Thursday, September 3, 2026
spot_img
More
    spot_img
    HomeTop Storyಕುಂಭಮೇಳ ಕಾಲ್ತುಳಿತ ಪ್ರಕರಣ: ಇಂದು ಸಂಜೆಯ ವೇಳೆಗೆ ಬೆಳಗಾವಿಗೆ ಬರಲಿರುವ ನಾಲ್ವರ ಮೃತದೇಹ

    ಕುಂಭಮೇಳ ಕಾಲ್ತುಳಿತ ಪ್ರಕರಣ: ಇಂದು ಸಂಜೆಯ ವೇಳೆಗೆ ಬೆಳಗಾವಿಗೆ ಬರಲಿರುವ ನಾಲ್ವರ ಮೃತದೇಹ

    ಬೆಳಗಾವಿ: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಕಾಲ್ತುಳಿತ ಸಂಭವಿಸಿದ ಬೆಳಗಾವಿಯ ನಾಲ್ವರು ಮೃತಪಟ್ಟಿದ್ದು, ಇಂದು ಸಂಜೆಯ ವೇಳೆಗೆ ನಾಲ್ವರ ಮೃತದೇಹ ಹುಟ್ಟೂರಿಗೆ ಬರಲಿದೆ.

    Advertisement

    ಪ್ರಯಾಗ್‌ರಾಜ್‌ನಿಂದ ಬುಧವಾರ ರಾತ್ರಿಯೇ ಆಂಬುಲೆನ್ಸ್‌ ಮೂಲಕ ಶವಗಳು ಹೊರಡಿದ್ದು, ಇಂದು ಬೆಳಿಗ್ಗೆ ದೆಹಲಿ ತಲುಪಿದೆ. ಮಧ್ಯಾಹ್ನ 3.30ಕ್ಕೆ ದೆಹಲಿಯಿಂದ ಹೊರಟ ವಿಮಾನ ಸಂಜೆ 5.30ಕ್ಕೆ ಬೆಳಗಾವಿಗೆ ಬರಲಿದೆ.

    ಇನ್ನು ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್‌ ಅವರು ಶವಗಳು ಸುಗಮವಾಗಿ ನಗರಕ್ಕೆ ಬರಲು ಇಬ್ಬರು ವಿಶೇಷ ಅಧಿಕಾರಿಗಳನ್ನು ದೆಹಲಿಗೆ ಕಳುಹಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

    ಪ್ರಯಾಗ್‌ರಾಜ್‌ನಲ್ಲಿ ತೀವ್ರವಾಗಿ ಗಾಯಗೊಂಡಿದ್ದ ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರೆಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಅಸುನೀಗಿದ್ದಾರೆ.

    ಇನ್ನು ಪ್ರಯಾಗ್‌ರಾಜ್‌ ದುರಂತದಲ್ಲಿ ಸಿಲುಕಿರಬಹುದಾದ ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಅಧಿಕಾರಿಗಳ ತಂಡವನ್ನು ಕುಂಭಮೇಳಕ್ಕೆ ಕಳುಹಿಸಿ ಸಹಾಯವಾಣಿ ಶುರುಮಾಡಿದೆ. 080-22340676ಕ್ಕೆ ಕರೆ ಮಾಡಿ ನಾಪತ್ತೆಯಾದವರ ಬಗ್ಗೆ ಮಾಹಿತಿ ಹಂಚಿಕೊಳ್ಳಬಹುದಾಗಿದೆ.

    ಇನ್ನು ಮಹಾಕುಂಭಮೇಳದಲ್ಲಿ ಕಾಲ್ತುಳಿತ ಸಂಭವಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಯೋಗಿ ಆದಿತ್ಯನಾಥ್‌ ಅವರು, ಸೂಕ್ತ ವ್ಯವಸ್ಥೆ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕುಂಭಮೇಳ ನಡೆಯುವವರೆಗೂ ಮುನ್ನೆಚ್ಚರಿಕೆ ವಹಿಸುವಂತೆ ಸಲಹೆ ನೀಡಿದ್ದಾರೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading