ಮೈಸೂರು: ಕಿಚ್ಚ ಸುದೀಪ್ ನಟನೆಯ ʼಮ್ಯಾಕ್ಸ್ʼ ಸಿನಿಮಾ ಬಿಡುಗಡೆಗೊಂಡು ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ನಾಡ ಅಧಿದೇವತೆ ನೆಲೆಸಿರುವ ಚಾಮುಂಡಿ ಬೆಟ್ಟಕ್ಕೆ ನಟ ಕಿಚ್ಚ ಸುದೀಪ್ ಅವರು ಭೇಟಿ ನೀಡಿ ತಾಯಿಯ ದರ್ಶನ ಪಡೆರು ವಿಶೇಷ ಪೂಜೆ ಸಲ್ಲಿಸಿದರು.
ಇಂದು ಮುಂಜಾನೆಯೇ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಕಿಚ್ಚ ಸುದೀಪ್ ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿ, ನಾಡಿಗೆ ಒಳಿತಾಗುವಂತೆ ಪ್ರಾರ್ಥನೆ ಸಲ್ಲಿಸಿದರು.
ನೆಚ್ಚಿನ ನಟ ಬರುತ್ತಿದ್ದಾರೆಂಬ ಸುದ್ದಿ ತಿಳಿದ ಅಸಂಖ್ಯಾತ ಅಭಿಮಾನಿಗಳು ಚಾಮುಂಡಿಬೆಟ್ಟದಲ್ಲಿ ಜಮಾಯಿಸಿದ್ದು ವಿಶೇಷವೆನಿಸಿತ್ತು.
ದೇವಾಲಯಕ್ಕೆ ಆಗಮಿಸಿದ್ದ ಸಾರ್ವಜನಿಕರು ನೆಚ್ಚಿನ ನಟನನ್ನು ಕಂಡು ಶಿಳ್ಳೆ ಒಡೆದು ಜೈಕಾರ ಕೂಗಿದರು. ನಂತರ ಸುದೀಪ್ ಅಭಿಮಾನಿಗಳತ್ತ ಕೈ ಬೀಸಿದರು. ಈ ವೇಳೆ ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು.
ʼಮ್ಯಾಕ್ಸ್ʼ ಸಿನಿಮಾ ಇದೇ ತಿಂಗಳ 25ರಂದು ರಾಜ್ಯಾದ್ಯಂತ ಬಿಡುಗಡೆಯಾಗಿದೆ. ಬಿಡುಗಡೆಯಾಗಿ 4ನೇ ದಿನ ಪೂರೈಸಿದ್ದು ಭರ್ಜರಿ ಕಲೆಕ್ಷನ್ ಮಾಡುತ್ತಿದೆ.
ಸದ್ಯ ಬಾಕ್ಸಾಪೀಸ್‌ನಲ್ಲಿ ಸೂಪರ್ ಸ್ಟಾರ್ ಉಪೇಂದ್ರ ನಿರ್ದೇಶಿಸಿ ನಟಿಸಿರುವ ಯುಐ ಸಿನಿಮಾ ಭರ್ಜರಿ ಸದ್ದು ಮಾಡುತ್ತಿರುವ ಬೆನ್ನಲ್ಲೇ ಡಿಸೆಂಬರ್.25ರಂದು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಮ್ಯಾಕ್ಸ್ ಸಿನಿಮಾ ಬಿಡುಗಡೆಯಾಗಿದೆ.
ಚಿತ್ರದಲ್ಲಿ ಕಿಚ್ಚಿನ ಮ್ಯಾಕ್ಸಿಮಮ್ ಮ್ಯಾಕ್ಸ್ ಅವತಾರ ನೋಡಿದ ಫ್ಯಾನ್ಸ್ ಸುದೀಪ್ ಪರ ಜೈಕಾರ ಹಾಕುತ್ತಿದ್ದಾರೆ.
ಮ್ಯಾಕ್ಸ್ ಸಿನಿಮಾದಲ್ಲಿ ವರಲಕ್ಷ್ಮೀ ಶರತ್ ಕುಮಾರ್, ಉಗ್ರಂ ಮಂಜು, ಸಂಯುಕ್ತಾ ಹೊರನಾಡು ಮುಂತಾದವರು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.
ಉಳಿದಂತೆ ಪ್ರಮೋದ್ ಶೆಟ್ಟಿ, ತೆಲುಗು ನಟ ಸುನೀಲ್, ಶರತ್ ಲೋಹಿತಾಶ್ವ, ನರೇನ್, ಕಾಲಕೇಯ ಪ್ರಭಾಕರ್, ಸುಧಾ ಬೆಳವಾಡಿ ಮುಂತಾದವರು ನಟಿಸಿದ್ದಾರೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


