ನವದೆಹಲಿ: ರಾಜ್ಯಾದ್ಯಂತ ಸಚಿವ ಸಂಪುಟ ಪುನರ್ ರಚನೆ ಗಂಭೀರವಾಗಿ ಚರ್ಚೆಯಾಗುತ್ತಿದ್ದು, ಇದೀಗ ಸಿಎಂ ಸಿದ್ದರಾಮಯ್ಯ ಅವರು ಸಂಪುಟ ಪುನರ್ ರಚನೆ ಬಗ್ಗೆ ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ನವದೆಹಲಿಯಲ್ಲಿಂದು ಸಚಿವ ಸಂಪುಟ ಪುನರ್ ರಚನೆ ಸಂಬಂಧ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಹಾಗೂ ಪುನರ್ ರಚನೆಯ ಕುರಿತು ನಾನು ಇದುವರೆಗೂ ಪ್ರಸ್ತಾಪ ಮಾಡಿಲ್ಲ. ಅಲ್ಲದೇ ಈ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರೊಂದಿಗೆ ಸಹ ಯಾವುದೇ ಚರ್ಚೆ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಇನ್ನು ಮುಂದುವರಿದು ಮಾತನಾಡಿದ ಅವರು, ನಾಗೇಂದ್ರ ಅವರು ಸಚಿವ ಸಂಪುಟಕ್ಕೆ ಸೇರ್ಪಡೆಯಾಗಲಿದ್ದಾರೆ. ಆದರೆ ಈಗಲೇ ಅಲ್ಲ ಎಂಬ ಹೇಳಿಕೆಯನ್ನು ಮಾತ್ರ ಹೇಳಿದ್ದೆ ಅಷ್ಟೆ. ಆದರೆ ಇದೀಗ ಸಚಿವ ಸಂಪುಟದ ಬಗ್ಗೆ ಮಾಧ್ಯಮದವರೇ ಪ್ರಕಟಿಸಿ ಸಂಭವನೀಯವಾಗಿ ಸಚಿವರ ಪಟ್ಟಿಯನ್ನು ಕೂಡ ಬಿತ್ತರಿಸಿವೆ. ಹೀಗಾಗಿ ಈ ಎಲ್ಲಾ ಪ್ರಶ್ನೆಗಳಿಗೆ ಮಾಧ್ಯಮದವರೇ ಉತ್ತರಿಸಬೇಕು ಎಂದು ಹೇಳಿದರು.
ಇನ್ನು ಹಾಸನದಲ್ಲಿ ಡಿಸೆಂಬರ್.5ರಂದು ಸ್ವಾಭಿಮಾನಿ ಸಮಾವೇಶ ಆಯೋಜಿಸಲಾಗಿದೆ. ಹೀಗಾಗಿ ಸಮಾವೇಶಕ್ಕೆ ರಾಜ್ಯ ಉಸ್ತುಬಾರಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ಸಂಘಟಕರು ಎಂದು ಆಹ್ವಾನಿಸಲಾಗಿದೆ ಎಂದು ತಿಳಿಸಿದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


