂಗಳೂರು: ಇನ್ನು ನಾಲ್ಕೈದು ದಿನಗಳಲ್ಲಿ ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳ ಖಾತೆಗೆ ಹಣ ಹಾಕಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳ ಬಗ್ಗೆ ಆರೋಪ ಮಾಡುವವರು ಹಣ ಹಾಕಿದರೂ ಆರೋಪಿಸುತ್ತಾರೆ. ಹಣ ಹಾಕದಿದ್ದರೂ ಆರೋಪ ಮಾಡುತ್ತಾರೆ. ಚುನಾವಣೆ ಗೆಲುವಿಗಾಗಿ ಹಣ ಹಾಕುತ್ತಾರೆ ಎಂದು ಆರೋಪ ಮಾಡುತ್ತಾರೆ. ಈಗ ಚುನಾವಣೆ ಯಾವುದೂ ಇಲ್ಲವಲ್ಲ ಎಂದರು.
ಇನ್ನು ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳ ಖಾತೆಗೆ ಹಣ ಜಮಾ ಆಗುವುದು ವಿಳಂಬವಾಗಿದ್ದ ಬಗ್ಗೆ ಮಹಿಳೆಯರು ಅಸಮಾಧಾನ ವ್ಯಕ್ತಪಡಿಸಿದ್ದರು. ಇದೀಗ ಅವರಿಗೆ ಸಿಹಿ ಸುದ್ದಿ ಸಿಕ್ಕಿದ್ದು, ಇನ್ನು ನಾಲ್ಕೈದು ದಿನಗಳಲ್ಲಿ ಗೃಹಲಕ್ಷ್ಮೀ ಯೋಜನೆ ಹಣ ಖಾತೆಗೆ ಜಮಾ ಮಾಡಲಾಗುವುದು ಎಂದು ಮಾಹಿತಿ ನೀಡಿದರು.
ಈ ಮೂಲಕ ಚುನಾವಣೆ ಮುಗಿಯಿತು ಈ ಬಾರಿ ಗೃಹಲಕ್ಷ್ಮೀ ಹಣ ಜಮೆಯಾಗುವುದು ತುಂಬಾ ದಿನಗಳಾಗುತ್ತದೆ ಎಂದು ಅನುಮಾನ ವ್ಯಕ್ತಪಡಿಸುತ್ತಿದ್ದ ಮಹಿಳೆಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಿಹಿಸುದ್ದಿ ನೀಡಿದ್ದಾರೆ.
ಇನ್ನು ನಾಲ್ಕೈದು ದಿನಗಳಲ್ಲಿ ಖಾತೆಗೆ ಹಣ ಜಮೆಯಾಗಲಿದ್ದು, ಸುದ್ದಿ ತಿಳಿದು ಗೃಹಲಕ್ಷ್ಮೀಯರಿಗೆ ಭಾರೀ ಸಂತಸವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


