ಚಂಡೀಗಢ್: ಮುಲ್ಲಾನ್‌ಪುರ ಕ್ರಿಕೆಟ್ ಕ್ರೀಡಾಂಗಣದಲ್ಲಿ ಇಂದು ( ಮೇ 29 ) 18ನೇ ಐಪಿಎಲ್‌ನ ಒಂದನೇ ಕ್ವಾಲಿಫಯರ್ ಪಂದ್ಯ ನಡೆಯುತ್ತಿದ್ದು, ಲೀಗ್ ಹಂತದಲ್ಲಿ ಟಾಪ್ 2 ಸ್ಥಾನಗಳನ್ನು ಪಡೆದ ಪಂಜಾಬ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಿವೆ.
ಈ ಪಂದ್ಯದಲ್ಲಿ ಗೆಲ್ಲಲಿರುವ ತಂಡ ನೇರವಾಗಿ ಫೈನಲ್ ತಲುಪಲಿದ್ದು, ಸೋಲುವ ತಂಡ ಎರಡನೇ ಕ್ವಾಲಿಫಯರ್ ಪಂದ್ಯವನ್ನಾಡಲಿದ್ದು, ಮುಂಬೈ ಇಂಡಿಯನ್ಸ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳ ನಡುವೆ ನಡೆಯಲಿರುವ ಎಲಿಮಿನೇಟರ್ ಪಂದ್ಯದಲ್ಲಿ ಗೆಲ್ಲಲಿರುವ ತಂಡದ ಜೊತೆ ಫೈನಲ್ ಪ್ರವೇಶಕ್ಕಾಗಿ ಮತ್ತೊಮ್ಮೆ ಸೆಣಸಾಡಲಿದೆ.
ಇನ್ನು ಈ ಪಂದ್ಯದಲ್ಲಿ ಯಾವ ತಂಡ ಗೆದ್ದು ನೇರವಾಗಿ ಫೈನಲ್ ತಲುಪಲಿದೆ ಎಂಬ ಚರ್ಚೆ ಏರ್ಪಟ್ಟಿದ್ದು, ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಮ್ಯಾಥ್ಯೂ ಹೇಡನ್ ಇಂದಿನ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡ ಗೆಲ್ಲಲಿದೆ ಎಂದು ಊಹಿಸಿದ್ದಾರೆ. ಪಂಜಾಬ್ ಕಿಂಗ್ಸ್ ತಂಡ ತುಂಬಾ ವಿಶ್ವಾಸದಿಂದ ಪ್ಲೇಆಫ್‌ಗೆ ಕಾಲಿಟ್ಟಿದ್ದು, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಅವರ ಗೆಲುವು ಅದ್ಭುತವಾಗಿತ್ತು ಹಾಗೂ ಶ್ರೇಯಸ್ ಐಯ್ಯರ್ ತಂಡ ಬೆಸ್ಟ್ ಎಂಬುದನ್ನು ಅದು ತೋರಿಸಿತು ಎಂದರು.
ಟೂರ್ನಿಯುದ್ದಕ್ಕೂ ಬೌಲಿಂಗ್ ಹಾಗೂ ಬ್ಯಾಟಿಂಗ್ ಎರಡೂ ವಿಭಾಗದಲ್ಲೂ ಉತ್ತಮ ಪ್ರದರ್ಶನ ನೀಡಿದ ಪಂಜಾಬ್ ಕಿಂಗ್ಸ್ ತಂಡವನ್ನು ಬೆಂಬಲಿಸದಿರಲು ಹೇಗೆ ಸಾಧ್ಯ? ಅನುಭವಿ ನಾಯಕತ್ವ ಸಿಕ್ಕಿರುವುದು ಅವರಿಗೆ ಪ್ಲಸ್ ಪಾಯಿಂಟ್ ಎಂದು ಹೇಡನ್ ಹೇಳಿದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


