ಚಂಡೀಗಢ್: ನಿನ್ನೆ ( ಮೇ 29 ) ಮುಲ್ಲಾನ್‌ಪುರ ಕ್ರೀಡಾಂಗಣದಲ್ಲಿ ನಡೆದ ಪಂಜಾಬ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವಿನ ಒಂದನೇ ಕ್ವಾಲಿಫಯರ್ ಪಂದ್ಯದಲ್ಲಿ ಆರ್‌ಸಿಬಿ 8 ವಿಕೆಟ್‌ಗಳ ಭರ್ಜರಿ ಗೆಲುವನ್ನು ದಾಖಲಿಸಿ ಫೈನಲ್‌ಗೆ ಲಗ್ಗೆ ಇಟ್ಟಿದೆ.
ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಕಿಂಗ್ಸ್ ಆರ್‌ಸಿಬಿ ಬೌಲಿಂಗ್ ದಾಳಿಗೆ ಮಕಾಡೆ ಮಲಗಿ 14.1 ಓವರ್‌ಗಳಲ್ಲಿ 101 ರನ್‌ಗೆ ಆಲ್‌ಔಟ್ ಆಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ 102 ರನ್‌ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನಟ್ಟಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು 10 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 106 ರನ್ ಕಲೆಹಾಕಿತು.
ಪಂಜಾಬ್ ಕಿಂಗ್ಸ್ ಬ್ಯಾಟಿಂಗ್ ಆರಂಭಿಸುವುದಕ್ಕೂ ಮುನ್ನ ಇದೊಂದು ಜಿದ್ದಾಜಿದ್ದಿನ ಪಂದ್ಯವಾಗಲಿದೆ ಎಂದೇ ಊಹಿಸಲಾಗಿತ್ತು. ಆದರೆ ಆರ್‌ಸಿಬಿ ಬೌಲಿಂಗ್ ದಾಳಿಗೆ ಮಂಕಾದ ಪಂಜಾಬ್ ಬೇಗನೆ ವಿಕೆಟ್ ಒಪ್ಪಿಸಿ ಮೊದಲ ಇನ್ನಿಂಗ್ಸ್‌ನಲ್ಲೇ ಪಂದ್ಯವನ್ನು ಕೈಚೆಲ್ಲಿತ್ತು. ಪವರ್‌ಪ್ಲೇನಲ್ಲೇ ತನ್ನ 4 ವಿಕೆಟ್‌ಗಳನ್ನು ಕಳೆದುಕೊಂಡು ಆರಂಭಿಕ ಆಘಾತ ಅನುಭವಿಸಿತು. ಪ್ರಿಯನ್ಶ್ ಆರ್ಯ 7 (5) ರನ್, ಪ್ರಭ್‌ಸಿಮ್ರನ್ ಸಿಂಗ್ 18 (10) ರನ್, ಜೋಶ್ ಇಂಗ್ಲಿಸ್ 4 (7) ಹಾಗೂ ನಾಯಕ ಶ್ರೇಯಸ್ ಐಯ್ಯರ್ 2 (3) ರನ್ ಗಳಿಸಿ ಔಟ್ ಆದರು. ಈ ಮೂಲಕ 6 ಓವರ್‌ಗಳಲ್ಲಿ 48 ರನ್‌ಗೆ 4 ವಿಕೆಟ್ ಕಳೆದುಕೊಂಡಿತು.
ಹೀಗೆ ಆರಂಭದಲ್ಲೇ ವಿಕೆಟ್ ಉರುಳಿದ್ದನ್ನು ಕಂಡ ಕೋಚ್ ರಿಕಿ ಪಾಂಟಿಂಗ್ ಕೋಪದಲ್ಲಿ ಡಗ್‌ಔಟ್‌ನಿಂದ ಎದ್ದು ಪೆವಿಲಿಯನ್‌ನತ್ತ ಆಗ ತಾನೇ ಔಟ್ ಆಗಿ ಬಂದಿದ್ದ ನಾಯಕ ಶ್ರೇಯಸ್ ಐಯ್ಯರ್ ಜತೆ ಚರ್ಚಿಸಲು ತೆರಳಿದರು. ಸದ್ಯ ಈ ಫೊಟೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


