Thursday, May 14, 2026
spot_img
More
    spot_img
    HomeLatest newsರಾಜ್ಯ ಪೊಲೀಸರ ಟೋಪಿ ಬದಲಾವಣೆ; ಹೊಸ ನೀಲಿ ಕ್ಯಾಪ್‌ ತೊಟ್ಟು ಮಿಂಚಿದ ಪೊಲೀಸರು

    ರಾಜ್ಯ ಪೊಲೀಸರ ಟೋಪಿ ಬದಲಾವಣೆ; ಹೊಸ ನೀಲಿ ಕ್ಯಾಪ್‌ ತೊಟ್ಟು ಮಿಂಚಿದ ಪೊಲೀಸರು

    ಬೆಂಗಳೂರು: ಪೊಲೀಸ್‌‍ ಇಲಾಖೆ ತನ್ನ ಇತಿಹಾಸ ಮರೆತು ರಾಜಕಾರಣಿಗಳನ್ನು ಓಲೈಸಲು ವ್ಯಕ್ತಿತ್ವವನ್ನು ಬದಲಾಯಿಸಿಕೊಳ್ಳಬಾರದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಸೂಚನೆ ನೀಡಿದರು.

    ವಿಧಾನಸೌಧದ ಬ್ಯಾಕ್ವೆಂಟ್‌ ಹಾಲ್‌ನಲ್ಲಿ ನಡೆದ ಪೀಕ್‌ ಕ್ಯಾಪ್‌ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಹಿಂದೆ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪೊಲೀಸರಿಗೆ ಕೇಸರಿ ಬಟ್ಟೆ ಹಾಕಿಸಲಾಗಿತ್ತು. ಆ ಸಂದರ್ಭದಲ್ಲಿ ಯಾವ ಅಧಿಕಾರಿ ಇದ್ದರೋ ಗೊತ್ತಿಲ್ಲ. ಆದರೆ ರಾಜಕಾರಣಿಗಳನ್ನು ಓಲೈಸಲು ಪೊಲೀಸರು ತಮ್ಮನ್ನು ತಾವು ಮಾರಿಕೊಂಡಂತೆ ವೇಷ ಬದಲಾಯಿಸಬಾರದು. ಪೊಲೀಸರು ರಾಜಕೀಯ ಚಟುವಟಿಕೆಯಲ್ಲಿ ತೊಡಗಿಸಿಕೊಂಡರೆ ಜನರ ನಂಬಿಕೆ ಕಳೆದುಕೊಳ್ಳುತ್ತಾರೆ. ರಾಜ್ಯದಲ್ಲಿ ಅದಕ್ಕೆ ಅವಕಾಶವಿಲ್ಲ ಎಂದರು.

    ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಮಾತನಾಡಿ, ರಾಜ್ಯದಲ್ಲಿ 16 ಸಾವಿರ ಪೊಲೀಸ್‌‍ ಕಾನ್ಸ್‌ಟೇಬಲ್‌ಗಳ ಹುದ್ದೆ ಖಾಲಿ ಇದ್ದು, ಅವುಗಳಲ್ಲಿ 8500 ಹುದ್ದೆಗಳ ನೇಮಕಕ್ಕೆ ಒಂದು ವಾರದಲ್ಲಿ ಅಧಿಸೂಚನೆ ಹೊರಡಿಸಲಾಗುವುದು ಎಂದು ತಿಳಿಸಿದರು.

    ಪೊಲೀಸ್‌‍ ಸಿಬ್ಬಂದಿಗಳ ಪೀಕ್‌ಕ್ಯಾಪ್‌ ಬದಲಾವಣೆ ಐತಿಹಾಸಿಕ ನಿರ್ಧಾರವಾಗಿದ್ದು, ಇದನ್ನು ತಮ್ಮ ಅವಧಿಯಲ್ಲಿ ಕೈಗೊಂಡಿರುವುದು ಸಂತಸದ ವಿಚಾರ. ಲಂಡನ್‌, ಆಸ್ಟ್ರೇಲಿಯಾದಲ್ಲಿ ಸ್ಲೋಜ್‌ ಹ್ಯಾಟ್‌ ಧರಿಸಲಾಗುತ್ತಿತ್ತು. 1953ರಲ್ಲಿ ಭಾರತದ ಸಶಸ್ತ್ರ ಪಡೆಗಳಿಗೂ ಸ್ಲೋಜ್‌ ಹ್ಯಾಟ್‌ ನಿಗದಿಪಡಿಸಲಾಗಿತ್ತು ಎಂದು ಹೇಳಿದರು.

    2034ರ ಫಿಫಾ ವಿಶ್ವಕಪ್‌ಗಾಗಿ ಆಕಾಶದಲ್ಲಿ ಕ್ರೀಡಾಂಗಣ ನಿರ್ಮಿಸಲು ಮುಂದಾದ ದೇಶ!


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಬೆಂಗಳೂರಿನಲ್ಲಿ ಮುಂಗಾರು ಆರ್ಭಟ: ಆಲಿಕಲ್ಲು ಮಳೆ, ಗುಡುಗು-ಸಿಡಿಲಿಗೆ ನಗರ ತತ್ತರ

    ಬೆಂಗಳೂರು: ಸಂಜೆ ಐಟಿ ರಾಜಧಾನಿ ಬೆಂಗಳೂರಿನ ಮೇಲೆ ಪ್ರಕೃತಿ ತನ್ನ ಕೋಪವನ್ನು ಸಂಪೂರ್ಣವಾಗಿ ತೋರಿಸಿತು. ಕಾರ್ಮೋಡ ಕವಿದ ಆಕಾಶದಿಂದ ಮೊದಲು ಗುಡುಗು-ಸಿಡಿಲಿನ ಆರ್ಭಟ, ಬಳಿಕ ಆಲಿಕಲ್ಲು ಮಳೆ ಮತ್ತು ಜೋರು ಗಾಳಿ ನಗರವನ್ನು...

    ಇಂಡೋನೇಷ್ಯಾದ ಡೇ-ಕೇರ್‌ನಲ್ಲಿ 53 ಮಕ್ಕಳಿಗೆ ನಡೆದ ಅಮಾನವೀಯ ದೌರ್ಜನ್ಯ: ವಿಡಿಯೋ ನೋಡಿ ಜಗತ್ತೇ ಬೆಚ್ಚಿ ಬಿದ್ದಿತು

    ಇಂಡೋನೇಷ್ಯಾದ ಜಾವಾ ದ್ವೀಪದ ಯೋಗ್ಯಕರ್ತ ನಗರದಲ್ಲಿ ನಡೆದ ಒಂದು ಆಘಾತಕಾರಿ ಘಟನೆ ಇಡೀ ಜಗತ್ತನ್ನೇ ಬೆಚ್ಚಿ ಬೀಳಿಸಿದೆ. 'ಲಿಟಲ್ ಅರೇಶಾ' ಎಂಬ ಡೇ-ಕೇರ್ ಕೇಂದ್ರದಲ್ಲಿ ಎರಡು ವರ್ಷಕ್ಕಿಂತ ಕಡಿಮೆ ವಯಸ್ಸಿನ 53 ಮಕ್ಕಳನ್ನು...

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading