Thursday, September 3, 2026
spot_img
More
    spot_img
    HomeTop Storyರೇಷನ್ ಕಾರ್ಡ್ ತಿದ್ದುಪಡಿ ಮತ್ತು ಇ-ಕೆವೈಸಿ: ಅಗತ್ಯ ದಾಖಲೆಗಳು ಮತ್ತು ಪ್ರಕ್ರಿಯೆಯ ವಿವರ

    ರೇಷನ್ ಕಾರ್ಡ್ ತಿದ್ದುಪಡಿ ಮತ್ತು ಇ-ಕೆವೈಸಿ: ಅಗತ್ಯ ದಾಖಲೆಗಳು ಮತ್ತು ಪ್ರಕ್ರಿಯೆಯ ವಿವರ

    Ration card ಪ್ರತಿ ಕುಟುಂಬಕ್ಕೆ ಅತ್ಯಂತ ಪ್ರಮುಖ ದಾಖಲೆಗಳಲ್ಲಿ ಒಂದಾಗಿದೆ. ಇದು ಪ್ರಧಾನವಾಗಿ ಮಧ್ಯಮ ಮತ್ತು ಆರ್ಥಿಕವಾಗಿ ಹಿಂದುಳಿದ ವರ್ಗದ ಜನರಿಗೆ ಕಡಿಮೆ ದರದಲ್ಲಿ ಆಹಾರ ಧಾನ್ಯಗಳನ್ನು ಪೂರೈಸಲು ಸಹಕಾರಿಯಾಗುತ್ತದೆ. ರೇಷನ್ ಕಾರ್ಡ್ ಮೂಲಕ ಭಾರತ ಸರ್ಕಾರದ ವಿವಿಧ ಯೋಜನೆಗಳು ಫಲಾನುಭವಿಗಳಿಗೆ ತಲುಪುತ್ತಿವೆ. ದೇಶದ ಬಹುಪಾಲು ಜನರಿಗೆ ಇದೊಂದು ಮುಖ್ಯ ಆಧಾರವಾಗಿದೆ.ಪ್ರತಿಯೊಬ್ಬರೂ ಆಧಾರ್ ಕಾರ್ಡ್(Aadhar card) ಹೊಂದುವ ರೀತಿಯಲ್ಲಿ ರೇಷನ್ ಕಾರ್ಡ್ ಅನ್ನೂ ಹೊಂದಬೇಕಾಗುತ್ತದೆ. ಜೊತೆಗೆ ರೇಷನ್ ಕಾರ್ಡುಗಳಲ್ಲಿ ದೋಷವಿದ್ದರೆ ಪ್ರಯೋಜನ ಪಡೆಯಲು ಸಾಧ್ಯವಾಗುವುದಿಲ್ಲ.ರೇಷನ್ ಕಾರ್ಡ್ ಇರುವವರಿಗೆ ಸಿಹಿ ಸುದ್ದಿ ಸಿಕ್ಕಿದ್ದು, ಯಾವುದೇ ರೀತಿಯ ತಿದ್ದುಪಡಿ ಮಾಡುವುದು ಈಗ ಬಲು ಸುಲಭ ಎನ್ನಲಾಗಿದೆ.ಸರ್ಕಾರ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ಇದರಲ್ಲಿ ಪಡಿತರ ಚೀಟಿದಾರರಿಗೆ ಇ-ಕೆವೈಸಿ(EKYC) ಕಡ್ಡಾಯವಾಗಿದೆ. ಫೆಬ್ರವರಿ 15, 2025ರೊಳಗೆ ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸದ ಫಲಾನುಭವಿಗಳಿಗೆ ಪಡಿತರ ವಿತರಣೆ ನಿಲ್ಲಿಸಲಾಗುತ್ತದೆ.

    Advertisement

    ರಾಜ್ಯ ಸರ್ಕಾರ ರೇಷನ್ ಕಾರ್ಡ್ ತಿದ್ದುಪಡಿ (Ration Card Correction) ಮಾಡೋದಕ್ಕೆ ಜನರಿಗೆ ಡಿಸೆಂಬರ್ ತಿಂಗಳಲ್ಲಿ ಕೂಡ ಅವಕಾಶ ನೀಡಿತ್ತು. ಆದರೆ ಪ್ರತಿಯೊಬ್ಬರು ಕೂಡ ಈ ಅವಕಾಶವನ್ನು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಲು ಸಾಧ್ಯವಾಗಿರಲಿಲ್ಲ ಹೀಗಾಗಿ, ರಾಜ್ಯ ಸರ್ಕಾರ ಜನವರಿ ಒಂದರಿಂದ ಪ್ರಾರಂಭಿಸಿ 31ನೇ ತಾರೀಖಿನವರೆಗೂ ಕೂಡ ತಮ್ಮ ರೇಷನ್ ಕಾರ್ಡನ್ನು ತಿದ್ದುಪಡಿ ಮಾಡಲು ಅವಕಾಶ ನೀಡಿದೆ.ತಿದ್ದುಪಡಿಗೆ ಪ್ರತಿ ತಿಂಗಳು ಕೂಡ ಅವಕಾಶ ಕಲ್ಪಿಸಲಾಗಿದೆ. ಹಳೆಯ ರೇಷನ್ ಕಾರ್ಡ್, ಆಧಾರ್ ಕಾರ್ಡ್ ಮತ್ತಿತರ ದಾಖಲೆಗಳನ್ನು ಇಟ್ಟುಕೊಂಡು ಪ್ರತಿ ತಿಂಗಳ ಮೊದಲ ವಾರ ಗ್ರಾಮ ಒನ್ ಮತ್ತು ಬೆಂಗಳೂರು ಒನ್ ಕಚೇರಿಗಳಿಗೆ ಹೋದರೆ ಸುಲಭದಲ್ಲಿ ತಿದ್ದುಪಡಿ ಮಾಡಿಸಬಹುದು, ಆದ್ಯತೆ ಮೇರೆಗೆ ಇ-ಕೆವೈಸಿ ಮಾಡದಿರುವ (BPL) ಪಡಿತರ ಚೀಟಿಗಳಿಗೆ ಇ-ಕೆವೈಸಿ ಕಡ್ಡಾಯವಾಗಿ ಮಾಡಲೇಬೇಕು.ಇ-ಕೆವೈಸಿ ಮಾಡಿಸಿಕೊಳ್ಳದ ಫಲಾನುಭವಿಗಳಿಗೆ ಪಡಿತರ ಸ್ಥಗಿತಗೊಳಿಸಲಾಗುತ್ತದೆ. ಒಂದು ವೇಳೆ ಇ-ಕೆವೈಸಿ ಮಾಡಿಕೊಳ್ಳದಿದ್ದರೆ ಶೀಘ್ರದಲ್ಲಿಯೇ ಮಾಡಿಕೊಳ್ಳಬೇಕು ಆದರೆ ಇ-ಕೆವೈಸಿ ನೀಡಲು ಯಾವುದೇ ಶುಲ್ಕವನ್ನು ನೀವು ನೀಡಬೇಕಿಲ್ಲ. ಇದನ್ನು ನ್ಯಾಯಬೆಲೆ ಅಂಗಡಿಗಳ ಮೂಲಕ ಉಚಿತವಾಗಿ ಮಾಡಿಸಲು ಕ್ರಮ ಕೈಗೊಳ್ಳಲಾಗಿದೆ. ಜಿಲ್ಲೆಯ ಎಲ್ಲಾ ಪಡಿತರ ಚೀಟಿದಾರರು ಸಹಕರಿಸಲು ಕೋರಿದೆ, ಇ-ಕೆವೈಸಿ ಸಂಗ್ರಹಣೆಯನ್ನು ಕರ್ನಾಟಕ ಗ್ರಾಮ ಒನ್ ಗಳಲ್ಲಿ ಸಹ ಇ-ಕೆವೈಸಿ (EKYC) ಮಾಡಿಸಲು ಅವಕಾಶವಿರುತ್ತದೆ ಎಂದು ರಾಜ್ಯ ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ

    ರೇಷನ್ ಕಾರ್ಡ್ ತಿದ್ದುಪಡಿಗೆ ಬೇಕಾಗಿರುವ ಡಾಕ್ಯುಮೆಂಟ್ಸ್ ಗಳು
    ಜಾತಿ ಪ್ರಮಾಣ ಪತ್ರ, ಕುಟುಂಬ ಸದಸ್ಯರ ಆಧಾರ್ ಕಾರ್ಡ್, ಮಕ್ಕಳ ಬರ್ತ್ ಸರ್ಟಿಫಿಕೇಟ್, ಮೊಬೈಲ್ ನಂಬರ್, ಕುಟುಂಬದ ಸದಸ್ಯರ ಜಾತಿ ಪ್ರಮಾಣ ಪತ್ರ,ಕುಟುಂಬದ ಸದಸ್ಯರ ಆದಾಯ,


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading