ಚಿತ್ರದುರ್ಗ: ಬಿಜೆಪಿ ನಾಯಕರು ರಾಜ್ಯ ಕಾಂಗ್ರೆಸ್ ಸರ್ಕಾರ ಯಾವುದೇ ಕಾರಣಕ್ಕೂ ಪೂರ್ಣ ಅವಧಿ ಪೂರೈಸಲ್ಲ, ಮಧ್ಯಂತರ ವಿಧಾನಸಭೆ ಚುನಾವಣೆ ನಡೆಯಲಿದೆ ಎಂದು ಸಾಲು ಸಾಲು ಹೇಳಿಕೆಗಳನ್ನು ನೀಡುತ್ತಲೇ ಬರುತ್ತಿದ್ದಾರೆ.
ಆರ್ ಅಶೋಕ್ ಹಾಗೂ ಸಿಟಿ ರವಿ ಕಾಂಗ್ರೆಸ್ ಸರ್ಕಾರ ನವೆಂಬರ್‌ಗೆ ಬೀಳಲಿದೆ ಎಂದು ಹೇಳುತ್ತಲೇ ಬಂದಿದ್ದು, ಸದ್ಯ ಕಾಂಗ್ರೆಸ್ ಸಚಿವ ಕೆಎನ್ ರಾಜಣ್ಣ ನೀಡಿದ ʼಸೆಪ್ಟೆಂಬರ್‌ನಲ್ಲಿ ರಾಜಕೀಯ ಕ್ರಾಂತಿʼ ಹೇಳಿಕೆ ಈ ಕುರಿತ ಚರ್ಚೆಗಳು ಹೆಚ್ಚಾಗುವಂತೆ ಮಾಡಿವೆ.
ಹೀಗಿರುವಾಗಲೇ ಬಿಜೆಪಿ ಸಂಸದ ಗೋವಿಂದ ಕಾರಜೋಳ ಸಹ ಕಾಂಗ್ರೆಸ್ ಸರ್ಕಾರದ ಬಗ್ಗೆ ಸ್ಪೋಟಕ ಭವಿಷ್ಯ ನುಡಿದಿದ್ದು, ಡಿಸೆಂಬರ್ ಬಳಿಕ ವಿಧಾನಸಭೆ ಚುನಾವಣೆ ನಡೆಯಲಿದೆ ಎಂದಿದ್ದಾರೆ.
ಅಲ್ಲದೇ ಈ ಚುನಾವಣೆಯಲ್ಲಿ ಬಿಜೆಪಿ 150 ಶಾಸಕರ ಗೆಲುವಿನೊಂದಿಗೆ ಸರ್ಕಾರ ರಚಿಸಲಿದೆ ಎಂದು ಗೋವಿಂದ ಕಾರಜೋಳ ಹೇಳಿದ್ದಾರೆ.
ಇನ್ನು ಇದಕ್ಕೂ ಮುನ್ನ ಇಂದು ಶ್ರೀರಾಮುಲು ದಸರಾ ಸಮಯಕ್ಕೆ ಸಿದ್ದರಾಮಯ್ಯ ಸಿಎಂ ಆಗಿ ಉಳಿದಿರುವುದಿಲ್ಲ ಎಂದಿದ್ದಾರೆ.
ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ
ಸಿಕ್ಸ್ ಬಾರಿಸುತ್ತಿದ್ದಂತೆ ಕುಸಿದುಬಿದ್ದ ಬ್ಯಾಟ್ಸ್‌ಮನ್: ಮೈದಾನದಲ್ಲೇ ಹೃದಯಾಘಾತದಿಂದ ಸಾವು; ವಿಡಿಯೊ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


