Sunday, September 20, 2026
spot_img
More
    spot_img
    HomeLatest newsಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಜನವರಿ 5ರಂದು ಚಿತ್ರಸಂತೆ ಆಯೋಜನೆ

    ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಜನವರಿ 5ರಂದು ಚಿತ್ರಸಂತೆ ಆಯೋಜನೆ

    ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಜನವರಿ 5ರಂದು ಚಿತ್ರಸಂತೆ ಆಯೋಜನೆ ಮಾಡಲಾಗಿದ್ದು, ಸಿಎಂ ಸಿದ್ದರಾಮಯ್ಯ ಉದ್ಘಾಟನೆ ನೆರವೇರಿಸಲಿದ್ದಾರೆ.

    Advertisement

    ಈ ಬಾರಿ ಹೆಣ್ಣು ಮಗುವಿಗೆ ಚಿತ್ರಸಂತೆ ಸಮರ್ಪಣೆ ಮಾಡುತ್ತಿರುವುದು ಅತ್ಯಂತ ವಿಶೇಷವೆನಿಸಿದೆ.

    ಕರ್ನಾಟಕ ಚಿತ್ರಕಲಾ ಪರಿಷತ್‌ನಿಂದ ಬೆಂಗಳೂರಿನ ಕುಮಾರಕೃಪಾ ರಸ್ತೆಯಲ್ಲಿ ಜನವರಿ.5ರಂದು 22ನೇ ಚಿತ್ರಸಂತೆ ಆಯೋಜನೆ ಮಾಡಲಾಗಿದ್ದು, ಇದಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.

    ಅಂದು ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 9ರವರೆಗೆ ಚಿತ್ರಸಂತೆ ನಡೆಯಲಿದ್ದು, 20 ರಾಜ್ಯಗಳ ಕಲಾವಿದರ ಕಲಾಕೃತಿಗಳು ಅನಾವರಣಗೊಳ್ಳಲಿವೆ.

    ಅಂದು ನಡೆಯುವ ಚಿತ್ರಸಂತೆಯಲ್ಲಿ ಭಾಗವಹಿಸಲು 3177 ಕಲಾವಿದರು ಈಗಾಗಲೇ ಅರ್ಜಿ ಸಲ್ಲಿಸಿದ್ದು, ಮತ್ತಷ್ಟು ಜನ ಕಲಾವಿದರು ಅರ್ಜಿ ಸಲ್ಲಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

    ಇನ್ನು ಈ ಬಾರಿ ಹೆಣ್ಣು ಮಗುವಿಗೆ ಚಿತ್ರ ಸಂತೆ ಸಮರ್ಪಣೆ ಮಾಡುತ್ತಿರುವುದು ಅತ್ಯಂತ ವಿಶೇಷವೆನಿಸಿದೆ.

    ಬೆಂಗಳೂರಿನಲ್ಲಿ ಈಗಾಗಲೇ ಚಿತ್ರಸಂತೆ ಸಾಕಷ್ಟು ಜನಪ್ರಿಯತೆ ಗಳಿಸಿದ್ದು, ಕಲಾವಿದರು ಚಿತ್ರಸಂತೆಗಾಗಿ ಕಾತುರದಿಂದ ಕಾಯುತ್ತಿದ್ದಾರೆ.

    ಇನ್ನು ಪ್ರತಿವರ್ಷವೂ ಕುಮಾರಕೃಪಾ ರಸ್ತೆಯಲ್ಲಿ ಚಿತ್ರಸಂತೆ ನಡೆಯುವುದರಿಂದ ಜನವರಿ.5ರಂದು ಆ ರಸ್ತೆಗೆ ಮೀಸಲಾಗಿರುತ್ತದೆ. ಸಂಚಾರಿ ಪೊಲೀಸರು ಆ ರಸ್ತೆಯ ಬದಲಾಗಿ ಪರ್ಯಾಯ ಮಾರ್ಗಗಳ ಬಗ್ಗೆ ಸೂಚನೆ ನೀಡಲಿದ್ದಾರೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading