Sunday, November 1, 2026
spot_img
More
    spot_img
    HomeSportsCricketIPL 2025: ನಿನ್ನೆ ಆರ್‌ಸಿಬಿಯದ್ದು ಕೇವಲ ಗೆಲುವಲ್ಲ ದಾಖಲೆಗಳ ಬೇಟೆ; ಬೌಲಿಂಗ್‌, ಬ್ಯಾಟಿಂಗ್‌ ಎರಡರಲ್ಲೂ ಮಹಾದಾಖಲೆ!

    IPL 2025: ನಿನ್ನೆ ಆರ್‌ಸಿಬಿಯದ್ದು ಕೇವಲ ಗೆಲುವಲ್ಲ ದಾಖಲೆಗಳ ಬೇಟೆ; ಬೌಲಿಂಗ್‌, ಬ್ಯಾಟಿಂಗ್‌ ಎರಡರಲ್ಲೂ ಮಹಾದಾಖಲೆ!

    ಚಂಡೀಗಢ: ನಿನ್ನೆ ( ಮೇ 29 ) ಮುಲ್ಲಾನ್‌ಪುರದ ಮಹಾರಾಜ ಯದವೀಂದ್ರ ಸಿಂಗ್‌ ಕ್ರೀಡಾಂಗಣದಲ್ಲಿ ನಡೆದ 18ನೇ ಐಪಿಎಲ್‌ ಆವೃತ್ತಿಯ ಒಂದನೇ ಕ್ವಾಲಿಫಯರ್‌ 1 ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಪಂಜಾಬ್‌ ಕಿಂಗ್ಸ್‌ ವಿರುದ್ಧ 8 ವಿಕೆಟ್‌ಗಳ ಗೆಲುವನ್ನು ದಾಖಲಿಸುವ ಮೂಲಕ ಫೈನಲ್‌ ಪ್ರವೇಶಿಸಿತು.

    ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಪಂಜಾಬ್‌ ಕಿಂಗ್ಸ್‌ ಆರ್‌ಸಿಬಿ ಬೌಲಿಂಗ್‌ ದಾಳಿಗೆ ಮಕಾಡೆ ಮಲಗಿ 14.1 ಓವರ್‌ಗಳಲ್ಲಿ 101 ರನ್‌ಗೆ ಆಲ್‌ಔಟ್‌ ಆಗಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡಕ್ಕೆ 102 ರನ್‌ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನಟ್ಟಿದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು 10 ಓವರ್‌ಗಳಲ್ಲಿ 2 ವಿಕೆಟ್‌ ನಷ್ಟಕ್ಕೆ 106 ರನ್‌ ಕಲೆಹಾಕಿತು.

    ಹೀಗೆ ಬೌಲಿಂಗ್‌ನಲ್ಲಿ ನಿರೀಕ್ಷೆಗೂ ಮೀರಿ ಪ್ರದರ್ಶನ ನೀಡಿದ ಆರ್‌ಸಿಬಿ ಐಪಿಎಲ್‌ ಪ್ಲೇಆಫ್ಸ್‌ನಲ್ಲಿ ಎದುರಾಳಿ ತಂಡವನ್ನು 15 ಓವರ್‌ ಒಳಗೆ ಆಲ್‌ಔಟ್‌ ಮಾಡಿದ ಮೊದಲ ತಂಡ ಎಂಬ ದಾಖಲೆ ಬರೆದಿದೆ. ಅಲ್ಲದೇ ನಿನ್ನೆ 60 ಎಸೆತಗಳು ಬಾಕಿ ಇರುವಾಗಲೇ ಗೆದ್ದು ಪ್ಲೇಆಫ್‌ನಲ್ಲಿ ಅತಿಹೆಚ್ಚು ಎಸೆತಗಳು ಬಾಕಿ ಇರುವಾಗ ಗೆದ್ದ ತಂಡ ಎಂಬ ದಾಖಲೆಯನ್ನೂ ಸಹ ಬರೆದಿದೆ.

    ಈ ಮೂಲಕ ಬ್ಯಾಟಿಂಗ್‌ ಹಾಗೂ ಬೌಲಿಂಗ್‌ ಎರಡರಲ್ಲೂ ಪ್ಲೇಆಫ್‌ ಹಂತದಲ್ಲಿ ನೂತನ ದಾಖಲೆ ಬರೆದಿರುವ ಆರ್‌ಸಿಬಿ ಐತಿಹಾಸಿಕ ಗೆಲುವಿನೊಂದಿಗೆ ಫೈನಲ್‌ ಪ್ರವೇಶಿಸಿದೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    LEAVE A REPLY

    Related News

    ಮಹಾಲಯ ಅಮಾವಾಸ್ಯೆ 2026: ಅಕ್ಟೋಬರ್ 10ರಂದು ಆಚರಣೆ; ಪಿತೃಪೂಜೆಯ ಮಹತ್ವವೇನು?

    ಹಿಂದೂ ಧರ್ಮದಲ್ಲಿ ಮಹಾಲಯ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಪಿತೃಪಕ್ಷದ ಕೊನೆಯ ದಿನವಾದ ಈ ಸಂದರ್ಭದಲ್ಲಿ ಪೂರ್ವಜರನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತದೆ. ಈ ದಿನ ಶ್ರಾದ್ಧ,...

    ಕರ್ನಾಟಕಕ್ಕೆ ಗುಡ್‌ನ್ಯೂಸ್: ಯುಬಿಯಿಂದ ₹4,500 ಕೋಟಿ ಕೊಡುಗೆ, 36 ಸಾವಿರಕ್ಕೂ ಹೆಚ್ಚು ಉದ್ಯೋಗ

    ಬೆಂಗಳೂರು: ದೇಶದ ಅತಿದೊಡ್ಡ ಬಿಯರ್ ಉತ್ಪಾದನಾ ಸಂಸ್ಥೆ ಹಾಗೂ ಹೈನೆಕನ್‌ ಕಂಪನಿಯ ಭಾಗವಾಗಿರುವ ಬೆಂಗಳೂರು ಮೂಲದ 'ಯುನೈಟೆಡ್ ಬ್ರೂವರೀಸ್ ಲಿಮಿಟೆಡ್' (ಯುಬಿಎಲ್‌), ಕರ್ನಾಟಕದ ಆರ್ಥಿಕತೆ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ...

    Most Popular

    Recent Comments

    Home
    Play
    Notification
    Search