ನವದೆಹಲಿ: ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಏಕಾಂಗಿಯಾಗಿ ಸ್ಪರ್ಧಿಸುವ ನಿರ್ಧಾರ ಮಾಡಿದೆ.
ಆಮ್ ಆದ್ಮಿ ಪಾರ್ಟಿಯೊಂದಿಗೆ ಯಾವುದೇ ಮೈತ್ರಿಯನ್ನು ತಳ್ಳಿಹಾಕಿದೆ. ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಎಲ್ಲಾ 70 ಸ್ಥಾನಗಳಲ್ಲಿ ಪಕ್ಷವು ಸ್ವಂತವಾಗಿ ಸ್ಪರ್ಧಿಸಲಿದೆ ಎಂದು ದೆಹಲಿ ಕಾಂಗ್ರೆಸ್ ಅಧ್ಯಕ್ಷ ದೇವೇಂದ್ರ ಯಾದವ್ ಹೇಳಿದ್ದಾರೆ.
ಚುನಾವಣೆಗೆ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲ್ಲ. ಈ ಬಗ್ಗೆ ಅವರು ಸ್ಪಷ್ಟನೆ ನೀಡಿದ್ದು, ಸಿಎಂ ಅಭ್ಯರ್ಥಿಯನ್ನು ಚುನಾವಣೆಯ ನಂತರ ಕಾಂಗ್ರೆಸ್ ಶಾಸಕಾಂಗ ಪಕ್ಷವು ನಿರ್ಧರಿಸುತ್ತದೆ ಎಂದು ಹೇಳಿದ್ದಾರೆ.
ಈ ತಿಂಗಳ ಆರಂಭದಲ್ಲಿ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಯನ್ನು ಮಹಾಭಾರತದಂತೆಯೇ ಧರ್ಮಯುದ್ಧಕ್ಕೆ ಹೋಲಿಸಿದ್ದರು. ದೆಹಲಿ ವಿಧಾನಸಭಾ ಚುನಾವಣೆಯು ಧರ್ಮಯುದ್ಧದಂತಿದೆ. ಕೌರವರಂತೆ ಅವರಲ್ಲಿ ಅಪಾರ ಹಣ ಮತ್ತು ಬಲವಿದೆ. ಆದರೆ ಪಾಂಡವರಂತೆ ದೇವರು ಮತ್ತು ಜನರು ನಮ್ಮೊಂದಿಗಿದ್ದಾರೆ ಎಂದು ಹೇಳಿದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


