Monday, November 2, 2026
spot_img
More
    spot_img
    HomeTop Storyಮುಷ್ಕರಕ್ಕೆ ಮುಂದಾಗಿದ್ದ ನೌಕರರ ಮೇಲೆ ಬಿಎಂಟಿಸಿ ಬ್ರಹ್ಮಾಸ್ತ್ರ

    ಮುಷ್ಕರಕ್ಕೆ ಮುಂದಾಗಿದ್ದ ನೌಕರರ ಮೇಲೆ ಬಿಎಂಟಿಸಿ ಬ್ರಹ್ಮಾಸ್ತ್ರ

    ಬೆಂಗಳೂರು: ವೇತನ ಪರಿಷ್ಕರಣೆ ಮಾಡುವಂತೆ ಆಗ್ರಹಿಸಿ ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ಸಿಬ್ಬಂದಿ ಡಿಸೆಂಬರ್ 31 ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಲಾಗಿದ್ದ ಬೆನ್ನಲ್ಲೇ ನೌಕರರ ಮೇಲೆ ಇದೀಗ ಬಿಎಂಟಿಸಿ ಬ್ರಹ್ಮಾಸ್ತ್ರ ಬಳಸಿದೆ.

    ಈ ಬಗ್ಗೆ ಬಿಎಂಟಿಸಿ ಆಡಳಿತ ಮಂಡಳಿ ಅಧಿಸೂಚನೆ ಹೊರಡಿಸಿದ್ದು, ಅತ್ಯಾವಶ್ಯಕ ಸೇವೆಗಳ ಅಧಿನಿಯಮ 2013ರನ್ವಯ ಬಿಎಂಟಿಸಿ ಸೇವೆ ಅತ್ಯಾವಶ್ಯಕ ಸೇವೆ ಎಂದು ಪರಿಗಣನೆ ಮಾಡಲಾಗಿದೆ. ಮುಂದಿನ ಆರು ತಿಂಗಳು ನೌಕರರು ಮುಷ್ಕರ ಮಾಡುವಂತಿಲ್ಲ.

    ಜನವರಿ1 ರಿಂದ ಅನ್ವಯವಾಗುವಂತೆ ಆರು ತಿಂಗಳು ಬಿಎಂಟಿಸಿ ನೌಕರರ ಮುಷ್ಕರಕ್ಕೆ ನಿರ್ಬಂಧ ಹೇರಲಾಗಿದೆ ಎಂದು ಬಿಎಂಟಿಸಿ ಭದ್ರತಾ ಮತ್ತು ಜಾಗೃತಾಧಿಕಾರಿ ಆದೇಶ ಹೊರಡಿಸಿದ್ದಾರೆ.

    ಸಾರಿಗೆ ನೌಕರರ ಮೂಲ ವೇತನವನ್ನು 25 ಪ್ರತಿಶತ ಹೆಚ್ಚಳ ಮಾಡಬೇಕು, ಸಾರಿಗೆ ಇಲಾಖೆಗೆ ರಾಜ್ಯ ಸರ್ಕಾರ ಇನ್ನೂ 5,010 ಕೋಟಿ ರೂಪಾಯಿ ನೀಡಬೇಕಿದೆ. ಶಕ್ತಿ ಯೋಜನೆಯ 2,000 ಕೋಟಿ ರೂಪಾಯಿ ಬಿಡುಗಡೆ ಮಾಡಬೇಕು ಎಂದು ಸಾರಿಗೆ ನಿಗಮಗಳ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಉಮೇಶ್ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

    2020ರಲ್ಲಿ ವೇತನ ಹೆಚ್ಚಳ ಘೋಷಿಸಿದ್ದರೂ 1,750 ಕೋಟಿ ರೂಪಾಯಿ ಬಾಕಿ ಉಳಿಸಿಕೊಂಡಿದೆ. 2024 ರ ಜನವರಿಯಲ್ಲಿ ವೇತನ ಹೆಚ್ಚಳ ಜಾರಿಗೊಳಿಸುವುದಾಗಿ ಭರವಸೆ ನೀಡಿದ್ದರೂ ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಇದರಿಂದಾಗಿ ನೌಕರರು ಪ್ರತಿಭಟನೆ ಮಾಡಲು ನಿರ್ಧರಿಸಿವೆ.

    ಕೆಎಸ್‌ಆರ್‌ಟಿಸಿ ಸಿಬ್ಬಂದಿ ಮತ್ತು ನೌಕರರ ಫೆಡರೇಷನ್ ಅಧ್ಯಕ್ಷ ಎಚ್‌. ವಿ. ಅನಂತ ಸುಬ್ಬರಾವ್ ಸರ್ಕಾರದ ನಿರ್ಲಕ್ಷ್ಯದ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಮತ್ತು ಸಾರಿಗೆ ಸಚಿವರು ಪದೇ ಪದೇ ನಮ್ಮ ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿದ್ದರೂ ಈವರೆಗೂ ಏನೂ ಮಾಡಿಲ್ಲ. ಇದರಿಂದ ನೌಕರರು ಬೇಸತ್ತಿದ್ದು, ಮುಷ್ಕರ ಮಾಡುವುದನ್ನು ಬಿಟ್ಟು ಬೇರೆ ದಾರಿಯಿಲ್ಲ ಎಂದು ಹೇಳಿದ್ದಾರೆ.

