ಅಹ್ಮದಾಬಾದ್: ನರೇಂದ್ರ ಮೋದಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಬಾರಿಯ ಐಪಿಎಲ್‌ನ 9ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳು ಮುಖಾಮುಖಿಯಾಗಿವೆ.
ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟನ್ಸ್ ಸಾಯಿ ಸುದರ್ಶನ್ ಅರ್ಧಶತಕದ ನೆರವಿನಿಂದ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 196 ರನ್ ಕಲೆಹಾಕಿ ಮುಂಬೈ ಇಂಡಿಯನ್ಸ್‌ಗೆ 197 ರನ್‌ಗಳ ಗುರಿಯನ್ನು ನೀಡಿದೆ.
ಇನ್ನು ಈ ಗುರಿಯನ್ನು ಬೆನ್ನಟ್ಟಲು ಮುಂದಾಗಿರುವ ಮುಂಬೈ ಇಂಡಿಯನ್ಸ್ ಪರ ಆರಂಭಿಕರಾಗಿ ಕಣಕ್ಕಿಳಿದ ರೋಹಿತ್ ಶರ್ಮಾ 4 ಎಸೆತಗಳಲ್ಲಿ ಕೇವಲ 8 ರನ್‌ಗೆ ವಿಕೆಟ್ ಒಪ್ಪಿಸಿದರು. ಈ ಮೂಲಕ ಐಪಿಎಲ್‌ನ ಮತ್ತೊಂದು ಪಂದ್ಯದಲ್ಲಿ ರೋಹಿತ್ ಶರ್ಮಾ ಒಂದಂಕಿಗೆ ಔಟ್ ಆದರು.
ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಡೆದಿದ್ದ ಮುಂಬೈ ಇಂಡಿಯನ್ಸ್‌ನ ಚೊಚ್ಚಲ ಪಂದ್ಯದಲ್ಲಿ ಸಹ ರೋಹಿತ್ ಶರ್ಮಾ ಕಳಪೆ ಪ್ರದರ್ಶನ ನೀಡಿದ್ದರು. ಹೀಗೆ ಇಂದಿನ ಪಂದ್ಯದಲ್ಲಿ ಕೇವಲ ಒಂದಂಕಿಗೆ ಔಟ್ ಆಗಿರುವ ರೋಹಿತ್ ಶರ್ಮಾ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಬರೋಬ್ಬರಿ 80ನೇ ಬಾರಿಗೆ ಒಂದಂಕಿಗೆ ಔಟ್ ಆಗಿದ್ದಾರೆ.
ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಅತಿಹೆಚ್ಚು ಬಾರಿ ಒಂದಂಕಿಗೆ ಔಟ್ ಆಗಿರುವ ಬ್ಯಾಟ್ಸ್‌ಮನ್‌ಗಳ ಪಟ್ಟಿ
- ರೋಹಿತ್ ಶರ್ಮಾ – 80 ಬಾರಿ
- ದಿನೇಶ್ ಕಾರ್ತಿಕ್ – 72 ಬಾರಿ
- ವಿರಾಟ್ ಕೊಹ್ಲಿ – 57 ಬಾರಿ
- ರಾಬಿನ್ ಉತ್ತಪ್ಪ – 57 ಬಾರಿ
- ಶಿಖರ್ ಧವನ್ – 56 ಬಾರಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


