Friday, September 4, 2026
spot_img
More
    spot_img
    HomeLatest newsಬೆಂಗಳೂರಿನ ಮದರಸಾದಲ್ಲಿ ಓದುತ್ತಿದ್ದ ಬಾಲಕನ ಮೇಲೆ ಶಿಕ್ಷಕನಿಂದ ಲೈಂಗಿಕ ದೌರ್ಜನ್ಯ

    ಬೆಂಗಳೂರಿನ ಮದರಸಾದಲ್ಲಿ ಓದುತ್ತಿದ್ದ ಬಾಲಕನ ಮೇಲೆ ಶಿಕ್ಷಕನಿಂದ ಲೈಂಗಿಕ ದೌರ್ಜನ್ಯ

    ಥಾಣೆ: ಕರ್ನಾಟಕದ ಬೆಂಗಳೂರಿನ ಮದರಸಾದಲ್ಲಿ ಓದುತ್ತಿರುವ 10 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮಹಾರಾಷ್ಟ್ರದ ಥಾಣೆ ಪೊಲೀಸರು ಶಿಕ್ಷಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

    Advertisement


    ಬಾಲಕನ ಪೋಷಕರು ಥಾಣೆ ನಗರದ ಶಿಲ್-ಫಾಟಾ ಪ್ರದೇಶದ ನಿವಾಸಿಗಳಾಗಿದ್ದು, ಥಾಣೆ ಪೊಲೀಸರನ್ನು ಸಂಪರ್ಕಿಸಿ ಘಟನೆ ಕುರಿತು ಮಾಹಿತಿ ನೀಡದ ನಂತರ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


    ಆಗಸ್ಟ್ 2024 ಮತ್ತು ಜನವರಿ 2025 ರ ನಡುವೆ ಬೆಂಗಳೂರಿನ ಮದರಸಾದಲ್ಲಿ ಅಧ್ಯಯನ ಮಾಡುತ್ತಿದ್ದು. 22 ವರ್ಷದ ಆರೋಪಿ ಶಿಕ್ಷಕ ವಸತಿ ನಿಲಯದ ಅತಿಥಿ ಕೋಣೆಗೆ ಕರೆಸಿಕೊಂಡುಹೋಗಿ ಬಾಲಕನ ಮೇಲೆ ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಶಿಲ್-ದೈಘರ್ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.


    ಘಟನೆಯ ಬಗ್ಗೆ ಯಾರಿಗಾದರೂ ಮಾಹಿತಿ ನೀಡಿದರೆ ನಿನ್ನ ಮತ್ತು ಕುಟುಂಬವನ್ನು ಕೊಲ್ಲುವುದಾಗಿ ಆರೋಪಿ ಬೆದರಿಕೆ ಹಾಕಿದ್ದಾನೆ ಎಂದು ತಿಳಿಸಿದ್ದಾರೆ.


    ಸಹಿಸಲಾಗದೆ ನಂತರ ಬಾಲಕ ತನ್ನ ಪೋಷಕರಿಗೆ ತಿಳಿಸಿದ್ದಾನೆ.ಬಾಲಕನ ತಾಯಿಯ ದೂರಿನ ಆಧಾರದ ಮೇಲೆ, ಪೊಲೀಸರುಆರೋಪಿಯ ವಿರುದ್ಧ ಅತ್ಯಾಚಾರ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಪೋಕ್ಸೊಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ಅವರು ಹೇಳಿದರು.


    ಪ್ರಕರಣದ ತನಿಖೆ ನಡೆಯುತ್ತಿದೆ ಎಂದು ಆರೋಪಿ ಬಂಧನ ಕುರಿತು ನಮ ಪೊಲೀಸರು ಬಂಗಳೂರಿಗೆ ತೆರಳಿದ್ದಾರೆ ಎಂದು ತಿಳಿಸಿದ್ದಾರೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading