Friday, August 7, 2026
spot_img
More
    spot_img
    HomeStateಗ್ಯಾರಂಟಿ ಯೋಜನೆಗಳಿಂದ ಹಿಂದೆ ಸರಿಯುವ ಮಾತೇ ಇಲ್ಲ: ಸಚಿವ ಜಿ.ಪರಮೇಶ್ವರ್‌ ಸ್ಪಷ್ಟನೆ

    ಗ್ಯಾರಂಟಿ ಯೋಜನೆಗಳಿಂದ ಹಿಂದೆ ಸರಿಯುವ ಮಾತೇ ಇಲ್ಲ: ಸಚಿವ ಜಿ.ಪರಮೇಶ್ವರ್‌ ಸ್ಪಷ್ಟನೆ

    ಬೆಂಗಳೂರು: ಐದು ಗ್ಯಾರಂಟಿ ಯೋಜನೆಗಳಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಸ್ಪಷ್ಟಪಡಿಸಿದ್ದಾರೆ.

    Advertisement

    ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳ ಬಗ್ಗೆ ಪಕ್ಷ ಹಾಗೂ ಸರ್ಕಾರ ತೀರ್ಮಾನ ತೆಗೆದುಕೊಂಡಿದೆ. ಇದನ್ನು ನಾನು ನಿನ್ನೆಯೂ ಹೇಳಿದ್ದೆ. ಈಗಲೂ ಹೇಳುತ್ತಿದ್ದೇನೆ. ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ. ಯಾರೂ ಕೂಡ ವದಂತಿಗಳಿಗೆ ಕಿವಿಗೊಡಬೇಡಿ. ನಾವು ಕೊಟ್ಟಿರುವ ಮಾತುಗಳನ್ನು ಉಳಿಸಿಕೊಳ್ಳಬೇಕು. ಆದ್ದರಿಂದ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲ್ಲ. ಗ್ಯಾರಂಟಿ ಯೋಜನೆಗಳ ವಿಚಾರದಲ್ಲಿ ಜನ ನಮ್ಮನ್ನು ನಂಬಿ ಮತ ಹಾಕಿ ಗೆಲ್ಲಿಸಿದ್ದಾರೆ. ಆದ್ದರಿಂದ ನಾವು ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ ಎಂದು ಸ್ಪಷ್ಟನೆ ನೀಡಿದರು.

    ಇನ್ನು ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಿಂತು ಹೋಗಿಲ್ಲ. ಗ್ಯಾರಂಟಿ ಯೋಜನೆಗಳಿಗೆ 56 ಸಾವಿರ ಕೋಟಿ ಹೆಚ್ಚುವರಿ ಖರ್ಚಾಗಿದೆ. ಮುಂದಿನ ವರ್ಷಕ್ಕೆ ಗ್ಯಾರಂಟಿ ಯೋಜನೆಗಳಿಗೆ ಕೊಟ್ಟರೂ ಹಣ ದೊರೆಕುತ್ತದೆ. ವಿಪಕ್ಷಗಳ ಟೀಕೆಗೆ ನಾನು ಉತ್ತರ ಕೊಡಲ್ಲ ಎಂದು ವಿಪಕ್ಷಗಳ ವಿರುದ್ಧ ಕಿಡಿಕಾರಿದರು.

    ಇನ್ನು ಕೇಂದ್ರ ಸರ್ಕಾರ ನಮಗೆ ನೀಡುತ್ತಿರುವ ಹಣವನ್ನು ಸರಿಯಾಗಿ ನೀಡುತ್ತಿಲ್ಲ. ಒತ್ತಾಯ ಮಾಡಿ ಹಣ ತಂದು, ಸಂಪನ್ಮೂಲ ಕ್ರೋಢೀಕರಣ ಜಾಸ್ತಿ ಮಾಡಲಾಗಿದೆ ಎಂದು ತಿಳಿಸಿದರು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading