Wednesday, November 4, 2026
spot_img
More
    spot_img
    HomeLatest newsಕಮಾಂಡರ್‌ಗಳ ನಡುವಿನ "ಕದನ ವಿರಾಮ" ಸಭೆ!

    ಕಮಾಂಡರ್‌ಗಳ ನಡುವಿನ “ಕದನ ವಿರಾಮ” ಸಭೆ!

    ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಹಾರಕೂಟ ನಡೆಸುವ ಮೂಲಕ ಕರ್ನಾಟಕ ಕಾಂಗ್ರೆಸ್ ಗೊಂದಲಕ್ಕೆ ತೆರೆಬಿದ್ದಿದೆ. ಈ  ಉಪಹಾರ ಹಾಗೂ ಚರ್ಚೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ “ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಈಗಲೂ ಇಲ್ಲ, ಮುಂದೆಯೂ ಇರುವುದಿಲ್ಲ” ಎಂದು ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

    “ಬಿಜೆಪಿ , ಜೆಡಿಎಸ್ ಪಕ್ಷಗಳು ಪತ್ರಿಕೆಗಳಲ್ಲಿ ಅವಿಶ್ವಾಸ ನಿರ್ಣಯ ತೆಗೆದುಕೊಳ್ಳುವುದಾಗಿ ಹೇಳಿಕೆ ನೀಡಿದ್ದಾರೆ. ಇದು ಅಸಂಭವವಾಗಿದ್ದು, ನಾವು 142 ಜನರಿದ್ದು, ಅವರು 64 ಜನ ಮಾತ್ರ, ಜೆಡಿಎಸ್ 18 ಇದ್ದಾರೆ. ಅವರಿಬ್ಬರೂ ಸೇರಿ 82 ಜನರಾಗುತ್ತಾರೆ. ಇದೊಂದು ವಿಫಲ ಪ್ರಯತ್ನ ಎಂದು ಭಾವಿಸಿದ್ದೇನೆ” ಎಂದು ಸಿದ್ದರಾಮಯ್ಯ ಪ್ರತಿಪಕ್ಷಗಳಿಗೆ ತಿರುಗೇಟು ನೀಡಿದ್ದರು.

    ಸಭೆಯ ಬಳಿಕ ಮಾತನಾಡಿದ ಡಿ.ಕೆ.ಶಿವಕುಮಾರ್, ‘ರಾಜಕೀಯವಾಗಿ ನಮ್ಮಿಬ್ಬರದ್ದೂ ಒಂದೇ ತೀರ್ಮಾನ. ಹೈಕಮಾಂಡ್‌ ಹೇಳಿದಂತೆ ಹಿಂದೆಯೂ ಕೆಲಸ ಮಾಡಿಕೊಂಡು ಬಂದಿದ್ದೇವೆ, ಮುಂದೆಯೂ ಕೆಲಸ ಮಾಡಿಕೊಂಡು ಹೋಗುತ್ತೇವೆ” ಎಂದು ಹೇಳಿದ್ದಾರೆ.

    ಪ್ರತಿಪಕ್ಷಗಳ ನಾಯಕರು ಈ ಉಪಹಾರಕೂಟವನ್ನು ವ್ಯಂಗ್ಯವಾಡಿದ್ದಾರೆ. ಇಬ್ಬರು ನಾಯಕರು ಒಟ್ಟಾಗಿ ಉಪಹಾರ ಮಾಡುವಂತೆ ಹೈಕಮಾಂಡ್ ಸೂಚನೆ ನೀಡಬೇಕಾದ ಸ್ಥಿತಿಯಲ್ಲಿ ಪಕ್ಷವಿದೆ ಎಂದು ಲೇವಡಿ ಮಾಡಿದ್ದಾರೆ.

    ಆರ್. ಅಶೋಕ ಪೋಸ್ಟ್: ಉಪಹಾರಕೂಟದ ಚಿತ್ರವನ್ನು ಹಂಚಿಕೊಂಡಿರುವ ಪ್ರತಿಪಕ್ಷ ನಾಯಕ ಆರ್.ಅಶೋಕ, ‘ಮುಖ್ಯಮಂತ್ರಿ Siddaramaiah ಮತ್ತು ಡಿಸಿಎಂ DK Shivakumar ಅವರ ನಡುವಿನ ಬಹುನಿರೀಕ್ಷಿತ ‘ಬೆಳಗಿನ ಉಪಾಹಾರ ಶೃಂಗಸಭೆ’ ಅಂತೂ ಇಂತೂ ಜರುಗಿದೆ’ ಎಂದು ಹೇಳಿದ್ದಾರೆ.

    ಅಸಲಿಗೆ ಇದನ್ನು “ಬ್ರೇಕ್‌ಫಾಸ್ಟ್ ಮೀಟಿಂಗ್” ಎಂದು ಕರೆಯುವುದು ಒಂದು ಔದಾರ್ಯವೇ ಸರಿ. ನಿಜ ಹೇಳಬೇಕು ಅಂದರೆ ಇದು ದಿನಬೆಳಗಾದರೆ ಒಬ್ಬರ ಮೇಲೊಬ್ಬರು ಹೊಂಚು ಹಾಕುವ, ಕತ್ತಿ ಮಸಿಯುವ ಎರಡು ಯುದ್ಧ ನಿರತ ಬಣಗಳ ಕಮಾಂಡರ್‌ಗಳ ನಡುವಿನ “ಕದನ ವಿರಾಮ” ಸಭೆಯಂತೆ ಕಾಣಿಸಿತು ಎಂದು ವ್ಯಂಗ್ಯವಾಡಿದ್ದಾರೆ.

    ಎಲ್ಲಕ್ಕಿಂತ ಮಿಗಿಲಾದ ಅತ್ಯಂತ ಹಾಸ್ಯಾಸ್ಪದ ಸಂಗತಿ ಏನೆಂದರೆ – ಇಬ್ಬರೂ ನಾಯಕರು ಕಳೆದ ಹಲವು ತಿಂಗಳುಗಳಿಂದ ನಡೆಯುತ್ತಿರುವ ಎಲ್ಲಾ ಗೊಂದಲಗಳಿಗೆ ಮಾಧ್ಯಮಗಳನ್ನೇ ದೂಷಿಸುತ್ತಿರುವುದು ಎಂದು ಪೋಸ್ಟ್ ಹಾಕಿದ್ದಾರೆ.

    ಪ್ರಶ್ನೆ ಇಷ್ಟೇ, ಸ್ವಾಮಿ: ಇಷ್ಟಕ್ಕೂ ಈ ಗೊಂದಲ ಸೃಷ್ಟಿಸಿದ್ದು ಯಾರು? ಮಾಧ್ಯಮಗಳೋ, ತಾವುಗಳೋ? ಎಂದು ಅಶೋಕ್ ಹಲವು ಪ್ರಶ್ನೆಗಳನ್ನು ಉಭಯ ನಾಯಕರ ಮುಂದಿಟ್ಟಿದ್ದಾರೆ.

    • ನವೆಂಬರ್‌ನಲ್ಲಿ ‘ಕ್ರಾಂತಿ’ ಎಂದು ಕರೆ ನೀಡಿ, ಹೇಳಿಕೆಗಳ ಮೇಲೆ ಹೇಳಿಕೆ ಕೊಟ್ಟು, ಪಕ್ಷದಲ್ಲಿ ಗೊಂದಲದ ವಾತಾವರಣ ಸೃಷ್ಟಿಸಿದ್ದು ಪತ್ರಕರ್ತರಾ?
    • “ಕೊಟ್ಟ ಮಾತು ಉಳಿಸಿಕೊಳ್ಳವವನು ನಿಜವಾದ ನಾಯಕ,” “ಐದಾರು ಜನರ ಮಧ್ಯೆ ನಡೆದಿರುವ ‘ವ್ಯಾಪಾರ'”, “ಐದು ವರ್ಷ ನಾನೇ ಸಿಎಂ” ಎಂದೆಲ್ಲಾ ಬಹಿರಂಗ ಹೇಳಿಕೆಗಳ ಮೂಲಕ ಬಿಕ್ಕಟ್ಟು ಸೃಷ್ಟಿಸಿದ್ದು ಪತ್ರಕರ್ತರಾ?
    • ಶಕ್ತಿ ಪ್ರದರ್ಶನಕ್ಕೆಂದು ಶಾಸಕರ ಗುಂಪುಗಳನ್ನು ಕಟ್ಟಿಕೊಂಡು ತಂಡ ತಂಡವಾಗಿ ದೆಹಲಿಗೆ ಹೋಗಿ, ಗುಪ್ತ ಸಭೆಗಳನ್ನು ನಡೆಸಿದ್ದು ಪತ್ರಕರ್ತರಾ?

    ಇವತ್ತು ರಾಜ್ಯದಲ್ಲಿ ಸೃಷ್ಟಿ ಆಗಿರುವ ಈ ಎಲ್ಲಾ ಗೊಂದಲಗಳಿಗೆ ಕಾರಣವೇನು ಗೊತ್ತೇ? ತಮ್ಮಿಬ್ಬರ ಒಣಪ್ರತಿಷ್ಠೆ, ಅಧಿಕಾರದ ಲಾಲಸೆ ಮತ್ತು ಶಾಸಕರ ಗುಂಪುಗಾರಿಕೆಯೇ ಕಾರಣವೇ ಹೊರತು, ನಿಮ್ಮ ನಾಟಕಗಳನ್ನು ವರದಿ ಮಾಡಿ ಸತ್ಯವನ್ನು ಬಿತ್ತರಿಸಿದ ಮಾಧ್ಯಮಗಳಲ್ಲ ಎಂದು ಆಡಳಿತ ಪಕ್ಷದ ಕಿವಿಹಿಂಡಿದ್ದಾರೆ.

    ಈ ತೋರಿಕೆಯ “ಏಕತೆಯ ಪ್ರದರ್ಶನ”ದ ಹಿಂದೆ ಎಲ್ಲರಿಗೂ ಸ್ಪಷ್ಟವಾಗಿ ಕಾಣುತ್ತಿರುವುದು ಬಿಡಿಸಲಾಗದ ಕಗ್ಗಂಟು ಮತ್ತು ಸಂಪೂರ್ಣವಾಗಿ ಒಡೆದ ಕನ್ನಡಿಯ ಚೂರುಗಳೇ ಹೊರತು, ಯಾವುದೇ ಪ್ರಾಮಾಣಿಕ ಮೈತ್ರಿಯಲ್ಲ. ಇದು ಕೇವಲ ಒಂದು ಕ್ಷಣಿಕ ‘ಆಪ್ಟಿಕ್ಸ್’ ಅಷ್ಟೇ ಎನ್ನುವುದು ಮಾತ್ರ ಗ್ಯಾರಂಟಿ ಎಂದು ಕಾಂಗ್ರೆಸ್ ಪಕ್ಷದ ಸ್ಥಿತಿಯ ಕುರಿತು ಪೋಸ್ಟ್ ಹಾಕಿದ್ದಾರೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search