Saturday, August 8, 2026
spot_img
More
    spot_img
    HomeNational/ Internationalನಾಲ್ಕನೇ ದಿನವೂ ಮುಂದುವರಿದ ವಿರೋಧ ಪಕ್ಷಗಳ ಪ್ರತಿಭಟನೆ; ಸಂಸತ್‌ ಸೋಮವಾರಕ್ಕೆ ಕಲಾಪ ಮುಂದೂಡಿಕೆ

    ನಾಲ್ಕನೇ ದಿನವೂ ಮುಂದುವರಿದ ವಿರೋಧ ಪಕ್ಷಗಳ ಪ್ರತಿಭಟನೆ; ಸಂಸತ್‌ ಸೋಮವಾರಕ್ಕೆ ಕಲಾಪ ಮುಂದೂಡಿಕೆ

    ನವದೆಹಲಿ: ಉತ್ತರಪ್ರದೇಶದ ಸಂಭಾಲ್‍ನಲ್ಲಿ ನಡೆದ ಹಿಂಸಾಚಾರ ಘಟನೆ ಹಾಗೂ ಉದ್ಯಮಿ ಅದಾನಿ ಪ್ರಕರಣ ಕುರಿತು ಚರ್ಚೆಗೆ ಅವಕಾಶ ನೀಡಬೇಕೆಂದು ಇಂದೂ ಕೂಡ ಪ್ರತಿಪಕ್ಷಗಳು ಪಟ್ಟು ಹಿಡಿದ ಕಾರಣ, ಸಂಸತ್‍ನ ಉಭಯ ಸದನಗಳನ್ನು ಸೋಮವಾರಕ್ಕೆ ಮುಂದೂಡಲಾಗಿದೆ.

    Advertisement

    ರಾಜ್ಯಸಭೆ ಹಾಗೂ ಲೋಕಸಭೆಯಲ್ಲಿ ಎಂದಿನಂತೆ ಎರಡು ವಿಷಯಗಳು ಪ್ರತಿಧ್ವನಿಸಿ ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರ ನಡುವೆ ಮಾತಿನ ಚಕಮಕಿ ನಡೆದು ಗದ್ದಲ ಉಂಟಾಗಿದ್ದರಿಂದ ಉಭಯ ಸದನಗಳನ್ನು ಸೋಮವಾರಕ್ಕೆ ಮುಂದೂಡಲಾಯಿತು.

    ಬೆಳಗ್ಗೆ 11 ಗಂಟೆಗೆ ಸಂಸತ್‍ನ ಕೆಳಮನೆಯಾದ ಲೋಕಸಭೆಯ ಕಲಾಪ ಆರಂಭವಾಗುತ್ತಿದ್ದಂತೆ ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟದ ಸದಸ್ಯರು ದಿನದ ಎಲ್ಲಾ ಕಲಾಪಗಳನ್ನು ಬದಿಗೊತ್ತಿ ಸಂಭಾಲ್ ಗಲಭೆ ಪ್ರಕರಣ ಹಾಗೂ ಉದ್ಯಮಿ ಅದಾನಿ ಪ್ರಕರಣವನ್ನು ಚರ್ಚೆಗೆ ತೆಗೆದುಕೊಳ್ಳುವಂತೆ ಸ್ಪೀಕರ್ ಓಂ ಬಿರ್ಲಾಗೆ ಮನವಿ ಮಾಡಿದರು.

    ಮೊದಲು ಪ್ರಶ್ನೋತ್ತರ ಕಲಾಪ ಮುಗಿಯಲಿ. ನೀವು ಕೊಟ್ಟಿರುವ ನೋಟೀಸ್‍ನ್ನು ಪರಿಗಣಿಸಲಾಗುವುದು. ಮೊದಲು ಸದನವು ನಿಯಮಗಳಂತೆ ನಡೆಯಲಿ ಎಂದು ಪ್ರತಿಪಕ್ಷಗಳಿಗೆ ಕಿವಿಮಾತು ಹೇಳಿದರು.
    ಇದನ್ನು ಒಪ್ಪದ ಪ್ರತಿಪಕ್ಷಗಳ ಸದಸ್ಯರು ಮೊದಲು ಈ ಎರಡು ವಿಷಯಗಳ ಬಗ್ಗೆ ಚರ್ಚೆಗೆ ಅವಕಾಶ ಮಾಡಿಕೊಡಿ. ಇದು ಅತ್ಯಂತ ತುರ್ತಾದ ಪ್ರಕರಣವಾಗಿದೆ ಎಂದು ಒತ್ತಾಯಿಸಿ ಸದನದ ಬಾವಿಗಿಳಿದು, ಘೋಷಣೆಗಳನ್ನು ಕೂಗಿದರು.

    ಪ್ರಶ್ನೋತ್ತರ ಅವಧಿಯಲ್ಲಿ ಸದನವು ಕೇವಲ ಎರಡು ಪ್ರಶ್ನೆಗಳನ್ನು ತೆಗೆದುಕೊಳ್ಳಲು ಸಾಧ್ಯವಾಗಲಿಲ್ಲ. ಹೀಗಾಗಿ ಸ್ಪೀಕರ್ ಅವರು ಸದನವನ್ನು ಮಧ್ಯಾಹ್ನ 12 ಗಂಟೆಗೆ ಮುಂದೂಡಿದರು.

    ಸದನ ಮತ್ತೆ ಸೇರಿದಾಗಲೂ ಪ್ರತಿಪಕ್ಷಗಳ ಪ್ರತಿಭಟನೆ ಮುಂದುವರೆಯಿತು. ಗದ್ದಲದ ಪ್ರತಿಭಟನೆಯ ನಡುವೆ ಕೆಲವು ಸಚಿವರು ಕಾಗದಪತ್ರಗಳನ್ನು ಮಾತ್ರ ಮಂಡಿಸಿದರು. ಈ ವೇಳೆ ಸಭಾಪತಿಗಳ ಪೀಠದಲ್ಲಿ ಆಸೀನರಾಗಿದ್ದ ದಿಲೀಪ್ ಸೈಕಿಯಾ, ಪ್ರತಿಪಕ್ಷಗಳು ರಚನಾತಕ ಪಾತ್ರ ವಹಿಸುವಂತೆ ಒತ್ತಾಯಿಸಿದರು. ಅವರ ಮನವಿಗಳು ವಿಫಲವಾದಾಗ ಮುಂದೂಡಬೇಕಾಯಿತು.

    ಇತ್ತ ರಾಜ್ಯಸಭೆಯಲ್ಲೂ ಇದೇ ವಿಷಯಗಳು ಪ್ರತಿಧ್ವನಿಸಿ ಸಭಾಪತಿ ಸದನವನ್ನು ಸೋಮವಾರಕ್ಕೆ ಮುಂದೂಡಿದರು.

    ಅದಾನಿ ಗ್ರೂಪ್ ವಿರುದ್ಧದ ಆರೋಪ ಮತ್ತು ಮಣಿಪುರ ಮತ್ತು ಸಂಭಾಲ್‍ನಲ್ಲಿನ ಹಿಂಸಾಚಾರದ ಚರ್ಚೆಯ ಮುಂದೂಡಿಕೆ ನೋಟಿಸ್‍ಗಳನ್ನು ತಿರಸ್ಕರಿಸಿದ ವಿರೋಧ ಪಕ್ಷದ ಸಂಸದರು ಪ್ರತಿಭಟಿಸಿದ್ದರಿಂದ ರಾಜ್ಯಸಭೆಯ ಕಲಾಪವನ್ನು ಮುಂದೂಡಬೇಕಾಯಿತು.

    ದಿನದ ಕಲಾಪ ಆರಂಭವಾಗುತ್ತಿದ್ದಂತೆ ರಾಜ್ಯಸಭೆಯ ಸಭಾಪತಿ ಜಗದೀಪ್ ಧನ್ಕರ್ ಅವರು ಪಟ್ಟಿ ಮಾಡಲಾದ ಕಲಾಪವನ್ನು ಕೈಗೆತ್ತಿಕೊಂಡರು. ಸದನದ ನಿಯಮ 267ರಡಿ ನಿಗದಿತ ವ್ಯವಹಾರವನ್ನು ಮುಂದೂಡಲು 17 ಸೂಚನೆಗಳನ್ನು ಸ್ವೀಕರಿಸಿದ್ದಾರೆ ಎಂದು ಹೇಳಿದರು.

    ಎಲ್ಲಾ ನೋಟೀಸ್‍ಗಳನ್ನು ತಿರಸ್ಕರಿಸುತ್ತಿರುವುದಾಗಿ ಸಭಾಪತಿ ತಿಳಿಸಿದರು. ಇದು ಹಲವು ವಿರೋಧ ಪಕ್ಷಗಳ ಸಂಸದರ ಪ್ರತಿಭಟನೆಗೆ ಕಾರಣವಾಯಿತು. ನಾನು ನಿಮಲ್ಲಿ ಮನವಿ ಮಾಡುವುದೇನೆಂದರೆ ಮೊದಲು ಕಲಾಪ ನಡೆಯಲು ಅವಕಾಶ ಮಾಡಿಕೊಡಿ. ತೊಂದರೆ ಮಾಡಬೇಡಿ ಎಂದು ಧನ್ಕರ್ ಮನವಿ ಮಾಡಿಕೊಂಡರೂ ಪ್ರಯೋಜನವಾಗದ ಹಿನ್ನಲೆಯಲ್ಲಿ ಕಲಾಪವನ್ನು ಮುಂದೂಡಲಾಯಿತು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading