Monday, November 2, 2026
spot_img
More
    spot_img
    HomeTop StoryIPL 2025 ಕ್ವಾಲಿಫಯರ್‌ 1: ಆರ್‌ಸಿಬಿ ಬೌಲಿಂಗ್‌ ದಾಳಿಗೆ ತತ್ತರಿಸಿದ ಪಂಜಾಬ್ ಕೇವಲ 101ಕ್ಕೆ ಆಲ್‌ಔಟ್;‌...

    IPL 2025 ಕ್ವಾಲಿಫಯರ್‌ 1: ಆರ್‌ಸಿಬಿ ಬೌಲಿಂಗ್‌ ದಾಳಿಗೆ ತತ್ತರಿಸಿದ ಪಂಜಾಬ್ ಕೇವಲ 101ಕ್ಕೆ ಆಲ್‌ಔಟ್;‌ ಆರ್‌ಸಿಬಿಗೆ ಸುಲಭ ಗುರಿ

    ಚಂಡೀಗಢ: ಮುಲ್ಲಾನ್‌ಪುರದ ಮಹಾರಾಜ ಯದವೀಂದ್ರ ಸಿಂಗ್‌ ಕ್ರೀಡಾಂಗಣದಲ್ಲಿ ಇಂದು ( ಮೇ 29 ) 18ನೇ ಐಪಿಎಲ್‌ ಆವೃತ್ತಿಯ ಒಂದನೇ ಕ್ವಾಲಿಫಯರ್‌ 1 ಪಂದ್ಯ ನಡೆಯುತ್ತಿದ್ದು, ಲೀಗ್‌ ಹಂತದಲ್ಲಿ ಅಂಕಪಟ್ಟಿಯಲ್ಲಿ ಟಾಪ್‌ ಎರಡು ಸ್ಥಾನಗಳನ್ನು ಪಡೆದುಕೊಂಡಿದ್ದ ಪಂಜಾಬ್‌ ಕಿಂಗ್ಸ್‌ ಹಾಗೂ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮುಖಾಮುಖಿಯಾಗಿವೆ.

    ಪಂದ್ಯದಲ್ಲಿ ಟಾಸ್‌ ಗೆದ್ದಿರುವ ರಾಯಲ್‌ ಚಾಲೆಂಜರ್ಸ್ ಬೆಂಗಳೂರು ಫೀಲ್ಡಿಂಗ್‌ ಆರಿಸಿಕೊಂಡು ಎದುರಾಳಿ ಪಂಜಾಬ್‌ ಕಿಂಗ್ಸ್‌ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು.

    ಅದರಂತೆ ಮೊದಲು ಬ್ಯಾಟಿಂಗ್‌ ಮಾಡಿರುವ ಪಂಜಾಬ್‌ ಕಿಂಗ್ಸ್‌ ಆರ್‌ಸಿಬಿ ಬೌಲಿಂಗ್‌ ದಾಳಿಗೆ ಮಕಾಡೆ ಮಲಗಿದ್ದು, 14.1 ಓವರ್‌ಗಳಲ್ಲಿ 101 ರನ್‌ಗೆ ಆಲ್‌ಔಟ್‌ ಆಗಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡಕ್ಕೆ 102 ರನ್‌ಗಳ ಗುರಿಯನ್ನು ನೀಡಿದೆ.

    ಪಂಜಾಬ್‌ ಕಿಂಗ್ಸ್ ಪವರ್‌ಪ್ಲೇನಲ್ಲೇ ತನ್ನ 4 ವಿಕೆಟ್‌ಗಳನ್ನು ಕಳೆದುಕೊಂಡು ಆರಂಭಿಕ ಆಘಾತ ಅನುಭವಿಸಿತು. ಪ್ರಿಯನ್ಶ್‌ ಆರ್ಯ 7 (5) ರನ್‌, ಪ್ರಭ್‌ಸಿಮ್ರನ್‌ ಸಿಂಗ್‌ 18 (10) ರನ್‌, ಜೋಶ್‌ ಇಂಗ್ಲಿಸ್‌ 4 (7) ಹಾಗೂ ನಾಯಕ ಶ್ರೇಯಸ್‌ ಐಯ್ಯರ್‌ 2 (3) ರನ್‌ ಗಳಿಸಿ ಔಟ್‌ ಆದರು. ಈ ಮೂಲಕ 6 ಓವರ್‌ಗಳಲ್ಲಿ 48 ರನ್‌ಗೆ 4 ವಿಕೆಟ್‌ ಕಳೆದುಕೊಂಡಿತು. ಬಳಿಕ ನೇಹಲ್‌ ವಧೇರಾ 8 (10), ಶಶಾಂಕ್‌ ಸಿಂಗ್‌ 3 (5), ಮುಶೀರ್‌ ಖಾನ್‌ ಡಕ್‌ಔಟ್‌, ಹರ್‌ಪ್ರೀತ್‌ ಬ್ರಾರ್‌ 4 (11), ಮಾರ್ಕಸ್‌ ಸ್ಟಾಯ್ನಿಸ್‌ 26 (17), ಅಜ್ಮತುಲ್ಲಾ ಓಮರ್ಝೈ 18 (12) ಹಾಗೂ ಕೈಲ್‌ ಜೆಮಿಸನ್‌ ಯಾವುದೇ ರನ್‌ ಗಳಿಸದೇ ಅಜೇಯರಾಗಿ ಉಳಿದರು.

    ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಪರ ಜೋಶ್‌ ಹೇಜಲ್‌ವುಡ್‌ ಹಾಗೂ ಸುಯಶ್‌ ಶರ್ಮಾ ತಲಾ 3 ವಿಕೆಟ್‌, ಯಶ್‌ ದಯಾಳ್‌ 2 ವಿಕೆಟ್‌, ಭುವನೇಶ್ವರ್‌ ಕುಮಾರ್‌ ಹಾಗೂ ರೊಮಾರಿಯಾ ಶೆಫರ್ಡ್‌ ತಲಾ ಒಂದೊಂದು ವಿಕೆಟ್‌ ಪಡೆದರು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search