ಬೆಂಗಳೂರು;ಬಿಜೆಪಿ ಸರ್ಕಾರವು ಫೆಬ್ರವರಿ 1ಕ್ಕೆ ಬಜೆಟ್ ಮಂಡನೆ ಮಾಡಲಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್(Budget) ಮಂಡಿಸಲಿದ್ದಾರೆ. ಈಗಾಗಲೇ ಕೇಂದ್ರ ಸರ್ಕಾರವು ಬಜೆಟ್ ಮಂಡನೆಗೆ ಬೇಕಾದ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ.2025ರ ಬಜೆಟ್‌ಗೆ ಇನ್ನೆರಡು ದಿನಗಳು ಬಾಕಿ ಉಳಿದಿದ್ದು, ಭಾರತದ ಮಧ್ಯಮ ವರ್ಗದ ಮೇಲೆ ನೇರ ಪರಿಣಾಮ ಬೀರುವ ಕ್ರಮಗಳತ್ತ ಎಲ್ಲರ ಕಣ್ಣು ನೆಟ್ಟಿದೆ.ಪ್ರತಿ ವರ್ಷದಂತೆ ಈ ಬಾರಿಯೂ ಹೊಸ ಬಜೆಟ್ ಬಗ್ಗೆ ಜನಸಾಮಾನ್ಯರಲ್ಲಿ ಸಾಕಷ್ಟು ನಿರೀಕ್ಷೆಗಳಿವೆ.ಬಜೆಟ್‌ನಲ್ಲಿರುವ ಘೋಷಣೆಗಳು ಪ್ರತಿಯೊಬ್ಬ ದೇಶವಾಸಿಗಳ ಮೇಲೆ ನೇರ ಪರಿಣಾಮ ಬೀರುತ್ತವೆ. ದಿನನಿತ್ಯದ ಅಗತ್ಯ ವಸ್ತುಗಳ ಬೆಲೆಯಿಂದ ಹಿಡಿದು ಆದಾಯ ತೆರಿಗೆವರೆಗೆ ಎಲ್ಲವೂ ಬಜೆಟ್ ಘೋಷಣೆಯ ಆಧಾರದ ಮೇಲೆ ಬದಲಾಗಬಹುದು.ಈ ಬಜೆಟ್ ಬಗ್ಗೆ ವಿವಿಧ ವಲಯಗಳು ಹಲವು ನಿರೀಕ್ಷೆಗಳನ್ನು ಹೊಂದಿವೆ.

ಆದಾಯ ತೆರಿಗೆ ವಿನಾಯಿತಿ
ಮಧ್ಯಮ ವರ್ಗದವರು ಆದಾಯ ತೆರಿಗೆ ಸ್ಲ್ಯಾಬ್‌ಗಳಲ್ಲಿ ಬದಲಾವಣೆ ಮತ್ತು ಹೆಚ್ಚುವರಿ ವಿನಾಯಿತಿಗಳನ್ನು ನಿರೀಕ್ಷಿಸುತ್ತಿದ್ದಾರೆ. ಇದು ಅವರ ಖರ್ಚು ಸಾಮರ್ಥ್ಯವನ್ನು ಹೆಚ್ಚಿಸಲು ಸಹಾಯಕವಾಗಬಹುದು
ಆರೋಗ್ಯ ಮತ್ತು ಶಿಕ್ಷಣ:
ಆರೋಗ್ಯ ಸೇವೆಗಳು ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಹೆಚ್ಚಿನ ಹೂಡಿಕೆಗಳನ್ನು ಮಾಡುವ ಮೂಲಕ, ಜನಸಾಮಾನ್ಯರಿಗೆ ಉತ್ತಮ ಸೌಲಭ್ಯಗಳನ್ನು ಒದಗಿಸುವ ನಿರೀಕ್ಷೆಯಿದೆ
ಮನೆ ಸಾಲ ತೆರಿಗೆ ವಿನಾಯಿತಿ:
ರಿಯಲ್ ಎಸ್ಟೇಟ್ ವಲಯವು ಮನೆ ಸಾಲದ ಮೇಲಿನ ತೆರಿಗೆ ವಿನಾಯಿತಿಯನ್ನು ಹೆಚ್ಚಿಸುವ ನಿರೀಕ್ಷೆಯಲ್ಲಿದೆ, ಇದು ಮನೆ ಖರೀದಿದಾರರಿಗೆ ಹೆಚ್ಚಿನ ಲಾಭವನ್ನು ನೀಡಬಹುದು.ಮನೆ ಹೊಂದುವವರು ಸೆಕ್ಷನ್ 24(ಬಿ) ಅಡಿಯಲ್ಲಿ ಗೃಹ ಸಾಲಗಳ ಮೇಲಿನ ಹೆಚ್ಚಿನ ಬಡ್ಡಿ ಕಡಿತದ ಮಿತಿಗಳಿಂದ ಪ್ರಯೋಜನ ಪಡೆಯಬಹುದು. ಕನಿಷ್ಠ ಒಂದು ಮನೆಗಾದರೂ, ಪೂರ್ತಿ ಬಡ್ಡಿ ಪಾವತಿಸುವವರಿಗೆ ರಿಯಾಯಿತಿ ಮಿತಿಯನ್ನು ಹೆಚ್ಚಿಸಬೇಕು. ಪ್ರಸ್ತುತ ಈ ಮಿತಿಯನ್ನು 2 ಲಕ್ಷದಿಂದ 3 ಲಕ್ಷಕ್ಕೆ ಹೆಚ್ಚಿಸಬೇಕು ದಿವಾನ್ ಪಿ.ಎನ್‌ನ ವ್ಯವಸ್ಥಾಪಕ ಪಾಲುದಾರ ಧ್ರುವ ಚೋಪ್ರಾ ತಿಳಿಸಿದ್ದಾರೆ.
ಉದ್ಯೋಗ ಸೃಷ್ಟಿ:
ಉದ್ಯೋಗಾವಕಾಶಗಳ ಹೆಚ್ಚಳಕ್ಕಾಗಿ ಸರ್ಕಾರದಿಂದ ಹೆಚ್ಚಿನ ಹೂಡಿಕೆಗಳನ್ನು ನಿರೀಕ್ಷಿಸಲಾಗುತ್ತಿದೆ. ಮುಖ್ಯವಾಗಿ ಮೂಲಸೌಕರ್ಯ ಅಭಿವೃದ್ಧಿ ಮತ್ತು ಕೈಗಾರಿಕಾ ವಲಯಗಳಲ್ಲಿ ಹೂಡಿಕೆ ಮಾಡುವ ಮೂಲಕ ಉದ್ಯೋಗ ಸೃಷ್ಟಿಯನ್ನು ಉತ್ತೇಜಿಸಲು ಸಾಧ್ಯ
ತಂತ್ರಜ್ಞಾನ ಮತ್ತು ಸ್ಟಾರ್ಟ್‌ಅಪ್‌ಗಳು:
ಸ್ಟಾರ್ಟ್‌ಅಪ್‌ಗಳಿಗೆ ತೆರಿಗೆ ರಿಯಾಯಿತಿಗಳು, ಹೂಡಿಕೆಗಳಿಗೆ ಉತ್ತೇಜನ ಮತ್ತು ತಂತ್ರಜ್ಞಾನ ಅಭಿವೃದ್ಧಿಗೆ ಸಹಾಯ ಮಾಡುವ ನೀತಿಗಳನ್ನು ನಿರೀಕ್ಷಿಸಲಾಗುತ್ತಿದೆ. ಇದು ನಾವೀನ್ಯತೆ ಮತ್ತು ಉದ್ಯಮಶೀಲತೆಯನ್ನು ಉತ್ತೇಜಿಸಲು ಸಹಾಯಕವಾಗಬಹುದು.
NPS ಕಡಿತ ಮಿತಿ ಹೆಚ್ಚಿಸಬೇಕು
ಸಂಪೂರ್ಣ ತೆರಿಗೆ ವಿನಾಯಿತಿ ನೀಡಬೇಕು.ಹೆಚ್ಚುವರಿ ಎನ್‌ಪಿಎಸ್ ಕಡಿತದ ಮಿತಿಯನ್ನು ಈಗ ಇರುವಂತಹ 50,000 ರೂಪಾಯಿಯಿಂದ 1 ಲಕ್ಷ ರೂಪಾಯಿಗೆ ಹೆಚ್ಚಿಸಬೇಕು. ಅಲ್ಲದೆ, ವಿತ್‌ಡ್ರಾ ಮಾಡಿದ ಹಣ ಪೂರ್ಣವಾಗಿ ತೆರಿಗೆ ಮುಕ್ತವಾಗಿರಬೇಕು.
ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ:
ಕೃಷಿ ವಲಯದಲ್ಲಿ ಬೆಳೆ ವಿಮೆ, ಸುಲಭ ಸಾಲ ಸೌಲಭ್ಯಗಳು ಮತ್ತು ತಂತ್ರಜ್ಞಾನ ಆಧಾರಿತ ಕೃಷಿ ವಿಧಾನಗಳಿಗೆ ಉತ್ತೇಜನ ನೀಡುವ ನಿರೀಕ್ಷೆಯಿದೆ. ಇದು ರೈತರ ಆದಾಯವನ್ನು ಹೆಚ್ಚಿಸಲು ಸಹಾಯಕವಾಗಬಹುದು
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


