ಬೆಂಗಳೂರು: ಆಸ್ಟ್ರೇಲಿಯಾ ಪ್ರವಾಸ ಕೈಗೊಂಡಿರುವ ಭಾರತ 3 ಪಂದ್ಯಗಳ ಏಕದಿನ ಸರಣಿಯನ್ನು 1 – 2 ಅಂತರದಿಂದ ಸೋತ ಬಳಿಕ ಇದೀಗ ಟಿ20 ಸರಣಿಯಲ್ಲಿ ಸೆಣಸಾಟ ನಡೆಸಲು ಸಜ್ಜಾಗಿದೆ.
ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಭಾರತ ತಂಡ 5 ಪಂದ್ಯಗಳನ್ನಾಡಲಿದ್ದು, ಏಷ್ಯಾಕಪ್ ಬಳಿಕ ಆಡುತ್ತಿರುವ ಮೊದಲ ಟಿ20 ಸರಣಿ ಇದಾಗಿದೆ. ಇನ್ನು ಏಕದಿನ ಪಂದ್ಯಗಳು ಭಾರತೀಯ ಕಾಲಮಾನದ ಪ್ರಕಾರ ಬೆಳಗ್ಗೆ 9 ಗಂಟೆಗೆ ಆರಂಭವಾಗುತ್ತಿದ್ದವು. ಆದರೆ ಟಿ20 ಪಂದ್ಯಗಳು ಭಾರತೀಯ ಕಾಲಮಾನದ ಪ್ರಕಾರ ಮಧ್ಯಾಹ್ನ 1.45ಕ್ಕೆ ಶುರುವಾಗಲಿವೆ.
ಇಂದು ( ಅಕ್ಟೋಬರ್ 29 ) ಇತ್ತಂಡಗಳ ಮೊದಲ ಪಂದ್ಯ ಆಸ್ಟ್ರೇಲಿಯಾದ ರಾಜಧಾನಿ ಕ್ಯಾನ್‌ಬೆರಾದ ಮನುಕಾ ಓವಲ್‌ನಲ್ಲಿ ನಡೆಯಲಿದೆ. ಇನ್ನು ಸರಣಿಯ ಎಲ್ಲ ಪಂದ್ಯಗಳೂ ಸಹ ಜಿಯೊ ಹಾಟ್‌ಸ್ಟಾರ್ ಅಪ್ಲಿಕೇಷನ್‌ನಲ್ಲಿ ಲಭ್ಯವಿರಲಿದ್ದು, ಸ್ಟಾರ್ ನೆಟ್‌ವರ್ಕ್‌ನ ಟಿವಿ ಚಾನೆಲ್‌ಗಳಲ್ಲಿ ನೇರಪ್ರಸಾರ ಲಭ್ಯವಿರಲಿದೆ.
ಕಳೆದ ಟಿ20 ವಿಶ್ವಕಪ್ ಟೂರ್ನಿಯ ಸೂಪರ್ 8 ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವನ್ನು ಕೊನೆಯ ಬಾರಿಗೆ ಎದುರಿಸಿದ್ದ ಭಾರತ 24 ರನ್‌ಗಳ ಗೆಲುವನ್ನು ದಾಖಲಿಸಿತ್ತು.
ತಂಡಗಳು:
ಆಸ್ಟ್ರೇಲಿಯಾ ಕ್ರಿಕೆಟ್ ತಂಡ: ಮಿಚೆಲ್ ಮಾರ್ಷ್ (ನಾಯಕ), ಸೀನ್ ಅಬಾಟ್, ಕ್ಸೇವಿಯರ್ ಬಾರ್ಟ್ಲೆಟ್, ಮಹ್ಲಿ ಬಿಯರ್ಡ್‌ಮ್ಯಾನ್, ಟಿಮ್ ಡೇವಿಡ್, ಬೆನ್ ಡ್ವಾರ್ಶುಯಿಸ್, ನಾಥನ್ ಎಲ್ಲಿಸ್, ಜೋಷ್ ಹ್ಯಾಜಲ್‌ವುಡ್, ಗ್ಲೆನ್ ಮ್ಯಾಕ್ಸ್‌ವೆಲ್, ಟ್ರಾವಿಸ್ ಹೆಡ್, ಜೋಷ್ ಇಂಗ್ಲಿಸ್, ಮ್ಯಾಥ್ಯೂ ಕುಹ್ನೆಮನ್, ಮಿಚೆಲ್ ಓವೆನ್, ಜೋಷ್ ಫಿಲಿಪ್ಪೆ, ತನ್ವೀರ್ ಸಂಘ, ಮ್ಯಾಥ್ಯೂ ಶಾರ್ಟ್, ಮಾರ್ಕಸ್ ಸ್ಟೊಯ್ನಿಸ್
ಭಾರತ ಕ್ರಿಕೆಟ್ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಶುಭಮನ್ ಗಿಲ್ (ಉಪನಾಯಕ), ತಿಲಕ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ, ಶಿವಮ್ ದುಬೆ, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ, ಅರ್ಶದೀಪ್ ಸಿಂಗ್, ಕುಲದೀಪ್ ಯಾದವ್, ಹರ್ಷಿತ್ ರಾಣಾ, ಸಂಜು ಸ್ಯಾಮ್ಸನ್, ರಿಂಕು ಸಿಂಗ್, ವಾಷಿಂಗ್ಟನ್ ಸುಂದರ್
ರಾಜ್ಯ ಪೊಲೀಸರ ಟೋಪಿ ಬದಲಾವಣೆ; ಹೊಸ ನೀಲಿ ಕ್ಯಾಪ್ ತೊಟ್ಟು ಮಿಂಚಿದ ಪೊಲೀಸರು
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


