ಇಂದು ( ಮಾರ್ಚ್ 30 ) ರಾಜ್ಯಾದ್ಯಂತ ಯುಗಾದಿ ಹಬ್ಬವನ್ನು ಆಚರಿಸಲಾಗುತ್ತಿದೆ. ರಾಜ್ಯದಲ್ಲಿ ಯುಗಾದಿ ಆಚರಣೆ ಜೋರಾಗಿ ನಡೆಯುತ್ತಿದೆ. ಇನ್ನು ದೇಶದ ಇನ್ನೂ ಹಲವು ರಾಜ್ಯಗಳಲ್ಲಿ ಸಹ ಈ ದಿನ ವಿವಿಧ ಹಬ್ಬಗಳ ಆಚರಣೆಗಳಿವೆ.
ಇನ್ನು ಹಿಂದೂಗಳ ಪ್ರಕಾರ ವರ್ಷದ ಮೊದಲ ಹಬ್ಬ ಇದಾಗಿದ್ದು, ಯುಗಾದಿಯನ್ನೇ ಹೊಸ ವರ್ಷ ಎಂದು ನಂಬಲಾಗಿದೆ. ಹೀಗೆ ಹಿಂದೂಗಳ ಪಾಲಿನ ಪ್ರಮುಖ ಹಬ್ಬವಾದ ಯುಗಾದಿಗೆ ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶುಭ ಕೋರಿದ್ದಾರೆ.
ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ವಿವಿಧ ಹಬ್ಬಗಳ ಸಲುವಾಗಿ ಶುಭ ಕೋರಿರುವ ಮೋದಿ ರಾಜ್ಯದ ಜನತೆಗೆ ಕನ್ನಡದಲ್ಲಿಯೇ ಯುಗಾದಿ ಹಬ್ಬದ ಶುಭ ಕೋರಿದ್ದಾರೆ.
ಎಲ್ಲರಿಗೂ ಯುಗಾದಿ ಹಬ್ಬದ ಶುಭಾಶಯಗಳು ಎಂದು ಬರೆದುಕೊಂಡಿರುವ ಮೋದಿ ಇದು ಹೊಸ ಭರವಸೆ ಹಾಗೂ ಜೀವನೋತ್ಸಾಹದೊಂದಿಗೆ ಸಂಬಂಧ ಹೊಂದಿರುವ ವಿಶೇಷ ಹಬ್ಬ. ಈ ಹೊಸ ವರ್ಷ ಪ್ರತಿಯೊಬ್ಬ ಜೀವನದಲ್ಲಿ ಸಂತೋಷ, ಸಮೃದ್ಧಿ ಮತ್ತು ಯಶಸ್ಸನ್ನು ತರಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಸಂತೋಷ ಮತ್ತು ಸಾಮರಸ್ಯದ ಮನೋಭಾವ ಬೆಳಯಲಿ ಮತ್ತು ಹರಡಲಿ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


