Tuesday, August 4, 2026
spot_img
More
    spot_img
    HomeLatest newsಕಿರಿಯ ಪವರ್‌ಮ್ಯಾನ್‌ ಹುದ್ದೆಯ ಆಕಾಂಕ್ಷಿಗಳಿಗೆ ಗುಡ್‌ನ್ಯೂಸ್‌ ಕೊಟ್ಟ ಸರ್ಕಾರ; ಅಂತಿಮ ಆಯ್ಕೆ ಪಟ್ಟಿ ಪ್ರಕಟ

    ಕಿರಿಯ ಪವರ್‌ಮ್ಯಾನ್‌ ಹುದ್ದೆಯ ಆಕಾಂಕ್ಷಿಗಳಿಗೆ ಗುಡ್‌ನ್ಯೂಸ್‌ ಕೊಟ್ಟ ಸರ್ಕಾರ; ಅಂತಿಮ ಆಯ್ಕೆ ಪಟ್ಟಿ ಪ್ರಕಟ

    ಬೆಂಗಳೂರು: ಕವಿಪ್ರನಿನಿಯು ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ ಹುದ್ದೆ ನಿರೀಕ್ಷೆಯಲ್ಲಿದ್ದ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದು, ವಿವಿಧ ಹುದ್ದೆಗಳ ನೇಮಕಾತಿಯ ಅಂತಿಮ ಅಯ್ಕೆ ಪಟ್ಟಿ ಪ್ರಕಟಿಸಿದೆ.

    Advertisement

    ಇಂಧನ ಸಚಿವ ಕೆ.ಜೆ.ಜಾರ್ಜ್ ಅವರ ನಿರ್ದೇಶನದಂತೆ ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಸಲಾಗಿತ್ತು. 2024 ರ ಅಕ್ಟೋಬರ್ ನಲ್ಲಿ 433 ಕಿರಿಯ ಸ್ಟೇಷನ್ ಪರಿಚಾರಕ ಹುದ್ದೆ ಮತ್ತು 90 ಕಿರಿಯ ಪವರ್‌ಮ್ಯಾನ್ ಹುದ್ದೆ ಸೇರಿದಂತೆ ಒಟ್ಟು 523 ನಿರ್ವಹಣಾ ಪದವೃಂದದ ಹುದ್ದೆಗಳ ನೇಮಕಾತಿಗೆ ಕೆಪಿಟಿಸಿಎಲ್ ಅಧಿಸೂಚನೆ ಹೊರಡಿಸಿತ್ತು. ಮೇ 2025ರಲ್ಲಿ ರಾಜ್ಯದ ವಿವಿದೆಡೆ ಸಹನ ಶಕ್ತಿ ಪರೀಕ್ಷೆ ನಡೆಸಲಾಗಿತ್ತು.

    ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕವಿಪ್ರನಿನಿ) ಅಂತಿಮವಾಗಿ ಕಿರಿಯ ಸ್ಟೆಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ ಹುದ್ದೆಗಳಿಗೆ ಆಯ್ಕೆಗೊಂಡ 491 ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಕಟ್‌ ಆಫ್ ಅಂಕಗಳೊಂದಿಗೆ ಪ್ರಕಟಿಸಿತ್ತು. ಅಭ್ಯರ್ಥಿಗಳಿಂದ ನಿಗದಿತ ಸಮಯದಲ್ಲಿ ಬಂದ ಆಕ್ಷೇಪಣೆಗಳನ್ನು ಪರೀಶಿಲಿಸಿ ಅಂತಿಮ ಆಯ್ಕೆ ಪಟ್ಟಿಯನ್ನು ಆಗಸ್ಟ್ 2025 ರಲ್ಲಿ ತನ್ನ ಅಧಿಕೃತ ವೆಬ್‌ಸೈಟ್‍ನಲ್ಲಿ ಪ್ರಕಟಿಸಿದ್ದು, htpps://kptcl.karnataka.gov.in/recruitment ಜಾಲತಾಣದಲ್ಲಿ ಆಯ್ಕೆ ಪಟ್ಟಿ ಲಭ್ಯವಿದೆ.
    ರಾಜ್ಯದಾದ್ಯಂತ ಕೆಪಿಟಿಸಿಎಲ್ ಉದ್ಯೋಗದ ಭರವಸೆಯಲ್ಲಿದ್ದ 2600 ಕ್ಕೂ ಹೆಚ್ಚು ಅಭ್ಯರ್ಥಿಗಳು ಮೇ ತಿಂಗಳಿನಲ್ಲಿ ನಡೆದಿದ್ದ ಸಹನ ಶಕ್ತಿ ಪರೀಕ್ಷೆಯಲ್ಲಿ ಪಾಲ್ಗೊಂಡಿದ್ದರು. ಇದಾದ ಎರಡು ತಿಂಗಳಲ್ಲೇ ನಿಗಮ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಿದ್ದು, ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಇಂಧನ ಇಲಾಖೆಯು ಉದ್ಯೋಗದ ಗ್ಯಾರಂಟಿ ನೀಡಿದೆ.

    ಉಳಿದಂತೆ, ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಕೈಗೊಳ್ಳಲಾಗಿರುವ ಕಿರಿಯ ಪವರ್‌ಮ್ಯಾನ್ ಹುದ್ದೆಯ ನೇಮಕಾತಿಗೆ ಆಯ್ಕೆ ಪಟ್ಟಿಗಳನ್ನು ಶೀಘ್ರದಲ್ಲಿಯೇ ಪ್ರಕಟಿಸಲಾಗುವುದು.

    ರುದ್ರಪ್ರಯಾಗದಲ್ಲಿ ಮೇಘಸ್ಪೋಟ: ಮುಳುಗಿದ ಹನುಮಾನ್‌ ದೇವಾಲಯ; 8 ಮಂದಿ ನಾಪತ್ತೆ

    ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading