Monday, August 10, 2026
spot_img
More
    spot_img
    HomeTop StoryIPL 2025: ಗುಜರಾತ್ ವಿರುದ್ಧವೂ ಮುಂಬೈ ಫ್ಲಾಪ್ ಶೋ; ಸತತ ಎರಡನೇ ಸೋಲುಂಡ ಅಂಬಾನಿ ಬಾಯ್ಸ್

    IPL 2025: ಗುಜರಾತ್ ವಿರುದ್ಧವೂ ಮುಂಬೈ ಫ್ಲಾಪ್ ಶೋ; ಸತತ ಎರಡನೇ ಸೋಲುಂಡ ಅಂಬಾನಿ ಬಾಯ್ಸ್

    ಅಹ್ಮದಾಬಾದ್: ನರೇಂದ್ರ ಮೋದಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟೂರ್ನಿಯ 9ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಗುಜರಾತ್ ಟೈಟನ್ಸ್ 36 ರನ್‌ಗಳ ಗೆಲುವನ್ನು ದಾಖಲಿಸಿ ಟೂರ್ನಿಯಲ್ಲಿ ಗೆಲುವಿನ ಖಾತೆ ತೆರೆದಿದೆ.

    Advertisement

    ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟನ್ಸ್ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 196 ರನ್ ಕಲೆಹಾಕಿ ಮುಂಬೈ ಇಂಡಿಯನ್ಸ್ ತಂಡಕ್ಕೆ 197 ರನ್‌ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನಟ್ಟುವಲ್ಲಿ ವಿಫಲವಾದ ಮುಂಬೈ ಇಂಡಿಯನ್ಸ್ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 160 ರನ್ ಗಳಿಸಿದೆ.

    ಈ ಮೂಲಕ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸೋತಿದ್ದ ಮುಂಬೈ ಇಂಡಿಯನ್ಸ್ ಟೂರ್ನಿಯಲ್ಲಿ ಸತತ ಎರಡನೇ ಬಾರಿಗೆ ಸೋಲನ್ನು ಕಂಡಿದೆ.

    ಗುಜರಾತ್ ಟೈಟನ್ಸ್ ಇನ್ನಿಂಗ್ಸ್: ತಂಡದ ಪರ ಸಾಯಿ ಸುದರ್ಶನ್ 63, ಶುಬ್‌ಮನ್ ಗಿಲ್ 38, ಜೋಸ್ ಬಟ್ಲರ್ 39, ಶಾರುಖ್ ಖಾನ್ 9, ರುದರ್‌ಫೋರ್ಡ್ 18, ರಾಹುಲ್ ತೆವಾಟಿಯಾ ಡಕ್‌ಔಟ್, ರಶೀದ್ ಖಾನ್ 6, ಸಾಯಿ ಕಿಶೋರ್ 1 ಹಾಗೂ ಕಗಿಸೊ ರಬಾಡಾ ಅಜೇಯ 7 ರನ್ ಗಳಿಸಿದರು.

    ಮುಂಬೈ ಇಂಡಿಯನ್ಸ್ ಪರ ಹಾರ್ದಿಕ್ ಪಾಂಡ್ಯ ಎರಡು ವಿಕೆಟ್, ಟ್ರೆಂಟ್ ಬೌಲ್ಟ್, ದೀಪಕ್ ಚಹರ್, ಮುಜೀಬ್ ಹಾಗೂ ಸತ್ಯನಾರಾಯಣ ರಾಜು ತಲಾ ಒಂದೊಂದು ವಿಕೆಟ್ ಪಡೆದರು.

    ಮುಂಬೈ ಇಂಡಿಯನ್ಸ್ ಇನ್ನಿಂಗ್ಸ್: ರೋಹಿತ್ ಶರ್ಮಾ 8, ರಿಯಾನ್ ರಿಕೆಲ್ಟನ್ 6, ತಿಲಕ್ ವರ್ಮಾ 39, ಸೂರ್ಯಕುಮಾರ್ ಯಾದವ್ 48, ರಾಬಿನ್ ಮಿನ್ಸ್ 3, ನಾಯಕ ಹಾರ್ದಿಕ್ ಪಾಂಡ್ಯ 11, ನಮನ್ ಧೀರ್ ಅಜೇಯ 18 ಹಾಗೂ ಮಿಚೆಲ್ ಸ್ಯಾಂಟ್ನರ್ ಅಜೇಯ 18 ರನ್ ಗಳಿಸಿದರು.

    ಗುಜರಾತ್ ಟೈಟನ್ಸ್ ಪರ ಮೊಹಮ್ಮದ್ ಸಿರಾಜ್ ಹಾಗೂ ಪ್ರಸಿದ್ಧ್ ಕೃಷ್ಣ ತಲಾ ಎರಡೆರಡು ವಿಕೆಟ್ ಪಡೆದಿದ್ದು, ಕಗಿಸೊ ರಬಾಡಾ ಹಾಗೂ ಸಾಯಿಕಿಶೋರ್ ತಲಾ ಒಂದೊಂದು ವಿಕೆಟ್ ಪಡೆದರು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading