ಬೆಂಗಳೂರು: ಪ್ರಶ್ನೆಗಳನ್ನು ಎತ್ತಿದರೆ, ವಸ್ತು ಸ್ಥಿತಿಯನ್ನು ಹೇಳಿದರೆ ಹಿಂದೂ ವಿರೋಧಿ ಎಂದು ಹೇಳಿ ಉತ್ತರದಾಯಿತ್ವದಿಂದ ಜಾರಿಕೊಳ್ಳುವುದು ಬಿಜೆಪಿಯ ಹಳೆ ಚಾಳಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಬಿಜೆಪಿ ಏನಾದರೂ 12ನೇ ಶತಮಾನದಲ್ಲಿ ಇದ್ದಿದ್ದರೆ ಮೌಢ್ಯದ ವಿರುದ್ಧ ವಚನ ಚಳುವಳಿ ಕಟ್ಟಿದ್ದ ಶರಣರಿಗೂ ಹಿಂದೂ ವಿರೋಧಿ ಪಟ್ಟ ಕಟ್ಟಿಬಿಡುತ್ತಿದ್ದರೋ ಏನೋ? ಆದರೆ ಆಗಿನ ಮನುವಾದಿಗಳು ಶರಣರಿಗೆ ಪೀಡಿಸಿದ್ದರು ಎನ್ನುವುದು ಇತಿಹಾಸ ಎಂದು ಹೇಳಿದ್ದಾರೆ.
ಗಂಗಾ ಸ್ನಾನ ಮಾಡಿದರೆ ಕೆಟ್ಟವನು ಒಳ್ಳೆಯವನಾಗುವುದಿಲ್ಲ. ಕರ್ಮ, ಕಾಯಕಗಳು ಮಾತ್ರ ನಮ್ಮನ್ನು ಉದ್ದರಿಸಬಲ್ಲವು ಎನ್ನುವುದನ್ನು ಹಲವು ಮಹನೀಯರು ಹೇಳಿದ್ದಾರೆ. ಬಿಜೆಪಿಯವರು ಧರ್ಮದ ಹೆಸರು ಹೇಳಿಕೊಂಡು ರಾಜಕಾರಣ ಮಾಡುವುದನ್ನು ಬಿಟ್ಟು ಸಾಧನೆ ಹೇಳಿಕೊಂಡು ರಾಜಕಾರಣ ಮಾಡಿ ತೋರಿಸಲಿ ಎಂದು ಸವಾಲೆಸೆದಿದ್ದಾರೆ.
ಶರಣರ ವಚನಗಳನ್ನು ಉಲ್ಲೇಖಿಸಿದ ಸಚಿವ ಪ್ರಿಯಾಂಕ್ ಖರ್ಗೆ ಅವರು, ಕೇಂದ್ರ ಸರ್ಕಾರದ ನಾಯಕರ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


