ಚಂಡೀಗಢ: ಮುಲ್ಲಾನ್‌ಪುರದ ಮಹಾರಾಜ ಯದವೀಂದ್ರ ಸಿಂಗ್ ಕ್ರೀಡಾಂಗಣದಲ್ಲಿ ಇಂದು ( ಮೇ 29 ) 18ನೇ ಐಪಿಎಲ್ ಆವೃತ್ತಿಯ ಒಂದನೇ ಕ್ವಾಲಿಫಯರ್ ಪಂದ್ಯ ನಡೆಯುತ್ತಿದ್ದು, ಲೀಗ್ ಹಂತದಲ್ಲಿ ಅಂಕಪಟ್ಟಿಯಲ್ಲಿ ಟಾಪ್ ಎರಡು ಸ್ಥಾನಗಳನ್ನು ಪಡೆದುಕೊಂಡಿದ್ದ ಪಂಜಾಬ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಖಾಮುಖಿಯಾಗಿವೆ.
ಪಂದ್ಯದಲ್ಲಿ ಟಾಸ್ ಗೆದ್ದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫೀಲ್ಡಿಂಗ್ ಆರಿಸಿಕೊಂಡು ಎದುರಾಳಿ ಪಂಜಾಬ್ ಕಿಂಗ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದೆ.
ಇನ್ನು ಕಳೆದೆರಡು ಪಂದ್ಯಗಳಲ್ಲಿ ಕೈಬೆರಳು ಗಾಯದ ಸಮಸ್ಯೆಗೊಳಗಾಗಿ ನಾಯಕತ್ವ ಮಾಡಲಾಗದೇ ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿದಿದ್ದ ರಜತ್ ಪಟಿದಾರ್ ಈ ಪಂದ್ಯಕ್ಕೆ ಮರಳಿದ್ದು, ನಾಯಕನಾಗಿ ತಂಡವನ್ನು ನಿಭಾಯಿಸಲಿದ್ದಾರೆ.
ರಜತ್ ಪಟಿದಾರ್ ತಂಡಕ್ಕೆ ಮರಳಿದ ಕಾರಣ ಮಯಾಂಕ್ ಅಗರ್ವಾಲ್ ಆಡುವ ಬಳಗದಿಂದ ಹೊರಬಿದ್ದಿದ್ದು, ಟಿಮ್ ಡೇವಿಡ್ ಇಂದಿನ ಪಂದ್ಯಕ್ಕೂ ಅಲಭ್ಯರಾಗಿ ಲಿಯಾಮ್ ಲಿವಿಂಗ್‌ಸ್ಟನ್ ಕಣಕ್ಕಿಳಿದಿದ್ದಾರೆ. ಅತ್ತ ಜೋಶ್ ಹೇಜಲ್‌ವುಡ್ ತಂಡ ಸೇರಿದ ಕಾರಣ ನುವಾನ್ ತುಷಾರಾ ಆಡುವ ಬಳಗದಿಂದ ಹೊರಗುಳಿದಿದ್ದಾರೆ.
ಪಂಜಾಬ್ ಕಿಂಗ್ಸ್ ಆಡುವ ಬಳಗ: ಪ್ರಿಯಾಂಶ್ ಆರ್ಯ, ಪ್ರಭಸಿಮರನ್ ಸಿಂಗ್, ಜೋಶ್ ಇಂಗ್ಲಿಸ್(ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್(ನಾಯಕ), ನೆಹಾಲ್ ವಾಧೇರಾ, ಶಶಾಂಕ್ ಸಿಂಗ್, ಮಾರ್ಕಸ್ ಸ್ಟೋಯಿನಿಸ್, ಅಜ್ಮತುಲ್ಲಾ ಒಮರ್ಜಾಯ್, ಹರ್ಪ್ರೀತ್ ಬ್ರಾರ್, ಅರ್ಶದೀಪ್ ಸಿಂಗ್, ಕೈಲ್ ಜೇಮಿಸನ್
ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಡುವ ಬಳಗ: ವಿರಾಟ್ ಕೊಹ್ಲಿ, ಫಿಲಿಪ್ ಸಾಲ್ಟ್, ರಜತ್ ಪಾಟಿದಾರ್(ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ(ವಿಕೆಟ್ ಕೀಪರ್), ರೊಮಾರಿಯೋ ಶೆಫರ್ಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಯಶ್ ದಯಾಳ್, ಜೋಶ್ ಹೇಜಲ್‌ವುಡ್, ಸುಯಾಶ್ ಶರ್ಮಾ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