    ಜನವರಿ 2020 ಮತ್ತು ಫೆಬ್ರವರಿ 2023 ರವರೆಗೆ ಬಾಕಿ ಉಳಿದಿರುವ ಸರಿಸುಮಾರು 1,785 ಕೋಟಿ ರೂಪಾಯಿಗಳ ವೇತನವನ್ನು ನೀಡಬೇಕು ಎಂದು ಆಗ್ರಹಿಸಿದ್ದಾರೆ. ಇನ್ನೂ ಪಾವತಿ ಮಾಡದ 2,900 ಕೋಟಿ ರೂಪಾಯಿ ಭವಿಷ್ಯ ನಿಧಿ ಇತ್ಯರ್ಥಗೊಳಿಸಲು ಬೇಡಿಕೆ ಇಡಲಾಗಿದೆ. ನಿವೃತ್ತ ನೌಕರರಿಗೆ 325 ಕೋಟಿ ರೂಪಾಯಿ ತುಟ್ಟಿಭತ್ಯೆ ನೀಡಬೇಕಾಗಿದ್ದು ಅದನ್ನು ಕೂಡಲೇ ಪಾವತಿ ಮಾಡಲು ಆಗ್ರಹಿಸಲಾಗಿದೆ. ಶಕ್ತಿ ಯೋಜನೆ ಜಾರಿ ಮಾಡಿದ ಬಳಿಕ ಯೋಜನೆಗೆ ಸಂಬಂಧಟ್ಟಂತೆ 2000 ಕೋಟಿ ರೂಪಾಯಿ ಬಾಕಿ ನೀಡಬೇಕಿದ್ದು ಕೂಡಲೇ ಪಾವತಿಸುವಂತೆ ಒತ್ತಾಯಿಸಲಾಗಿದೆ.

    ಮುಷ್ಕರ ನಡೆಸುವ ಬಗ್ಗೆ ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿಯು ಡಿ.9 ರಂದು ಬೆಳಗಾವಿ ಅಧಿವೇಶನದಲ್ಲಿಸರಕಾರದ ಗಮನಕ್ಕೆ ತಂದಿದೆ. ಕಾರ್ಮಿಕ ಇಲಾಖೆಯ ನಿಯಮಗಳ ಪ್ರಕಾರ, ಮುಷ್ಕರ ಮಾಡುವ ಮುನ್ನಾ 21 ದಿನ ಮುಂಚಿತವಾಗಿ ನೋಟಿಸ್‌ ನೀಡಬೇಕು. ನೋಟಿಸ್‌ ನೀಡಿ ಗಮನಕ್ಕೆ ತಂದರೂ ಸರಕಾರ ತಲೆಕೆಡಿಸಿಕೊಳ್ಳುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಸಾರಿಗೆ ನೌಕರರ 2,900 ಕೋಟಿಯನ್ನು ಪಿಎಫ್‌ ರೂಪದಲ್ಲಿರಾಜ್ಯ ಸರಕಾರವು ಸಂಬಳದಲ್ಲಿಕಡಿತ ಮಾಡಿದೆ. ನಾವು ಪಾವತಿಸಿದ ಹಣವನ್ನು ಸಾಲದ ರೂಪದಲ್ಲಿಕೊಡುವಂತೆ ಕೇಳಿದರೂ ನೀಡುತ್ತಿಲ್ಲೆಂದು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

    ಸಾರ್ವಜನಿಕರಿಗೆ ತೊಂದರೆ ಮಾಡುವ ಉದ್ದೇಶ ನಮಗಿಲ್ಲ. ಆದರೆ, ನಮ್ಮ ಹೊಟ್ಟೆಗೆ ಇಲ್ಲವೆಂದ ಮೇಲೆ ಏನು ಮಾಡುವುದು? ಕುಟುಂಬದ ಪಾಡೇನು ಎಂದು ಪ್ರಶ್ನಿಸಿ, ಈ ಬಾರಿ ಎಸ್ಮಾ ಜಾರಿ ಮಾಡಿದರೂ ಪರವಾಗಿಲ್ಲ. ನಾವು ಸಂಕಷ್ಟಕ್ಕೆ ಸಿಲುಕಿದ್ದು, ನ್ಯಾಯಬೇಕಿದೆ ಎಂಬುದು ಹೋರಾಟಗಾರರ ಒತ್ತಾಯವಾಗಿದೆ.

    ಸಾರಿಗೆ ನೌಕರರ ಮೂಲ ವೇತನವನ್ನು 25 ಪ್ರತಿಶತ ಹೆಚ್ಚಳ ಮಾಡಬೇಕು, ಸಾರಿಗೆ ಇಲಾಖೆಗೆ ರಾಜ್ಯ ಸರ್ಕಾರ ಇನ್ನೂ 5,010 ಕೋಟಿ ರೂಪಾಯಿ ನೀಡಬೇಕಿದೆ. ಶಕ್ತಿ ಯೋಜನೆಯ 2,000 ಕೋಟಿ ರೂಪಾಯಿ ಬಿಡುಗಡೆ ಮಾಡಬೇಕು ಎಂದು ಸಾರಿಗೆ ನಿಗಮಗಳ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಉಮೇಶ್ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search