Saturday, September 19, 2026
spot_img
More
    spot_img
    HomeLatest newsಶಾಸಕರ ಜೊತೆ ರಣದೀಪ್‌ ಸಿಂಗ್‌ ಸುರ್ಜೇವಾಲಾ ಪ್ರತ್ಯೇಕ ಸಭೆ: ಡಿಕೆ ಶಿವಕುಮಾರ್‌ ಮಾಹಿತಿ

    ಶಾಸಕರ ಜೊತೆ ರಣದೀಪ್‌ ಸಿಂಗ್‌ ಸುರ್ಜೇವಾಲಾ ಪ್ರತ್ಯೇಕ ಸಭೆ: ಡಿಕೆ ಶಿವಕುಮಾರ್‌ ಮಾಹಿತಿ

    ಬೆಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ನಾಳೆ ಬೆಂಗಳೂರಿಗೆ ಆಗಮಿಸುತ್ತಿದ್ದು, ಶಾಸಕರ ಜೊತೆ ಪ್ರತ್ಯೇಕವಾಗಿ ಚರ್ಚೆ ನಡೆಸಲಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

    Advertisement

    ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಣದೀಪ್ ಸಿಂಗ್ ಸುರ್ಜೇವಾಲ ನಾಳೆ ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ಶಾಸಕರ ಜೊತೆ ಪ್ರತ್ಯೇಕವಾಗಿ ಚರ್ಚೆ ನಡೆಸುತ್ತಾರೆ. ಈ ಬಗ್ಗೆ ರಣದೀಪ್ ಸಿಂಗ್ ಸುರ್ಜೇವಾಲ ಅವರ ಕಚೇರಿಯಿಂದಲೇ ನೇರವಾಗಿ ಶಾಸಕರಿಗೆ ಮಾಹಿತಿ ಹೋಗಿದೆ. ನನಗೂ ಕಾರ್ಯಕ್ರಮದ ವೇಳಾಪಟ್ಟಿ ಕಳುಹಿಸಿದ್ದಾರೆ. ಅದರಂತೆ ನಾನು ಶಾಸಕರಿಗೆ ವಿಷಯ ತಿಳಿಸುತ್ತಿದ್ದೇನೆ ಎಂದು ಹೇಳಿದರು.

    ಇನ್ನು ದಸರಾ ವೇಳೆಗೆ ಮುಖ್ಯಮಂತ್ರಿ ಬದಲಾಗುತ್ತಾರೆ. ನೂತನ ಮುಖ್ಯಮಂತ್ರಿ ದಸರಾ ಉದ್ಘಾಟಿಸುತ್ತಾರೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಅಶೋಕ್ ಜೋತಿಷ್ಯ ಕಲಿತಿದ್ದರೆ ನನಗೂ ಸಮಯ ಕೊಡಿಸಿ, ನಾನು ಭವಿಷ್ಯ ಕೇಳುವುದಿದೆ. ಅವರನ್ನು ಭೇಟಿ ಮಾಡುತ್ತೇನೆ ಎಂದು ಮಾರ್ಮಿಕವಾಗಿ ಹೇಳಿದರು.

    ಇನ್ನು ಕಾವೇರಿ ಆರತಿ ಕುರಿತು ಹೈಕೋರ್ಟ್ ನೋಟಿಸ್‌ಗೆ ಕಾನೂನು ಪ್ರಕಾರವೇ ಉತ್ತರ ನೀಡುತ್ತೇವೆ. ಆರತಿ ವಿಚಾರಕ್ಕೆ ಯಾರು ಅನುಮತಿ ಕೇಳುತ್ತಿಲ್ಲ. ದಿನಾ ಅಲ್ಲಿ ಆರತಿ, ಪೂಜೆ ನಡೆಯುತ್ತಿದೆ ಎಂದು ಹೇಳಿದರು.

    ಸಿಕ್ಸ್‌ ಬಾರಿಸುತ್ತಿದ್ದಂತೆ ಕುಸಿದುಬಿದ್ದ ಬ್ಯಾಟ್ಸ್‌ಮನ್‌: ಮೈದಾನದಲ್ಲೇ ಹೃದಯಾಘಾತದಿಂದ ಸಾವು; ವಿಡಿಯೊ

    ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading