Saturday, November 7, 2026
spot_img
More
    spot_img
    HomeBreaking Newsಉಡುಪಿಯಲ್ಲಿ ನರೇಂದ್ರ ಮೋದಿ, ರೋಡ್ ಶೋ ಆರಂಭ

    ಉಡುಪಿಯಲ್ಲಿ ನರೇಂದ್ರ ಮೋದಿ, ರೋಡ್ ಶೋ ಆರಂಭ

    ಭಾರತದ ಪ್ರಧಾನಿ ನರೇಂದ್ರ ಮೋದಿ ಉಡುಪಿಗೆ ಆಗಮಿಸಿದ್ದಾರೆ. ನರೇಂದ್ರ ಮೋದಿ ರೋಡ್ ಶೋ ಆರಂಭವಾಗಿದ್ದು, ಸಾವಿರಾರು ಜನರು ಮೋದಿ ಸ್ವಾಗತಿಸಿದ್ದಾರೆ. ಉಡುಪಿ ಕೃಷ್ಣ ಮಠಕ್ಕೆ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ಇದಕ್ಕೂ ಮೊದಲು ಅವರು ರೋಡ್ ಶೋ ನಡೆಸುತ್ತಿದ್ದಾರೆ.

    ಮಂಗಳೂರು ವಿಮಾನ ನಿಲ್ದಾಣಕ್ಕೆ ಬೆಳಗ್ಗೆ 10.25ಕ್ಕೆ ನರೇಂದ್ರ ಮೋದಿ ವಿಶೇಷ ವಿಮಾನದ ಮೂಲಕ ಆಗಮಿಸಿದರು. ಕರ್ನಾಟಕ ಸರ್ಕಾರದ ಪರವಾಗಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನರೇಂದ್ರ ಮೋದಿ ಸ್ವಾಗತಿಸಿದರು.

    ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ನರೇಂದ್ರ ಮೋದಿ ಉಡುಪಿ ತಲುಪಿದರು. ಬಳಿಕ ಉಡುಪಿ ಬಿಜೆಪಿ ಜಿಲ್ಲಾ ಘಟಕ ಆಯೋಜನೆ ಮಾಡಿರುವ ರೋಡ್ ಶೋನಲ್ಲಿ ಪಾಲ್ಗೊಂಡಿದ್ದಾರೆ. ಕಲಾತಂಡಗಳ ಮೂಲಕ ಮೋದಿ ಅವರನ್ನು ಬರಮಾಡಿಕೊಳ್ಳಲಾಯಿತು.

    ಸಾವಿರಾರು ಜನರು ರಸ್ತೆಯ ಎರಡೂ ಬದಿಯಲ್ಲಿ ಸೇರಿದ್ದು ಮೋದಿ, ಮೋದಿ ಎಂದು ಘೋಷಣೆಗಳನ್ನು ಕೂಗುತ್ತಿದ್ದಾರೆ. ಹೂವಿನ ಸ್ವಾಗತವನ್ನು ಮೋದಿಗೆ ಕೋರುತ್ತಿದ್ದಾರೆ. ಕಾರಿನ ಹೊರಗೆ ನಿಂತು ರಸ್ತೆಯ ಎರಡೂ ಕಡೆ ನಿಂತಿರುವ ಜನರಿಗೆ ಕೈ ಬೀಸುತ್ತಾ ಮೋದಿ ರಸ್ತೆಯಲ್ಲಿ ಸಾಗುತ್ತಿದ್ದಾರೆ.

    ಉಡುಪಿ ನಗರದ ಬನ್ನಂಜೆ ವೃತ್ತದಿಂದ ಕಲ್ಸಂಕ ಜಂಕ್ಷನ್​ ತನಕ ರೋಡ್ ಶೋ ನಡೆಯುತ್ತಿದೆ. ಉಡುಪಿ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಡ್ರೋನ್ ಹಾರಾಟ ನಿಷೇಧಿಸಲಾಗಿದೆ. ಮಠದ ಅಕ್ಕಪಕ್ಕದ ಪ್ರದೇಶಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ.

    ಮೋದಿ ಕೃಷ್ಣ ಮಠಕ್ಕೆ ಭೇಟಿ ನೀಡುವ ಹಿನ್ನಲೆಯಲ್ಲಿ ಶ್ರುಕ್ರವಾರ ಬೆಳಗ್ಗೆ 8 ರಿಂದ ಮಧ್ಯಾಹ್ನ 3 ರವರೆಗೆ ಶ್ರೀ ಕೃಷ್ಣ ಮಠಕ್ಕೆ ಸಾರ್ವಜನಿಕರ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ. ಶ್ರೀ ಕೃಷ್ಣ ಮಠದಲ್ಲಿ ನರೇಂದ್ರ ಮೋದಿ 1 ಗಂಟೆಗಳ ಕಾಲ ಇರಲಿದ್ದು, ಸಭೆಯನ್ನು ಉದ್ದೇಶಿಸಿ 25 ನಿಮಿಷ ಮಾತನಾಡಲಿದ್ದಾರೆ.

    ಮೋದಿ ಪೋಸ್ಟ್: ಗುರುವಾರ ರಾತ್ರ ಎಕ್ಸ್ ಖಾತೆಯಲ್ಲಿ ಉಡುಪಿ ಭೇಟಿ ಕುರಿತು ಮೋದಿ ಕನ್ನಡದಲ್ಲಿಯೇ ಪೋಸ್ಟ್ ಹಾಕಿದ್ದರು. ‘ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶ ದೊರೆತಿರುವುದು ನನಗೆ ಗೌರವದ ವಿಷಯ. ಗೀತಾ ಪಠಣಕ್ಕಾಗಿ ಸಮಾಜದ ವಿವಿಧ ವರ್ಗಗಳ ಜನರನ್ನು ಒಂದೆಡೆ ಸೇರಿಸುವ ವಿಶೇಷ ಕಾರ್ಯಕ್ರಮ ಇದಾಗಿದೆ. ಈ ಮಠವು ನಮ್ಮ ಸಾಂಸ್ಕೃತಿಕ ಜೀವನದಲ್ಲಿ ಅತ್ಯಂತ ವಿಶೇಷ ಮಹತ್ವವನ್ನು ಹೊಂದಿದೆ. ಶ್ರೀ ಮಧ್ವಾಚಾರ್ಯರಿಂದ ಪ್ರೇರಿತವಾದ ಈ ಮಠವು, ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿದೆ’ ಎಂದು ಹೇಳಿದ್ದರು.

    ನರೇಂದ್ರ ಮೋದಿ ಇಂದು ಕರ್ನಾಟಕ ಮತ್ತು ಗೋವಾ ರಾಜ್ಯದ ಪ್ರವಾಸ ಮಾಡಲಿದ್ದಾರೆ. ಮಧ್ಯಾಹ್ನ 1 ಗಂಟೆಯ ತನಕ ಅವರು ಉಡುಪಿಯಲ್ಲಿ ಇರಲಿದ್ದಾರೆ. ಉಡುಪಿಯಲ್ಲಿರುವ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ. ನಂತರ ಅವರು ಗೋವಾಕ್ಕೆ ಪ್ರಯಾಣಿಸಲಿದ್ದಾರೆ.

    ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ವಿದ್ಯಾರ್ಥಿಗಳು, ಸಾಧು-ಸಂತರು, ವಿದ್ವಾಂಸರು ಮತ್ತು ವಿವಿಧ ವರ್ಗಗಳ ನಾಗರಿಕರು ಸೇರಿದಂತೆ 100,000 ಮಂದಿ ಭಾಗವಹಿಸುವ ʻಲಕ್ಷ ಕಂಠ ಗೀತಾ ಪಾರಾಯಣʼ ಕಾರ್ಯಕ್ರಮದಲ್ಲಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ. ಶ್ರೀಮದ್ ಭಗವದ್ಗೀತೆಯ ಸಾಮೂಹಿಕ ಪಾರಾಯಣಕ್ಕೆ ಸಾಕ್ಷಿಯಾಗಲಿದ್ದಾರೆ.

    ಪ್ರಧಾನಮಂತ್ರಿಗಳು ಶ್ರೀ ಕೃಷ್ಣ ದೇಗುಲದ ಗರ್ಭಗುಡಿಯ ಮುಂಭಾಗದಲ್ಲಿರುವ ʻಸುವರ್ಣ ತೀರ್ಥ ಮಂಟಪʼವನ್ನು ಉದ್ಘಾಟಿಸಲಿದ್ದಾರೆ. ಜೊತೆಗೆ, ಕನಕದಾಸರು ಭಗವಾನ್ ಶ್ರೀಕೃಷ್ಣನ ದಿವ್ಯ ದರ್ಶನವನ್ನು ಪಡೆದ ಸ್ಥಳವೆಂದು ಎಂದು ನಂಬಲಾದ ಪವಿತ್ರ ಕಿಟಕಿಯಾದ ʻಕನಕನ ಕಿಂಡಿʼಗೆ ಕನಕ ಕವಚವನ್ನು ಸಮರ್ಪಿಸಲಿದ್ದಾರೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search