ಬೆಳಗಾವಿ: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಕಾಲ್ತುಳಿತದಲ್ಲಿ ಸಿಲುಕಿ ಬೆಳಗಾವಿಯ ಅಮ್ಮ-ಮಗಳು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ.
ಮೃತರನ್ನು ಜ್ಯೋತಿ ಹತ್ತರವಾಠ್, ಮೇಘಾ ಹತ್ತರವಾಠ್, ಅರುಣ್ ಕೋರ್ಪಡೆ ಹಾಗೂ ಮಹಾದೇವಿ ಎಂದು ಗುರುತಿಸಲಾಗಿದೆ.
ಕುಂಭಮೇಳದಲ್ಲಿ ಕಾಲ್ತುಳಿತದ ಬಳಿಕ ನಾಲ್ವರನ್ನು ಪ್ರಯಾಗ್‌ರಾಜ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾಗಿದ್ದಾರೆ.
ಇನ್ನು ಬೆಳಗಾವಿಯಲ್ಲಿರುವ ಕುಟುಂಬಸ್ಥರಿಗೆ ಇಂದು ಬೆಳಿಗ್ಗೆಯಿಂದ ಇಬ್ಬರು ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಫೋನ್ ರಿಂಗ್ ಆಗುತ್ತಿದ್ದರೂ, ಕರೆ ಸ್ವೀಕರಿಸದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಆತಂಕದಲ್ಲಿದ್ದರು.
ಈ ವೇಳೆ ಪ್ರಯಾಗ್ ರಾಜ್ ಪೊಲೀಸರು ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದು, ಕಾಲ್ತುಳಿತದಲ್ಲಿ ಇನ್ನೂ ಕೆಲವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಇನ್ನು ಪ್ರಯಾಗ್‌ರಾಜ್‌ನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಇದುವರೆಗೂ 15ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಜನರು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಈ ಹಿನ್ನೆಲೆಯಲ್ಲಿ ಕುಂಭಮೇಳ ಮುಗಿಯುವವರೆಗೂ ಇಂತಹ ಘಟನೆ ನಡೆಯದಂತೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಪೊಲೀಸರಿಗೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ.
ಇನ್ನು ಈ ಪ್ರಕರಣದ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡ ಪ್ರಧಾನಿ ನರೇಂದ್ರ ಮೋದಿ ಅವರು, ಕೇಂದ್ರದಿಂದ ಸಂಪೂರ್ಣ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


