Thursday, September 3, 2026
spot_img
More
    spot_img
    HomeLatest news5 ಮಂದಿ ಐಪಿಎಸ್‌ ಅಧಿಕಾರಿಗಳ ಅಮಾನತು ರದ್ದು; ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ

    5 ಮಂದಿ ಐಪಿಎಸ್‌ ಅಧಿಕಾರಿಗಳ ಅಮಾನತು ರದ್ದು; ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ

    ಬೆಂಗಳೂರು: ಕರ್ತವ್ಯ ಲೋಪದ ಆರೋದಡಿ ಅಮಾನತುಗೊಂಡ ಬಳಿಕ ಇದೀಗ 5 ಮಂದಿ ಐಪಿಎಸ್ ಅಧಿಕಾರಿಗಳ ಅಮಾನತು ರದ್ದುಪಸಿರುವ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಕ್ಷಮೆ ಕೇಳಬೇಕು ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ ಆಗ್ರಹಿಸಿದ್ದಾರೆ.

    Advertisement

    ಈ ಕುರಿತು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಗೃಹ ಸಚಿವರು ಹಾಗೂ ಸರ್ಕಾರದ ಉನ್ನತ ಸ್ಥಾನದಲ್ಲಿರುವ ಅಧಿಕಾರಿಗಳ `ತುಘಲಕ್’ ನಿರ್ಧಾರದಿಂದ ಇಂಥಾ ಘೋರ ದುರಂತ ಸಂಭವಿಸಿತು ಎಂದು ಕಿಡಿಕಾರಿದ್ದಾರೆ.

    ವಾಸ್ತವ ಸತ್ಯದ ಹಿನ್ನಲೆಯಲ್ಲಿ ಜನಾಕ್ರೋಶ ಎದುರಿಸಲಾಗದೆ `ಬೀಸುವ ದೊಣ್ಣೆಯಿಂದ ತಪ್ಪಿಸಿಕೊಳ್ಳಲು’ ಭಂಡತನದಿಂದ ಅಧಿಕಾರದಲ್ಲಿ ಉಳಿಯಲು ತಪ್ಪೆಸಗದ ಪೊಲೀಸ್ ಅಧಿಕಾರಿಗಳಿಗೆ ಅಮಾನತು ಶಿಕ್ಷೆ ವಿಧಿಸಿ ಹೊಣೆಗೇಡಿತನದಿಂದ ಪಾರಾಗಲು ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳು ಪ್ರಯತ್ನಿಸಿದ್ದರು. ಇದೀಗ ಗತ್ಯಂತರವಿಲ್ಲದೆ ಪ್ರಾಯಶ್ಚಿತ್ತ ಮಾಡಿಕೊಳ್ಳಲು ಅಧಿಕಾರಿಗಳ ಅಮಾನತು ರದ್ದುಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಹಾಗೂ ಇತರರು ಅಮಾನತು ರದ್ದುಗೊಂಡ ಅಧಿಕಾರಿಗಳ ಕ್ಷಮೆಯಾಚಿಸಬೇಕು ಎಂದು ಒತ್ತಾಯ ಮಾಡಿದ್ದಾರೆ.

    ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಮುಡಾ ಹಗರಣ, ಹದಗೆಟ್ಟ ಕಾನೂನು ಸುವ್ಯವಸ್ಥೆಯ ನಿರಂತರ ವೈಫಲ್ಯ, ಇವೆಲ್ಲವನ್ನೂ ಮುಚ್ಚಿಕೊಳ್ಳಲು ಆಯೋಗಗಳನ್ನು ರಚಿಸುವುದು, ಪ್ರಾಮಾಣಿಕ ಅಧಿಕಾರಿಗಳ ಬಲಿ ತೆಗೆದುಕೊಳ್ಳುವುದು ಕಾಂಗ್ರೆಸ್ ಸರ್ಕಾರದ ಜನರ ದಿಕ್ಕು ತಪ್ಪಿಸುವ ಕುತಂತ್ರ ನಡವಳಿಕೆಯಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

    ಬೆಂಗಳೂರಿನಲ್ಲಿ ಆರ್‌ಸಿಬಿ ವಿಜಯೋತ್ಸವದ ಸಂಭ್ರಮಾಚರಣೆಯನ್ನು ರಾಜಕೀಯ ಬಂಡವಾಳ ಮಾಡಿಕೊಳ್ಳಲು ಹೊರಟು ದೂರದೃಷ್ಟಿ ಹಾಗೂ ಜನಕಾಳಜಿ ಇಲ್ಲದ ಅವಿವೇಕಿ ನಿರ್ಧಾರ ತೆಗೆದುಕೊಂಡ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ತಲೆದಂಡ ತಪ್ಪಿಸಿಕೊಳ್ಳಲು ನಾಲ್ವರು ಪೊಲೀಸ್ ಅಧಿಕಾರಿಗಳನ್ನು ಬಲಿಪಶು ಮಾಡಿದ್ದ ಈ ಸರ್ಕಾರ ಇದೀಗ ಅವರ ಅಮಾನತ್ತನ್ನು ರದ್ದುಗೊಳಿಸಿ ಮುಖ ಮುಚ್ಚಿಕೊಳ್ಳಲು ಹೊರಟಿದೆ ಎಂದು ವಿಜಯೇಂದ್ರ ಅವರು ಅನುಮಾನ ವ್ಯಕ್ತಪಡಿಸಿದ್ದಾರೆ.

    ಸ್ವೀಡನ್ ಕಂಪನಿಯಲ್ಲಿ ವಿಚಿತ್ರ ವಿರಾಮ; ಖಾಸಗಿ ಸಮಯಕ್ಕಾಗಿ 30 ನಿಮಿಷ ಬ್ರೇಕ್

    ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading